
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ783 ಮಂದಿಯ ರೌಡಿ ಶೀಟ್ ತೆರವು
Team Udayavani, Jan 23, 2023, 12:33 PM IST

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ783 ಮಂದಿಯ ರೌಡಿ ಶೀಟ್ ತೆರವು ಮಾಡಲಾಯಿತು.
ಮಂಗಳೂರಿನ ರೋಶನಿ ನಿಲಯ ಕಾಲೇಜಿನಲ್ಲಿ ನಡೆದ ಮಂಗಳೂರು ನಗರ ಪೊಲೀಸ್ ಪರಿವರ್ತನಾ ಸಭೆಯಲ್ಲಿ ಕಮಿಷನರ್ ಎನ್.ಶಶಿಕುಮಾರ್ ಈ ಬಗ್ಗೆ ಮಾಹಿತಿ ನೀಡಿದರು.
ಕಮಿಷನರೇಟ್ ವ್ಯಾಪ್ತಿಯ ಎಲ್ಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳು ಇದರಲ್ಲಿ ಸೇರಿದ್ದಾರೆ. ಈ ವ್ಯಾಪ್ತಿಯಲ್ಲಿ ಒಟ್ಟು 2305 ಮಂದಿ ರೌಡಿಗಳಿದ್ದಾರೆ. ಅದರಲ್ಲಿ 783 ಮಂದಿಯ ರೌಡಿ ಶೀಟ್ ತೆರವು ಮಾಡಲಾಗಿದೆ. ಇನ್ನೂ 1522 ಮಂದಿ ರೌಡಿ ಶೀಟರ್ ಗಳಿದ್ದಾರೆ.
ಇದನ್ನೂ ಓದಿ:ಕೋಟಿ ರೂ. ಲಂಚ ಕೊಟ್ಟು ಬಂದ ಪೊಲೀಸರು ವಸೂಲಿಗೆ ಇಳಿದಿದ್ದಾರೆ: ಸಿದ್ದರಾಮಯ್ಯ ಆಕ್ರೋಶ
ಕಳೆದ ವರ್ಷ ಒಂದು ಸಾವಿರಕ್ಕೂ ಅಧಿಕ ಮಂದಿಯ ರೌಡಿ ಶೀಟ್ ತೆರವುಗೊಳಿಸಲಾಗಿತ್ತು.
ಮುಂದೆ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಲು ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು, ಅಪರಾಧ ಪ್ರಕರಣಗಳನ್ನ ತಡೆಯಲು ನೆರವಾಗಲು ಎನ್.ಶಶಿಕುಮಾರ್ ಸೂಚನೆ ನೀಡಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
