ಖಾತೆ ಬದಲಾವಣೆಗೆ ಲಂಚ ಪಡೆದ ಗ್ರಾಮಕರಣಿಕ ಎಸಿಬಿ ಬಲೆಗೆ

Team Udayavani, Oct 10, 2019, 9:04 PM IST

kadaba1

ಪುತ್ತೂರು: ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ಕಡಬ ತಾಲೂಕಿನ ರಾಮಕುಂಜ ಮತ್ತು ಹಳೆನೇರಂಕಿ ಗ್ರಾಮದ ಗ್ರಾಮಕರಣಿಕ ದುರ್ಗಪ್ಪ (24) ಎಂಬವರನ್ನು ಗುರುವಾರ ಸಂಜೆ ಪುತ್ತೂರಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ರೆಡ್‌ ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

ರಾಮಕುಂಜ ಮತ್ತು ಹಳೆನೇರಂಕಿ ಎರಡು ಗ್ರಾಮಗಳ ಗ್ರಾಮಕರಣಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ, ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬತ್ತನಹಳ್ಳಿ ನಿವಾಸಿ ದುರ್ಗಪ್ಪ ಅವರು ಹಳೆನೇರಂಕಿ ಗ್ರಾಮದ ಕಾಪಿಕಾಡು ನಿವಾಸಿ ಶರತ್‌ ಪಿ.ಎನ್‌. ಅವರಿಂದ ಲಂಚದ ಪಡೆದುಕೊಳ್ಳುತ್ತಿದ್ದಾಗ ಬಂಧಿಸಲಾಗಿದೆ.

ಶರತ್‌ ಅವರು ತನ್ನ ದೊಡ್ಡಪ್ಪನ ಹೆಸರಿನಲ್ಲಿರುವ ಜಾಗವನ್ನು ತನ್ನ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಡುವಂತೆ ಫೆ. 20ರಂದು ಅರ್ಜಿ ಸಲ್ಲಿಸಿದ್ದರು. ಸೆ.12ರಂದು ಅರ್ಜಿದಾರರಿಗೆ ನೋಟಿಸ್‌ ನೀಡಲಾಗಿತ್ತು. ಬಳಿಕ ಖಾತೆ ಬದಲಾವಣೆಗೆ ಮಾಡಿಕೊಡಲು 20 ಸಾ. ರೂ. ನೀಡುವಂತೆ ಗ್ರಾಮಕರಣಿಕ ದುರ್ಗಪ್ಪ ಅರ್ಜಿದಾರರಲ್ಲಿ ಬೇಡಿಕೆ ಇಟ್ಟಿದ್ದರು.

ಈ ಪೈಕಿ 5 ಸಾ.ರೂ. ಅನ್ನು ಅರ್ಜಿದಾರರು ನೀಡಿದ್ದರೂ ದುರ್ಗಪ್ಪ ಮತ್ತೆ ಹಣಕ್ಕಾಗಿ ಬೇಡಿಕೆ ಮುಂದಿಟ್ಟು ಸತಾಯಿಸತೊಡಗಿದ್ದರು. ಕೊನೆಗೆ 8 ಸಾ. ರೂ. ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಶರತ್‌ ಅವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.

ಉಳಿಕೆ 3 ಸಾ. ರೂ. ಅನ್ನು ನೀಡುವಂತೆ ಸತಾಯಿಸುತ್ತಿದ್ದ ದುರ್ಗಪ್ಪ, ಗುರುವಾರ ಅರ್ಜಿದಾರ ಶರತ್‌ ಅವರನ್ನು ತನ್ನದೇ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಬಂದು ಪುತ್ತೂರು ನಗರದ ಮುಖ್ಯ ರಸ್ತೆಯ ಕರ್ಣಾಟಕ ಬ್ಯಾಂಕ್‌ ಬಳಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ. ಆತ  ಪಡೆದಿದ್ದ ಲಂಚದ ಹಣವನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ಭ್ರಷ್ಟಾಚಾರ ನಿಗ್ರಹ ದಳದ ಪ್ರಭಾರ ಎಸ್ಪಿ ಸುಧೀರ್‌ ಹೆಗ್ಡೆ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಶ್ಯಾಮ ಸುಂದರ್‌ ಮತ್ತು ಯೋಗೀಶ್‌ ಕುಮಾರ್‌, ಹೆಡ್‌ ಕಾನ್‌ಸ್ಟೆಬಲ್‌ಗ‌ಳಾದ ರಾಧಾಕೃಷ್ಣ, ರಾಧಾಕೃಷ್ಣ ಇ.ಎ., ಉಮೇಶ್‌, ರಾಕೇಶ್‌, ರಾಜೇಶ್‌, ಕಾನ್‌ಸ್ಟೆಬಲ್‌ಗ‌ಳಾದ ಪ್ರಶಾಂತ್‌, ವೈಶಾಲಿ ಮತ್ತು ಗಣೇಶ್‌ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.