ಗ್ರಾಮೀಣ ರಸ್ತೆ ನಿರ್ಮಾಣ ನಮ್ಮ ಸಾಧನೆ: ಅಭಯಚಂದ್ರ ಜೈನ್‌

Team Udayavani, May 5, 2018, 9:45 AM IST

Abhay-04-5.jpg

ಕಿನ್ನಿಗೋಳಿ: ‘ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಯಡಿ ಸುಮಾರು 100 ಕೋ.ರೂ. ವೆಚ್ಚದಲ್ಲಿ ನನ್ನ ಕ್ಷೇತ್ರದ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ರಸ್ತೆ ರೂಪಿಸಲಾಗಿದೆ. ಮೂಲ್ಕಿ ನಗರದಲ್ಲಿ ರಾ. ಹೆ. ಪಕ್ಕ 3 ಕೋ. ರೂ. ವೆಚ್ಚದಲ್ಲಿ ಬಸ್‌ ನಿಲ್ದಾಣಗಳಿಗೆ ಅನುದಾನ ಒದಗಿಸಲಾಗಿದೆ. ನ.ಪಂ. ಬಿಜೆಪಿ ಪಾಲಾಗಿದ್ದರೂ ಪಕ್ಷಭೇದ ಮರೆತು ಇಷ್ಟು ಅನುದಾನ ಒದಗಿಸಲಾಗಿದೆ. ನಮ್ಮ ಪಕ್ಷ ಪಕ್ಷಭೇದ ಮರೆತು ಅಭಿವೃದ್ಧಿ ಕೈಗೊಳ್ಳುವುದಕ್ಕೆ ಇದೇ ಸಾಕ್ಷಿ ಎಂದು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ, ಹಾಲಿ ಶಾಸಕ ಅಭಯಚಂದ್ರ ಜೈನ್‌ ಹೇಳಿದ್ದಾರೆ.

ಅವರು ಶುಕ್ರವಾರ ಸಂಜೆ ಕಿನ್ನಿಗೋಳಿಯ ಎಳತ್ತೂರು ಎಂಬಲ್ಲಿ ಪ್ರಚಾರ ಕೈಗೊಂಡು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ಅಭಿವೃದ್ಧಿ ಯಲ್ಲಿ ರಾಜಕೀಯ ಮಾಡುವುದಿಲ್ಲ ಎನ್ನುವುದಕ್ಕೆ ಇಲ್ಲಿನ ರಸ್ತೆಗಳೇ ಸಾಕ್ಷಿ. ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಕ್ಷೇತ್ರಕ್ಕೆ ರಸ್ತೆಗಳಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದಾಗ ತತ್‌ಕ್ಷಣ ಸ್ಪಂದಿಸಿ ಎಲ್ಲ ನೆರವು ನೀಡಿದ್ದಾರೆ. ಸುಮಾರು 100 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ರಸ್ತೆಯನ್ನು ಮಾಡಲಾಗಿದೆ ಎಂದರು.

ಕ್ರೀಡಾ ಕ್ಷೇತ್ರದಲ್ಲಿ ಮೂಲ್ಕಿ- ಮೂಡಬಿದಿರೆಗೆ ವಿಶ್ವಮಟ್ಟದ ಸ್ಥಾನಮಾನವನ್ನು ಕಲ್ಪಿಸಲು ಸಾಕಷ್ಟು ಶ್ರಮ ವಹಿಸಿದ್ದೇನೆ. ಮೂಡಬಿದ್ರೆ ಸರಕಾರಿ ಶಾಲಾ ಕಾಲೇಜು ಅಭಿವೃದ್ಧಿಪಡಿಸಲಾಗುತ್ತಿದೆ. ತೆಂಕಮಿಜಾರಿನಲ್ಲಿ ಜ್ಯೂನಿಯರ್‌ ಕಾಲೇಜು, ನೀರ್ಕೆರೆಯಲ್ಲಿ ಹೈಸ್ಕೂಲ್‌, ಹಳೆಯಂಗಡಿ ಸರಕಾರಿ ಕಾಲೇಜು ಅಭಿವೃದ್ಧಿಗೊಳಿಸಲಾಗಿದೆ. ಕಾಲೇಜಿಗೆ ಪ್ರತಿಷ್ಠಿತ ನ್ಯಾಕ್‌ ನಿಂದ ಬಿ ಗ್ರೇಡ್‌ ಪ್ರಮಾಣ ಪತ್ರ ಸಿಕ್ಕಿದೆ. ಇಲ್ಲಿರುವ 2 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅನೇಕ ಮಂದಿ ಶಿಕ್ಷಣ ಪಡೆಯುತ್ತಿದ್ದಾರೆ. ಮೂಲ್ಕಿ, ಐಕಳ, ಕಮ್ಮಾಜೆಯ ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ.  ಕಡಲ್ಕೆರೆ ನಿಸರ್ಗಧಾಮ ಅಭಿವೃದ್ಧಿಗೆ 2 ಕೋಟಿ ರೂ. ವಿನಿಯೋಗಿಸಿದೆ. ಬಸದಿಗಳು, ದೇವಸ್ಥಾನ, ಚರ್ಚ್‌ಗಳಿಗೆ ಧರ್ಮ ನಿರಪೇಕ್ಷವಾಗಿ ಅನುದಾನ ಒದಗಿಸಲಾಗಿದೆ.

ಕಂಬಳಕ್ಕೆ ಪ್ರೋತ್ಸಾಹ
ಕಂಬಳಕ್ಕೆ ಪ್ರೋತ್ಸಾಹ ನೀಡುತ್ತಾ ಬಂದಿದ್ದೇನೆ. ಕಂಬಳ ಪೆವಿಲಿಯನ್‌ ನಿರ್ಮಾಣ ಕ್ಷೇತ್ರಕ್ಕೆ ಸಾಕಷ್ಟು ಹೆಸರು ತಂದುಕೊಟ್ಟಿದೆ ಎಂದರು. ಮೂಡಬಿದಿರೆ ಸಮುದಾಯ ಆರೋಗ್ಯ ಕೇಂದ್ರ ರಾಜ್ಯದ ನಂ. 1 ಎಂಬ ಹೆಸರು ಪಡೆದಿದೆ. ಮೀನುಗಾರಿಕೆಗೆ ಪ್ರೋತ್ಸಾಹ ನೀಡಲಾಗಿದೆ. ಮೂಲ್ಕಿ, ಮೂಡಬಿದ್ರೆ, ಬಜಪೆ, ಕಿನ್ನಿಗೋಳಿಯಲ್ಲಿ ಒಳಚರಂಡಿ ಯೋಜನೆ ನಿರ್ಮಿಸಲು ಆಸಕ್ತಿ ಹೊಂದಿದ್ದೇನೆ ಎಂದರು. ಚಲನಚಿತ್ರ ನಟಿ ಚಿರಶ್ರೀ ಅಂಚನ್‌ ಕಾಂಗ್ರೆಸ್‌ ಪರ ಮತಯಾಚನೆ ನಡೆಸಿದರು. ರಾಜಶೇಖರ ಕೋಟ್ಯಾನ್‌, ಶಾಲೆಟ್‌ ಪಿಂಟೋ, ಆಸಿಫ್, ಅಶೋಕ ಪೂಜಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.