ರೈ|ರೆ|ಡಾ| ಗೀವರ್ಗೀಸ್‌ ಮಾರ್‌ ದಿವನ್ನಾಸಿಯೋಸ್‌ ನಿಧನ

Team Udayavani, Jan 17, 2018, 11:22 AM IST

17-21.jpg

ಕಡಬ: ಪುತ್ತೂರು ಮಲಂಕರ ಸಿರಿಯನ್‌ ಕೆಥೋಲಿಕ್‌ ಧರ್ಮಪ್ರಾಂತದ ಪ್ರಥಮ ಧರ್ಮಾಧ್ಯಕ್ಷ (ಬಿಷಪ್‌), ಮಲಂಕರ ಸಿರಿಯನ್‌ ಕೆಥೋಲಿಕ್‌ ಧರ್ಮಸಭೆಯ ಹಿರಿಯ ಧರ್ಮಾಧ್ಯಕ್ಷರಲ್ಲಿ ಓರ್ವರಾದ ರೈ|ರೆ| ಡಾ| ಗೀವರ್ಗೀಸ್‌ ಮಾರ್‌ ದಿವನ್ನಾಸಿಯೋಸ್‌ (67) ಅವರು ಕೇರಳದ ತಿರುವಲ್ಲಾದ ಪುಷ್ಪಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಜ. 16ರಂದು ನಿಧನಹೊಂದಿದರು.

ಕೇರಳದ ತಿರುವಲ್ಲಾ ಮೂಲದ ಒಟ್ಟತೆಂಙಿಲ್‌ ವರ್ಗೀಸ್‌ ಹಾಗೂ ಮರಿಯಮ್ಮ ದಂಪತಿಯ ಪುತ್ರನಾಗಿ 1950 ನ. 1ರಂದು ಜನಿಸಿದ ಡಾ| ದಿವನ್ನಾಸಿಯೋಸ್‌ ಅವರ ಕುಟುಂಬವು ಕರ್ನಾಟಕಕ್ಕೆ ವಲಸೆ ಬಂದು ಆರಂಭದಲ್ಲಿ ಪುತ್ತೂರು ತಾಲೂಕಿನ ಎಂಜಿರ ಹಾಗೂ ಆ ಬಳಿಕ ಇಚ್ಲಂಪಾಡಿಯಲ್ಲಿ ನೆಲೆ ನಿಂತಿತು. 1978 ಎಪ್ರಿಲ್‌ 20ರಂದು ಬೆನಡಿಕ್ಟ್ ಮಾರ್‌ ಗ್ರಿಗೋರಿಯೋಸ್‌ ಮಹಾ ಧರ್ಮಾಧ್ಯಕ್ಷ
ರಿಂದ ಯಾಜಕಾಭಿಷೇಕ ಸ್ವೀಕರಿಸಿದ ಅವರು 1997ರಲ್ಲಿ ಬತ್ತೇರಿ ಧರ್ಮಪ್ರಾಂತದ ದ್ವಿತೀಯ ಧರ್ಮಾಧ್ಯಕ್ಷರಾಗಿ ಪೀಠಾರೋಹಣಗೈದಿದ್ದರು. ಅನಂತರ 2010ರಲ್ಲಿ ನೂತನವಾಗಿ ಸ್ಥಾಪಿತವಾದ ಪುತ್ತೂರು ಧರ್ಮಪ್ರಾಂತದ ಪ್ರಥಮ ಧರ್ಮಾಧ್ಯಕ್ಷರಾಗಿ ನಿಯುಕ್ತಿಗೊಂಡು ಭೌಗೋಳಿಕವಾಗಿ ವಿಶಾಲವಾದ ವ್ಯಾಪ್ತಿಯನ್ನು ಹೊಂದಿರುವ ಧರ್ಮಪ್ರಾಂತಕ್ಕೆ ಭದ್ರವಾದ ಬುನಾದಿ ಹಾಕಿಕೊಡಲು ಶ್ರಮಿಸಿದ್ದರು.

2017ರ ಜನವರಿಯಲ್ಲಿ ಅನಾರೋಗ್ಯ ಕಾರಣದಿಂದಾಗಿ ಧರ್ಮಾಧ್ಯಕ್ಷ ಹುದ್ದೆಯಿಂದ ನಿವೃತ್ತಿ ಹೊಂದಿ ತಿರುವಲ್ಲಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಸಂಗೀತ ಪ್ರೇಮಿಯಾಗಿದ್ದ ಅವರು ರೋಮಿನ ಗ್ರಿಗೋರಿಯನ್‌ ವಿಶ್ವವಿದ್ಯಾನಿಲಯದಿಂದ ಶ್ರೀ ರಾಮಕೃಷ್ಣ ಪರಮಹಂಸರ ಆಧ್ಯಾತ್ಮಿಕತೆ ಎಂಬ ವಿಷಯದಲ್ಲಿ ಪ್ರಬಂಧ ಮಂಡಿಸಿ ಡಾಕ್ಟರೇಟ್‌ ಪದವಿ ಪಡೆದಿದ್ದರು.

ಮೃತರ ಅಂತ್ಯವಿಧಿ ಜ. 18ರಂದು ಅಪರಾಹ್ನ 2 ಗಂಟೆಗೆ ತಿರುವಲ್ಲಾ ಸೈಂಟ್‌ ಜೋನ್ಸ್‌ ಕೆಥೆಡ್ರಲ್‌ನಲ್ಲಿ ನೆರವೇರಲಿದೆ ಎಂದು ಪುತ್ತೂರು ಧರ್ಮಪ್ರಾಂತದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.