ಶಬರಿಮಲೆ: ಕೋವಿಡ್‌ ನಿಬಂಧನೆಗಳಲ್ಲಿ ಸಡಿಲಿಕೆ

Team Udayavani, Dec 13, 2021, 6:15 AM IST

ಶಬರಿಮಲೆ: ಕೋವಿಡ್‌ ನಿಬಂಧನೆಗಳಲ್ಲಿ ಸಡಿಲಿಕೆ

ಶಬರಿಮಲೆ/ಕಾಸರಗೋಡು,: ಕೋವಿಡ್‌ ಹಿನ್ನೆಲೆಯಲ್ಲಿ ಶಬರಿಮಲೆ ಯಾತ್ರೆಗೆ ವಿಧಿ ಸಲಾಗಿದ್ದ ಕೋವಿಡ್‌ ನಿಬಂಧನೆಗಳಲ್ಲಿ ಕೆಲವೊಂದು ಸಡಿಲಿಕೆ ಮಾಡಲಾಗಿದೆ.

ಕೇರಳದಲ್ಲಿ ಕೋವಿಡ್‌ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಬರಿಮಲೆ ಯಾತ್ರೆಗೆ ಕೆಲವೊಂದು ನಿರ್ಬಂಧಗಳನ್ನು ಸಡಿಲಿಸಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಮತ್ತು ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್‌ ಅವರ ನಡುವೆ ನಡೆದ ಚರ್ಚೆಯ ಬಳಿಕ ನಿರ್ಧರಿಸಿದೆ.

ನೀಲಿಮಲೆ ಮತ್ತು ಅಪಾಚೆ ಮೇಡುಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪಂಪಾದಿಂದ ನೀಲಿಮಲೆ, ಅಪಾಚೆ ಮೇಡು ಹಾಗು ಮರಕೂಟಂ ಮೂಲಕ ಶಬರಿಮಲೆಗೆ ಸಾಂಪ್ರದಾಯಿಕ ಮಾರ್ಗವನ್ನು ಭಕ್ತರಿಗೆ ತೆರೆಯಲು ನಿರ್ಧರಿಸಲಾಗಿದೆ.

ಪಂಪಾನದಿಯಲ್ಲಿ ಯಾರಿಗೂ ಸ್ನಾನಕ್ಕೆ ಅವಕಾಶವಿಲ್ಲ. ಅಲ್ಲದೆ ಶಬರಿಮಲೆ ಸನ್ನಿಧಾನ, ಪಂಪಾ ಗಣಪತಿ ಸನ್ನಿಧಾನ ಸೇರಿದಂತೆ ಎಲ್ಲಿಯೂ ಭಕ್ತರಿಗೆ ತಂಗಲು ಅವಕಾಶ ನೀಡಲಾಗಿಲ್ಲ. ಸಂಜೆ 7ರಿಂದ ರಾತ್ರಿ 1ರ ತನಕ ನೀಲಕ್ಕಲ್‌ನಿಂದ ಪಂಪಾ ಕಡೆಗೆ ಸಂಚಾರವನ್ನು ನಿಷೇಧಿಸಲಾಗಿದೆ.

ಭಕ್ತರು ಆನ್‌ಲೈನ್‌ ಟಿಕೆಟ್ , ಕೋವಿಡ್‌ 2 ಡೋಸ್‌ ಲಸಿಕೆ ಪಡೆದ ಪ್ರಮಾಣ ಪತ್ರ ಅಥವಾ RTPCR Negative ರಿಪೋರ್ಟ್‌ ಕಡ್ಡಾಯವಾಗಿದೆ. ನೀಲಕಲ್‌ ನಲ್ಲಿ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಭಕ್ತರಿಗೆ ಅನುಮತಿ ನೀಡಲಾಗುತ್ತದೆ. ನೀಲಕಲ್‌ ಮಹಾದೇವ ದೇವಸ್ಥಾನದ ಆವರಣ ದಲ್ಲಿ ಮಧ್ಯಾಹ್ನ 12.30ಯಿಂದ ಅನ್ನದಾನದ ವ್ಯವಸ್ಥೆಯನ್ನು ದೇವಸ್ಥಾನ ಹಾಗೂ ತಿರುವಾಂಕೂರು ದೇವಸ್ವಂ ಬೋರ್ಡ್‌ ವತಿಯಿಂದ ಮಾಡಲಾಗಿದೆ.ಸನ್ನಿ ಧಾನದಲ್ಲೂ ಭಕ್ತರಿಗೆ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ.ಆದರೆ ಭಕ್ತರಿಗೆ ಭಸ್ಮಕೊಳ,ಒರಿಕುಳಿ ತೀರ್ಥದಲ್ಲಿ ಸ್ನಾನ ಮಾಡಲು ನಿರ್ಬಂದ ಹೇರಲಾಗಿದೆ.

ಅಭಿಷೇಕಕ್ಕೆ ಅವಕಾಶ ಇಲ್ಲ
ಸನ್ನಿಧಾನದಲ್ಲಿ ಭಕ್ತರಿಗೆ ನೇರವಾಗಿ ತುಪ್ಪಾಭಿಷೇಕ ಮಾಡಲು ಅವಕಾಶವಿಲ್ಲ. ದೇವಸ್ಥಾನದ ಕೌಂಟರ್‌ನಲ್ಲಿ ತುಪ್ಪ ನೀಡಿ ರಶೀದಿ ಪಡೆದುಕೊಂಡು ಸನ್ನಿಧಾನ ಪೊಲೀಸ್‌ ಠಾಣೆಯ ಬಳಿಯಿಂದ ರಶೀದಿ ಹಾಗೂ ತುಪ್ಪದ ಪಾತ್ರೆಯ ಗುರುತು ಹೇಳಿ ಅಭಿಷೇಕ ಮಾಡಿದ ತುಪ್ಪ ಪಡೆದುಕೊಳ್ಳಬಹುದಾಗಿದೆ.

ಸನ್ನಿಧಾನದಲ್ಲಿ ಭಕ್ತರಿಗೆ ನೀಡ ಲಾಗುವ ಅಪ್ಪಂ ಪ್ರಸಾದದ ಕೊರತೆ ಇದೆ. ಬೇಡಿಕೆಯಷ್ಟೂ ಅಪ್ಪಂ ಭಕ್ತರಿಗೆ ದೊರಕುತ್ತಿಲ್ಲ.ಅರವಣ ಪ್ರಸಾದ ಬೇಡಿಕೆಯಷ್ಟೂ ಲಭ್ಯವಿದೆ.

ಇದನ್ನೂ ಓದಿ:ಮಧ್ಯಪ್ರದೇಶದ 5 ಕಡೆ ಡ್ರೋನ್‌ ತಂತ್ರಜ್ಞಾನ ಶಾಲೆ: ಜ್ಯೋತಿರಾಧಿತ್ಯ ಸಿಂಧಿಯಾ

ಪ್ಲಾಸ್ಟಿಕ್‌ ಸಂಪೂರ್ಣ ನಿಷೇಧ
ಪುಣ್ಯಂ ಪೂಂಗಾವನ ಅಭಿಯಾನದಡಿಯಲ್ಲಿ ಪ್ಲಾಸ್ಟಿಕ್‌ ಮುಕ್ತ ಶಬರಿಮಲೆ ಯಾತ್ರೆಗೆ ಕೇರಳ ಅರಣ್ಯ ಇಲಾಖೆ ಮತ್ತು ತಿರುವಾಂಕೂರು ದೇವಸ್ವಂ ಬೋರ್ಡ್‌ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಪಂಪಾದಿಂದ ಸನ್ನಿಧಾನದವರೆಗೂ ಪ್ಲಾಸ್ಟಿಕ್‌ ಬಾಟಲಿ, ಲಕೋಟೆ ಸಹಿತ ಯಾವುದೇ ಪ್ಲಾಸ್ಟಿಕ್‌ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಪ್ಲಾಸ್ಟಿಕ್‌ ಮುಕ್ತ ಶಬರಿಮಲೆಯಾತ್ರೆ ಭಕ್ತರಿಗೂ ಸಂತಸ ತಂದಿದೆ.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.