ರಾಜೀನಾಮೆ ವಾಪಸ್‌ಗೆ ಆಗ್ರಹ; ಒಲ್ಲದ ಸೆಂಥಿಲ್‌

Team Udayavani, Sep 9, 2019, 5:56 AM IST

ಮಂಗಳೂರು: ಶಶಿಕಾಂತ್‌ ಸೆಂಥಿಲ್‌ ಅವರನ್ನು ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಹಿತೈಷಿಗಳು ರವಿವಾರ ಜಿಲ್ಲಾಧಿಕಾರಿ ಬಂಗಲೆ ಯಲ್ಲಿ ಭೇಟಿ ಮಾಡಿ ರಾಜೀನಾಮೆ ವಾಪಸ್‌ ಪಡೆಯುವಂತೆ ಆಗ್ರಹಿಸಿದರು.

ರಾಜೀನಾಮೆ ಹಿಂದೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ ಸೆಂಥಿಲ್‌, ನಾನು ನಂಬಿದ ತಣ್ತೀ ಸಿದ್ಧಾಂತಗಳಿಗೆ ವಿರುದ್ಧವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜೀನಾಮೆ ಬಳಿಕ ಅವರು ಶುಕ್ರವಾರ, ಶನಿವಾರ ಯಾರ ಸಂಪರ್ಕಕ್ಕೂ ಲಭಿಸಿರಲಿಲ್ಲ. ಶನಿವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ, ನೂತನ ಜಿಲ್ಲಾಧಿಕಾರಿ ಜತೆಗೆ ಮಾತುಕತೆ ನಡೆಸಿದ್ದರು. ರವಿವಾರ ಜಿಲ್ಲಾಧಿಕಾರಿ ಬಂಗ್ಲೆಯಲ್ಲಿದ್ದರು.

ಇಂದು ಚೆನ್ನೈಗೆ?
ರವಿವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಅಧಿಕಾರಿಗಳು, ಹಿತೈಷಿಗಳೊಂದಿಗೆ ಮಾತುಕತೆ ನಡೆಸಿರುವ ಸೆಂಥಿಲ್‌ ಸಂಜೆ ಖಾಸಗಿ ಕಾರಿನಲ್ಲಿ ಬಂಗಲೆಯಿಂದ ತೆರಳಿದ್ದರು. ಹುಟ್ಟೂರು ಚೆನ್ನೈಗೆ ಸೋಮ ವಾರ ತೆರಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕೆಲವೇ ದಿನಗಳಲ್ಲಿ ತೀರ್ಮಾನ
ಹಿತೈಷಿಗಳ ಜತೆಗೆ ಮಾತನಾಡಿರುವ ಸೆಂಥಿಲ್‌ ಮುಂದಿನ ಕಾರ್ಯಯೋಜನೆಯ ಬಗ್ಗೆ ಕೆಲವೇ ದಿನದಲ್ಲಿ ನಿರ್ಧಾರ ಕೈಗೊಳ್ಳಲಿದ್ದು, ಮತ್ತೆ ಕರ್ನಾಟಕಕ್ಕೆ ಬರುವ ಬಗ್ಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಗಳಿಗೆ ಉತ್ತರಿಸಲಾರೆ
ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸೆಂಥಿಲ್‌, ಆರೋಪಗಳಿಗೆ ತಲೆಕೆಡಿಸುವುದಿಲ್ಲ. ಪ್ರಾಮಾಣಿಕವಾಗಿ, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿರುವ ವಿಶ್ವಾಸ ನನಗಿದೆ. ಜಿಲ್ಲಾಧಿಕಾರಿಯಾಗಿದ್ದಾಗ ಅಕ್ರಮ ಮರಳುಗಾರಿಕೆ ವಿರುದ್ಧ ಕಠಿನ ಕ್ರಮ ಕೈಗೊಂಡಿರುವುದು ನಿಜ. ಅದು ಒಪ್ಪಿಗೆಯಾಗದ ಕೆಲವರು ಈಗ ಸಲ್ಲದ ಆರೋಪ ಮಾಡುತ್ತಿದ್ದಾರೆ. ಅದಕ್ಕೆಲ್ಲ ಉತ್ತರಿಸುವುದಿಲ್ಲ ಎಂದಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ