ಮಂಗಳೂರು: ಸ್ಯಾಕ್ಸೋಫೋನ್ ವಾದಕಿ ನೇಣು ಬಿಗಿದು ಆತ್ಮಹತ್ಯೆ; ಆರ್ಥಿಕ ಮುಗ್ಗಟ್ಟಿನ ಶಂಕೆ
Team Udayavani, May 18, 2022, 7:02 PM IST
ಮಂಗಳೂರು: ಸ್ಯಾಕ್ಸೋಫೋನ್ ವಾದಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಕ್ತಿನಗರದ ಫ್ಲ್ಯಾಟ್ ವೊಂದರಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಶಕ್ತಿನಗರದ ಫ್ಲ್ಯಾಟ್ ನಲ್ಲಿ ಪತಿ, ತಂದೆ, ತಾಯಿ ಮತ್ತು ಮಗುವಿನೊಂದಿಗೆ ವಾಸವಿದ್ದ, ಮೂಲತಃ ಮುಲ್ಕಿಯವರಾದ ಸ್ಯಾಕ್ಸೊಫೋನ್ ವಾದಕಿ ಸುಜಾತಾ ದೇವಾಡಿಗ (29) ಆತ್ಮಹತ್ಯೆ ಮಾಡಿಕೊಂಡವರು.
ತಲೆ ನೋವು ಅಗುತ್ತಿದೆ ಎಂದು ಹೇಳಿ ಕೋಣೆಗೆ ಹೋದವರು ಹೊರಗೆ ಬಾರದಿದ್ದಾಗ ಮನೆಯವರು ಕೋಣೆಯಲ್ಲಿ ನೋಡಿದಾಗ ಘಟನೆ ಗೊತ್ತಾಗಿದೆ.
ಆರ್ಥಿಕ ಮುಗ್ಗಟ್ಟಿನ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಕಂಕನಾಡಿ ಪೊಲೀಸರು ತಿಳಿಸಿದ್ದಾರೆ.