ಕೋವಿಡ್ 19 ವೈರಸ್ ಪರಿಹಾರ:7 SCDCC ಬ್ಯಾಂಕ್‌ನಿಂದ 1 ಕೋ.ರೂ ದೇಣಿಗೆ
Team Udayavani, Mar 27, 2020, 12:31 PM IST
ಮಂಗಳೂರು: ಕೋವಿಡ್ 19 ವೈರಸ್ ವಿರುದ್ಧ ಸರಕಾರಗಳು ಕೈಗೊಳ್ಳುತ್ತಿರುವ ಕಾರ್ಯಗಳಿಗೆ ಕೈ ಜೋಡಿಸುವುದಕ್ಕಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 1 ಕೋ.ರೂ., ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ 50 ಲಕ್ಷ ರೂ. ಮತ್ತು ಎಸ್‌ಸಿಡಿಸಿಸಿ ಬ್ಯಾಂಕ್ ನೌಕರರ ಒಂದು ದಿನದ ವೇತನವನ್ನು ನೀಡಲಾಗುವುದು. ಅಲ್ಲದೆ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ನಿಂದ 50 ಸಾವಿರ ಮಾಸ್ಕ್ ನೀಡಲಾಗುವುದು ಎಂದು ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಕೋವಿಡ್ 19 ವೈರಸ್ ವಿರುದ್ಧ ಕಾರ್ಯಾಚರಣೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸಹಕಾರ ಸಂಘ, ಸಂಸ್ಥೆಗಳು, ಉದ್ಯಮಿಗಳು ಮತ್ತು ಜನತೆ ಹೆಚ್ಚಿನ ಆರ್ಥಿಕ ನೆರವನ್ನು ನೀಡುವಂತೆ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಕೋರಿದ್ದಾರೆ.
ಕೊರೊನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸುವಂತೆ ಈಗಾಗಲೇ ಮುಖ್ಯಮಂತ್ರಿ ಮತ್ತು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮನವಿ ಮಾಡಿದ್ದು, ಸಹಕಾರಿಗಳು, ಸಹಕಾರಿ ಸಂಸ್ಥೆಗಳು, ಉದ್ಯಮಿಗಳು ಮತ್ತು ಜನತೆ ಒಗ್ಗೂಡಿ ಗರಿಷ್ಠ ದೇಣಿಗೆಯನ್ನು ‘SCDCC Bank, Kodialbail Branch A/C No. 505/757 Covid-19 Relief Fund’ ಖಾತೆಗೆ ನಗದು/ ಚೆಕ್/ ಆರ್‌ಟಿಜಿಎಸ್ ಮುಖಾಂತರ ನೀಡಬಹುದು. ಸಂಗ್ರಹವಾದ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಹಸ್ತಾಂತರಿಸ ಲಾಗುವುದು ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಬ್ಯಾಂಕ್ ವ್ಯವಹಾರ ಸಮಯ ಬದಲು
ಕೊರೊನಾ ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ 105 ಶಾಖೆಗಳ ವ್ಯವಹಾರದ ಸಮಯವನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ನಿಗದಿಗೊಳಿಸಲಾಗಿದೆ. ಅವಿಭಜಿತ ದ.ಕ. ಸಹಕಾರ ಸಂಘಗಳಿಗೂ ಇದೇ ಸಮಯದಲ್ಲಿ ವ್ಯವಹರಿಸುವಂತೆ ಸೂಚಿಸಲಾಗಿದೆ.
ರೈತರಿಗೆ ಅಡಿಕೆ ಅಡಮಾನ ಸಾಲ ನೀಡುವುದು ಮತ್ತು ಪಡಿತರ ವ್ಯವಸ್ಥೆಯನ್ನು ಸಮರ್ಪಕವಾಗಿ ನೀಡುವ ಜತೆಗೆ ಸಹಕಾರ ಸಂಸ್ಥೆಗಳು ಬ್ಯಾಂಕಿಂಗ್ ಸೇವೆಯನ್ನು ನಿಗದಿತ ಸಮಯದಲ್ಲಿ ನೀಡುವಂತೆಯೂ ರಾಜೇಂದ್ರ ಕುಮಾರ್ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ