ಶಾಲಾ ಬಸ್‌ನಿಂದ ಎಸೆಯಲ್ಪಟ್ಟು ವಿದ್ಯಾರ್ಥಿ ಸಾವು


Team Udayavani, Nov 11, 2018, 9:38 AM IST

gagan.jpg

ಪುತ್ತೂರು/ಬಡಗನ್ನೂರು: ಸಂಚರಿಸುತ್ತಿದ್ದ ಶಾಲಾ ಬಸ್‌ನಿಂದ ವಿದ್ಯಾರ್ಥಿ ಎಸೆಯಲ್ಪಟ್ಟು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದ ಪಟ್ಲಡ್ಕ ಎಂಬಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದೆ.
ಬಡಗನ್ನೂರು ಗ್ರಾಮದ ಅಣಿಲೆ ನಿವಾಸಿ ಪದ್ಮನಾಭ ಆಳ್ವ – ಪ್ರೇಮ ದಂಪತಿ ಪುತ್ರ ಗಗನ್‌ ಆಳ್ವ (15) ಮೃತ ಬಾಲಕ. ಈತ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರಾಯೋಜಿತ ಈಶ್ವರ ಮಂಗಲ ಗಜಾನನ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ.

ಪ್ರತಿನಿತ್ಯ ಶಾಲೆಯ ಬಸ್‌ನಲ್ಲೇ ಹೋಗಿ ಬರುತ್ತಿದ್ದ ಗಗನ್‌ ಆಳ್ವ ಶನಿವಾರ ಮಧ್ಯಾಹ್ನ ಶಾಲೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈಶ್ವರಮಂಗಲ -ಪಟ್ಲಡ್ಕ ಸಂಪರ್ಕ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಈಶ್ವರಮಂಗಲದಿಂದ ಪುಳಿತ್ತಡಿ – ಪಟ್ಲಡ್ಕ – ಅಂಬಟೆಮೂಲೆಯಾಗಿ ತೆರಳುತ್ತಿದ್ದ ಶಾಲಾ ಬಸ್‌ನ ಬಾಗಿಲ ಬಳಿ ಗಗನ್‌ ನಿಂತು ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. 

ಏಕಾಏಕಿ ತೆರೆದ ಬಾಗಿಲು
ಪಟ್ಲಡ್ಕ ತಿರುವಿನಲ್ಲಿ ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡಿದ್ದು, ಗಗನ್‌ ರಸ್ತೆಗೆ ಎಸೆಯಲ್ಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡ ಅವನನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿಲ್ಲ. ಈಶ್ವರಮಂಗಲದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕೊಂಡೊಯ್ಯಲಾಯಿತು. ತಲೆಯ ಭಾಗಕ್ಕೆ ಬಲವಾಗಿ ಏಟು ಬಿದ್ದ ಕಾರಣ ಗಗನ್‌ ದಾರಿ ಮಧ್ಯೆ ಮೃತಪಟ್ಟ ಎನ್ನಲಾಗಿದೆ.

ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಶಾಸಕ ಸಂಜೀವ ಮಠಂದೂರು, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ವೈ. ಶಿವರಾಮಯ್ಯ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಕಾಂಗ್ರೆಸ್‌ ಮುಖಂಡ ಕಾವು ಹೇಮನಾಥ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದರು.
ಮೃತ ವಿದ್ಯಾರ್ಥಿ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾನೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಸಂಜೀವ ಮಠಂದೂರು, ಮೃತ ಬಾಲಕನ ಮನೆಯವರಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು. 

ಎಚ್ಚರಿಕೆ ನೀಡಿದರೂ ದುರಂತ 
ಇತ್ತೀಚೆಗಷ್ಟೇ ಪುತ್ತೂರು ತಾ.ಪಂ. ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖಾ ವ್ಯಾಪ್ತಿಯ ಉಪಸಮಿತಿಗಳ ಸಭೆಯೊಂದನ್ನು ಕರೆಯಲಾಗಿತ್ತು. ಇದರಲ್ಲಿ ಖಾಸಗಿ ಶಾಲಾ ಬಸ್‌ಗಳು ನಿಯಮ ಉಲ್ಲಂಘನೆ ಮಾಡುತ್ತಿವೆ ಎಂಬ ಬಗ್ಗೆ ಆಕ್ರೋಶವೂ ವ್ಯಕ್ತವಾಗಿತ್ತು. ಈ ಬಗ್ಗೆ ಕಾನೂನು ಕ್ರಮಕ್ಕೆ ಒತ್ತಾಯವೂ ಕೇಳಿಬಂದಿತ್ತು. ವಿದ್ಯಾರ್ಥಿಗಳಿಗೆ ಅಪಾಯ ಆಗುವ ಶಾಲಾ ವಾಹನಗಳನ್ನು ತತ್‌ಕ್ಷಣ ಸರಿ ಪಡಿಸುವಂತೆ ಸಭೆಯಲ್ಲಿ ಎಚ್ಚರಿಕೆ ನೀಡಿದ್ದ ಅಧಿಕಾರಿಗಳು, ವಾರದೊಳಗೆ ಸಂಬಂಧಪಟ್ಟ ಶಾಲೆಗಳಿಗೆ ನೋಟಿಸ್‌ ಜಾರಿಗೊಳಿಸುವುದಾಗಿ ತಿಳಿಸಿದ್ದರು. ಈಗ ದುರಂತ ಘಟಿಸಿದೆ. ಸ್ಥಳೀಯರು ಬಸ್‌ನ ಗುಣಮಟ್ಟದ ಬಗ್ಗೆ ಸಂದೇಹ ವ್ಯಕ್ತಪಡಿಸಿದ್ದರಿಂದ ಸಾರಿಗೆ ಇಲಾಖೆ ಈ ಬಗ್ಗೆ ಪರಿಶೀಲಿಸುವ ಸಾಧ್ಯತೆಯಿದೆ. 

ಸುಪ್ರೀಂ ಕೋರ್ಟ್‌ನ ಆದೇಶದಂತೆ ಪ್ರತಿ ಶಾಲಾ – ಕಾಲೇಜುಗಳ ಬಸ್‌ಗಳು 18 ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಬೇಕು. ಇದರ ಬಗ್ಗೆ ಹಿಂದಿನ ವರ್ಷವೇ ತಾಲೂಕಿನ ಎಲ್ಲ ಶಾಲಾ – ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಎಲ್ಲ ಮಾರ್ಗಸೂಚಿಗಳನ್ನು ಅಳವಡಿಸಲಾಗಿದೆ ಎಂದು ಶಾಲಾ – ಕಾಲೇಜುಗಳು ಲಿಖೀತವಾಗಿ ತಿಳಿಸಿವೆ. ಆದರೂ ಈ ಘಟನೆ ಹೇಗೆ ನಡೆಯಿತು ಎಂದೇ ತಿಳಿಯುತ್ತಿಲ್ಲ. ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಲಾಗುವುದು. ವಾಹನದ ಗುಣಮಟ್ಟದ ಬಗ್ಗೆ ಸಾರಿಗೆ ಇಲಾಖೆ ಪರಿಶೀಲನೆ ನಡೆಸಬೇಕಿದೆ.
ವೈ. ಶಿವರಾಮಯ್ಯ,  ಡಿಡಿಪಿಐ, ದ.ಕ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.