ಎಸ್‌ಡಿಪಿಐ ಅಲ್ಪಸಂಖ್ಯಾಕ, ದಲಿತರ ಪರ: ಇಲ್ಯಾಸ್‌

Team Udayavani, Apr 14, 2019, 6:00 AM IST

j-21

ಉಪ್ಪಿನಂಗಡಿಯಲ್ಲಿ ಎಸ್‌ಡಿಪಿಐ ಚುನಾವಣಾ ಪ್ರಚಾರ ಸಭೆ ನಡೆಯಿತು.

ಉಪ್ಪಿನಂಗಡಿ: ಕಾಂಗ್ರೆಸ್‌ ಪಕ್ಷ ಭ್ರಷ್ಟಾಚಾರ ಮತ್ತು ಮೋಸ ಮಾಡುತ್ತಲೇ ಜನರಿಂದ ದೂರವಾಗಿ, ನಿರ್ನಾಮದ ಹಂತಕ್ಕೆ ಬಂದು ನಿಂತಿದೆ. ನರೇಂದ್ರ ಮೋದಿ ಅವರೂ ಚೌಕಿದಾರ ಅಲ್ಲ, ದೇಶವನ್ನು ಕೊಳ್ಳೆ ಹೊಡೆಯುವವರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಇಲ್ಯಾಸ್‌ ತುಂಬೆ ಹೇಳಿದರು.

ಪಟ್ಟಣದಲ್ಲಿ ಶನಿವಾರ ಎಸ್‌ಡಿಪಿಐ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಕ್ರೆçಸ್ತ ಸನ್ಯಾಸಿನಿಯರ ಮೇಲೆ ಅತ್ಯಾಚಾರ ನಡೆದಾಗ, ಟಿ.ವಿ. ನಿರೂಪಕ ಪ್ರವಾದಿ ನಿಂದನೆ ಮಾಡಿದಾಗ ಅದನ್ನು ಖಂಡಿಸಿ, ಅದರ ವಿರುದ್ಧವಾಗಿ ಹೋರಾಟ ಮಾಡಿದ್ದು ಎಸ್‌ಡಿಪಿಐ. ರೈತರು, ದಲಿತರ, ಕ್ರೆçಸ್ತ, ಅಲ್ಪಸಂಖ್ಯಾಕರ ರಕ್ಷಣೆಯ ಜತೆಗೆ ಅವರ ಪರವಾಗಿ ಹೋರಾಟ ಮಾಡುವ ಪಕ್ಷ ನಮ್ಮದು ಎಂದರು.

ದೇಶದಲ್ಲಿ ಮೋದಿ ಅಲೆ ಇದೆ ಎಂದು ಬಿಂಬಿಸಲಾಗುತ್ತಿದೆ. ಕೇವಲ ಭಾಷಣ ಮಾಡುವುದರಿಂದ ದೇಶ ಅಭಿವೃದ್ಧಿ ಆಗುವುದಿಲ್ಲ. ನೋಟು ಬ್ಯಾನ್‌ನಿಂದಾಗಿ ದೇಶದಲ್ಲಿ ಮೋದಿ ವಿರುದ್ಧ ಕಣ್ಣೀರ ಅಲೆ ಇದೆ. ಬಡ ರೈತರ ಸಾಲ ಮನ್ನಾ ಮಾಡದ ಮೋದಿ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ ಎಂದು ಟೀಕಿಸಿದರು. ಜಿಲ್ಲೆಯ ಅಭಿವೃದ್ಧಿಗಾಗಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ತಮಗೆ ಮತ ನೀಡುವಂತೆ ಮನವಿ ಮಾಡಿದರು.

ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಅಲೊ#àನ್ಸಾ ಪ್ರಾಂಕ್ಸ್‌ ಮಾತನಾಡಿ, ಚರ್ಚ್‌ ಧಾಳಿ ನಡೆದಾಗ ಯಾವೊಬ್ಬ ಕಾಂಗ್ರೆಸಿಗರೂ ಮಾತನಾಡಲಿಲ್ಲ. ಆಗ ಹೋರಾಟ, ಪ್ರತಿಭಟನೆ ಮಾಡಿದ್ದು ಎಸ್‌ಡಿಪಿಐ. ಬಿಜೆಪಿ ಪಕ್ಕಾ ಹಿಂದುತ್ವ ಪ್ರತಿಪಾದಿಸುತ್ತಿದೆ, ಕಾಂಗ್ರೆಸ್‌ ಮೃದು ಹಿಂದುತ್ವ ಹೊಂದಿದೆ. ಆದರೆ ಎಸ್‌ಡಿಪಿಐ ಮಾನವತ್ವವನ್ನು ಹೊಂದಿದೆ ಎಂದರು.

ದ.ಕ. ಜಿಲ್ಲಾ ಎಸ್‌ಡಿಪಿಐ ಸದಸ್ಯ ಆನಂದ ಮಿತ್ತಬೈಲ್‌ ಮಾತನಾಡಿ, 5 ವರ್ಷಗಳ ಕಾಲ ಮನುಸ್ಮತಿ ಧೋರಣೆಯ ಕೋಮು ಶಕ್ತಿ ದೇಶವನ್ನು ಆಳಿ ದೇಶದ ಎಲ್ಲೆಡೆ ಅತ್ಯಾಚಾರ, ಕಗ್ಗೊಲೆಗಳೇ ನಡೆದು ಹೋದವು. ಆದರೆ ನಮಗೆ ಸಹೋದರತೆ, ಏಕತೆಯ ಭಾತೃತ್ವದ ಅಂಬೇಡ್ಕರ್‌ ಸ್ಮತಿ ಆಧಾರದ ಆಡಳಿತ ಬೇಕಾಗಿದೆ, ಅದು ಎಸ್‌ಡಿಪಿಐಯಿಂದ ಮಾತ್ರ ಸಾಧ್ಯ ಎಂದರು.

ವೇದಿಕೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಎಸ್‌ಡಿಪಿಐ ಅಧ್ಯಕ್ಷ ಕೆ.ಎ. ಸಿದ್ದಿಕ್‌, ರಾಷ್ಟ್ರೀಯ ಸಮಿತಿ ಸದಸ್ಯ ಅಬ್ದುಲ್‌ ಲತೀಫ್ ಪುತ್ತೂರು, ರಾಜ್ಯ ಕಾರ್ಯದರ್ಶಿ ಎ.ಕೆ. ಅಶ್ರಫ್, ಜಿಲ್ಲಾ ಉಪಾಧ್ಯಕ್ಷ ಐ.ಎಂ.ಆರ್‌., ಇಕ್ಬಾಲ್‌, ಉಪ್ಪಿನಂಗಡಿ ಸಮಿತಿ ಅಧ್ಯಕ್ಷ ಬಿ.ಕೆ. ಸುಲೈಮಾನ್‌ ಉಪಸ್ಥಿತರಿದ್ದರು.
ಅಬ್ದುಲ್‌ ರಜಾಕ್‌ ಸೀಮಾ ಸ್ವಾಗತಿಸಿ, ಇಕ್ಬಾಲ್‌ ಕೆಂಪಿ ವಂದಿಸಿದರು. ರಿಲ್ವಾನ್‌ ಹುಸೇನ್‌ ಕಾರ್ಯಕ್ರಮ ನಿರೂಪಿಸಿದರು.

ರೋಡ್‌ ಶೋ
ಸಾರ್ವಜನಿಕ ಸಭೆಗೆ ಮುನ್ನ ಎಸ್‌ಡಿಪಿಐ ಕಾರ್ಯಕರ್ತರು ಗಾಂಧಿ ಪಾರ್ಕ್‌ ಬಳಿ ಜಮಾಯಿಸಿ ಬ್ಯಾಂಕ್‌ ರಸ್ತೆಯಾಗಿ, ಹಳೆ ಬಸ್‌ ನಿಲ್ದಾಣ, ಹೊಸ ಬಸ್‌ ನಿಲ್ದಾಣದ ರಸ್ತೆಯಲ್ಲಿ ರೋಡ್‌ ಶೋ ನಡೆಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.