ಉಳ್ಳಾಲದಲ್ಲಿ ಸಮುದ್ರ ಕೊರೆತ ತೀವ್ರ


Team Udayavani, Jul 15, 2018, 11:58 AM IST

1407ul4.gif

ಉಳ್ಳಾಲ: ಕಳೆದೆರಡು ದಿನಗಳಿಂದ ಬೀಸುತ್ತಿರುವ ಗಾಳಿಯ ಪರಿಣಾಮ ಸೋಮೇಶ್ವರ ಉಚ್ಚಿಲ ಬೀಚ್‌ ರೋಡ್‌ನ‌ಲ್ಲಿ ರಸ್ತೆವರೆಗೆ ಸಮುದ್ರದ ಕೊರೆತ ಸಂಭವಿಸಿದೆ. ಉಳ್ಳಾಲ ಕಿಲೆರಿಯಾ ನಗರ, ಕೈಕೋ, ಮುಕ್ಕಚ್ಚೇರಿಯಲ್ಲಿ ಮನೆಗಳಿಗೆ ಸಮುದ್ರದ ಅಲೆಗಳು ನುಗ್ಗುತ್ತಿವೆ.

ಉಚ್ಚಿಲ ಬೀಚ್‌ನಿಂದ ಸೋಮೇಶ್ವರ ಸಂಪರ್ಕಿಸುವ ಪೆರಿಬೈಲು ಬಳಿ ಸಮುದ್ರ ಕೊರೆತದಿಂದ ರಸ್ತೆ ಸಂಪರ್ಕ ಕಡಿತದ ಭೀತಿಯಲ್ಲಿದೆ. ಸಮುದ್ರ ಮತ್ತು ರಸ್ತೆ ನಡುವೆ ಇದ್ದ ಮರಗಳು ಧರಾಶಾಯಿಯಾಗಿವೆ. ವಿದ್ಯುತ್‌ ಕಂಬಗಳು ಸಮುದ್ರ ಪಾಲಾಗಿದೆ. ಶನಿವಾರ ಮೆಸ್ಕಾಂ ಇಲಾಖೆ ಬೀಚ್‌ ರಸ್ತೆಯ ಪೆರಿಬೈಲ್‌ ಬಳಿ ವಿದ್ಯುತ್‌ ಕಂಬಗಳನ್ನು ರಸ್ತೆಯ ಇನ್ನೊಂದು ಬದಿಗೆ ಸ್ಥಳಾಂತರಿಸಿದ್ದು, ಕಂಬಗಳಿಗೆ ಅಡ್ಡಿಯಾಗುವ ಗಾಳಿಮರಗಳನ್ನು ಕಡಿದಿದ್ದು, ಮಧ್ಯಾಹ್ನ ವರೆಗೆ ಬೀಚ್‌ ರಸ್ತೆಯನ್ನು ಮುಚ್ಚಲಾಗಿತ್ತು.

ಮನೆಗಳಿಗೆ ನೀರು
ಕೈಕೋ ಮತ್ತು ಕಿಲೆರಿಯಾ ನಗರದಲ್ಲಿ ಶನಿವಾರ ಸಮುದ್ರದ ಅಲೆಗಳು ಬಿರುಸುಗೊಂಡು 25ಕ್ಕೂ ಹೆಚ್ಚು ಮನೆಗಳು ನೀರಿನಿಂದ ಆವೃತವಾಗಿವೆ. ಸ್ಥಳೀಯ ಕೌನ್ಸಿಲರ್‌ ಮಹಮ್ಮದ್‌ ಮುಕ್ಕಚ್ಚೇರಿ ಮತ್ತು ಉಳ್ಳಾಲ ನಗರಸಭಾ ಪೌರಾಯುಕ್ತ ಸ್ಥಳಕ್ಕೆ ಆಗಮಿಸಿದ್ದು, ಅಗ್ನಿಶಾಮಕ ದಳದ ಸಿಬಂದಿ ನೀರನ್ನು ಪಂಪ್‌ ಮೂಲಕ ತೆರವುಗೊಳಿಸಿದರು. ಉಳ್ಳಾಲದಾದ್ಯಂತ ಸಮುದ್ರದ ಅಲೆಗಳು ಸುಮಾರು 50ಕ್ಕೂ ಹೆಚ್ಚು ಮನೆಗಳಿಗೆ ಅಪ್ಪಳಿಸಿದ್ದು, ಓಖೀ ಚಂಡಮಾರುತ ಸಂದರ್ಭದಲ್ಲಿ ಶೇ. 75 ಕುಸಿದಿದ್ದ ಆಲಿಯಬ್ಬ ಅವರ ಮನೆ ಶನಿವಾರ ಸಂಪೂರ್ಣ ಕುಸಿತಗೊಂಡಿದೆ. ಮೊಗವೀರಪಟ್ಣ ಬೀಚ್‌ನಲ್ಲಿ ಸಮುದ್ರದ ಕೊರೆತದಿಂದ ಬಹಳಷ್ಟು ಹಾನಿಯಾಗಿದೆ.ಸ್ಥಳಕ್ಕೆ ಉಳ್ಳಾಲ ನಗರ ಪೌರಾಯುಕ್ತೆ ವಾಣಿ ಆಳ್ವ, ಕೌನ್ಸಿಲರ್‌ ಮಹಮ್ಮದ್‌ ಮುಕ್ಕಚ್ಚೇರಿ, ಮೆಸ್ಕಾಂ ಎಡಬ್ಲೂ ದಯಾನಂದ್‌, ಜಿಲ್ಲಾ ಪಂಚಾಯತ್‌ ಸದಸ್ಯೆ ಧನಲಕ್ಷ್ಮೀ ಗಟ್ಟಿ, ತಾ.ಪಂ. ಸದಸ್ಯ ರವಿಶಂಕರ್‌, ಸ್ಥಳಿಯಾಡಳಿತ ಸಂಸ್ಥೆಗಳ ಅಧಿಕಾರಿಗಳು ಭೇಟಿ ನೀಡಿದರು.

1.7 ಮೀ. ಎತ್ತರದ ಅಲೆಗಳ ಸಾಧ್ಯತೆ
ಕಂದಾಯ ಇಲಾಖೆಯ ಪ್ರೊಬೆಷನರಿ ಸಹಾಯಕ ಆಯುಕ್ತ ಸಂತೋಷ್‌ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲಾಡಳಿತದ ಸೂಚನೆಯಂತೆ ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುಂದಿನ ದಿನಗಳಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ 1.7 ಮೀ. ಎತ್ತರದ ಅಲೆಗಳು ಸಮುದ್ರ ತೀರಕ್ಕೆ ಅಪ್ಪಳಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಎರಡು ಹಿಟಾಚಿಗಳನ್ನು ಸ್ಥಳದಲ್ಲೇ ಕಾರ್ಯಾಚರಣೆಗೆ ಇರಿಸಲಾಗಿದೆ. ಮನೆಗಳಿರುವ ಪ್ರದೇಶಗಳಲ್ಲಿ ಕಲ್ಲುಗಳನ್ನು ಹಾಕಲಾಗಿದೆ. ಒಂದು ಹಂತದ ಕಾಮಗಾರಿ ಮುಗಿದ ತತ್‌ಕ್ಷಣವೇ ಎಂಜಿನಿಯರುಗಳ ಸಲೆಹಯಂತೆ ರಸ್ತೆಯ ಭಾಗದಲ್ಲಿಯೂ ಕಲ್ಲುಗಳನ್ನು ಹಾಕುವ ಕೆಲಸ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.