ಕದಿಕೆ ಸೇತುವೆಯಲ್ಲಿ ಎರಡನೇ ಹಂತದ ಕಾಮಗಾರಿ

ಹಿಟಾಚಿ ಬಳಸಿ ಹೂಳೆತ್ತುವಿಕೆಗೆ ಚಾಲನೆ

Team Udayavani, May 26, 2019, 6:00 AM IST

2505HALE-2

ಸಸಿಹಿತ್ಲು: ಇಲ್ಲಿನ ಕದಿಕೆ ಸೇತುವೆಯಲ್ಲಿ ಎರಡನೇ ಹಂತದ ಕಾಮಗಾರಿಯಾಗಿ ಹೂಳೆತ್ತಲು ವಿವಿಧ ಯಂತ್ರಗಳನ್ನು ಬಳಸಲಾಗುತ್ತಿದೆ. ಮೊದಲನೇ ಹಂತದಲ್ಲಿ 10 ಮಂದಿ ಶ್ರಮಿಕ ವರ್ಗದವರು ಹೂಳೆತ್ತುವ ಕಾರ್ಯ ನಡೆಸಿದ್ದರು.

ಮುಂಡ ಬೀಚ್‌ನಲ್ಲಿ ತೀವ್ರವಾದ ನದಿ ಕೊರೆ ತಕ್ಕೆ ಪರೋಕ್ಷವಾಗಿ ಕಾರಣವಾಗಿರುವ ವಿವಿಧ ಸೇತುವೆಗಳ ಹೂಳು ತೆರವುಗೊಳಿಸುವ ಕಾರ್ಯ ಕಳೆದ ಇಪ್ಪತ್ತು ದಿನಗಳಿಂದ ನಿರಂತರವಾಗಿ ನಡೆಯುತ್ತಿದೆ. ಆರಂಭದಲ್ಲಿ ಪಾವಂಜೆ ಹೆದ್ದಾರಿಯ ಸೇತುವೆಯ ಕೆಳಗೆ ನಡೆದು ಸಾಕಷ್ಟು ಹೂಳನ್ನು ತೆರವು ಮಾಡಲಾಗಿದೆ.

ಕದಿಕೆ ಸೇತುವೆಯಲ್ಲೂ ಎರಡು ಹಂತದಲ್ಲಿ ಹೂಳೆತ್ತುವ ಕಾರ್ಯ ನಡೆಯುತ್ತಿದೆ. ಸೇತುವೆಯ ಮೂರು ಕಂಬಗಳ ನಡುವೆ ಮಣ್ಣು ಇದ್ದು, ಇದು ಸೇತುವೆ ನಿರ್ಮಾಣವಾಗುವಾಗ ತಾತ್ಕಾಲಿಕವಾಗಿ ನಿರ್ಮಿ ಸಲಾಗಿತ್ತು. ಸುಮಾರು 5 ವರ್ಷದಿಂದ ಇರುವ ಈ ಮಣ್ಣಿನ ಸುತ್ತ ನೀರು ಸರಾಗವಾಗಿ ಹರಿದು ಗಟ್ಟಿಗೊಂಡಿದ್ದು ಮಾನವ ಶ್ರಮದಿಂದ ಒಂದು ವಾರ ತೆರವು ಕಾರ್ಯಾಚರಣೆ ನಡೆಸಿ ದರು. ಸಂಪೂರ್ಣವಾಗಿ ತೆರವು ಮಾಡಲು ಸಾಧ್ಯವಾ ಗದಿದ್ದರಿಂದ ಹಿಟಾಚಿಯನ್ನು ಬಳಸಲಾಗುತ್ತಿದೆ.

ಬೃಹತ್‌ ಕ್ರೇನ್‌ ಮೂಲಕ ಹಿಟಾಚಿಯನ್ನು ಸೇತು ವೆಯ ಮೇಲಿನಿಂದ ಕೆಳಗಿಳಿಸಿ,ಹಿಟಾಚಿಯ ಬಕೆಟ್‌ನ ಮೂಲಕ ಮಣ್ಣನ್ನು ತೆರವು ಮಾಡಲಾಗುತ್ತಿದೆ ಒಂದು ಬಾರಿ ತೆಗೆದ ಮಣ್ಣು ಸಾಧಾರಣ ಒಂದು ಟನ್‌ನ ಬಕೆಟ್‌ನಲ್ಲಿ ಪ್ರತ್ಯೇಕವಾಗಿ ಹಾಕಿ ಅದನ್ನು ಕ್ರೇನ್‌ ಮೂಲಕ ಲಾರಿಗೆ ತುಂಬಿಸಿ ತೆರವು ಮಾಡಲಾಗುತ್ತಿದೆ.

ದೋಣಿಯ ಮೂಲಕ ದಡಕ್ಕೆ ಸಾಗಾಟ
ಆರಂಭದಲ್ಲಿ ಕಾರ್ಮಿಕರು ಹೂಳನ್ನು ತೆರವು ಮಾಡಲು ಹಗ್ಗದ ಮೂಲಕ ಹಾಗೂ ನದಿಯಲ್ಲಿ ಈಜಿಕೊಂಡು ತೆರಳಿದ್ದು ಅಲ್ಲಿನ ಗಟ್ಟಿಯಾದ ಮಣ್ಣನ್ನು ತೆರವು ಮಾಡಿ ದೋಣಿಯ ಮೂಲಕ ದಡಕ್ಕೆ ಸಾಗಾಟ ನಡೆಸುವ ಕಾರ್ಯ ನಿಧಾನವಾಗಿ ನಡೆಯುತ್ತಿದ್ದರಿಂದ ಈ ಬದಲಾವಣೆ ನಡೆಸಲಾಗಿದೆ. ಮಳೆ ಸುರಿಯಲು ಆರಂಭವಾದಲ್ಲಿ ಮಣ್ಣು ತೆಗೆಯಲು ತೊಡಕಾಗಬಹುದು ಎಂಬ ಆತಂಕದಿಂದ ಕಾಮಗಾರಿಯನ್ನು ತುರ್ತಾಗಿ ನಡೆಸಲಾಗುತ್ತಿದೆ.

ತಾ.ಪಂ. ಸದಸ್ಯ ಜೀವನ್‌ಪ್ರಕಾಶ್‌ ಕಾಮೆರೊಟ್ಟು, ಮೀನುಗಾರರ ಮುಖಂಡ ಶೋಭೇಂದ್ರ ಸಸಿಹಿತ್ಲು, ಹಳೆಯಂಗಡಿ ಗ್ರಾಮ ಪಂಚಾಯತ್‌ನ ಸದಸ್ಯರಾದ ಅಶೋಕ್‌ ಬಂಗೇರ, ಚಿತ್ರಾ ಸುಖೇಶ್‌, ವಿನೋದ್‌ಕುಮಾರ್‌ ಕೊಳುವೈಲು, ಸ್ಥಳೀಯರಾದ ಅನಂದ ಸುವರ್ಣ, ಸೂರ್ಯ ಕಾಂಚನ್‌ ಹಾಗೂ ಸಾಮಾಜಿಕ ಕಾರ್ಯಕರ್ತ ಮನೋಜ್‌ಕುಮಾರ್‌ ಕೆಲಸಿಬೆಟ್ಟು ಉಪಸ್ಥಿತರಿದ್ದರು.

ಜನ ಪ್ರತಿನಿಧಿಗಳ ಭೇಟಿ
ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಜಿ. ಪಂ. ಸದಸ್ಯ ವಿನೋದ್‌ ಬೊಳ್ಳೂರು ಪ್ರತಿಕ್ರಿಯಿಸಿ, ಜಿಲ್ಲಾಧಿಕಾರಿಯವರೊಂದಿಗೆ ಶಾಸಕ ಉಮಾನಾಥ ಕೋಟ್ಯಾನ್‌ ಅವರು ಸ್ಥಳೀಯರ ನಿಯೋಗದ ಮೂಲಕ ನಡೆದ ಮಾತುಕತೆಯ ಪ್ರಯತ್ನದಿಂದ ಕಳೆದ ಐದು ವರ್ಷದಿಂದ ಬೇಡಿಕೆಯಾಗಿದ್ದ ಹೂಳೆತ್ತುವ ಕಾಮಗಾರಿ ನಿರಂತರವಾಗಿ ನಡೆಯುತ್ತಿದೆ. ಲೋಕೋಪಯೋಗಿ ಇಲಾಖೆಯೇ ಇದರ ನಿರ್ವಹಣೆ ನಡೆಸುತ್ತಿರುವುದರಿಂದ ಇಲಾಖೆಯ ಎಂಜಿನಿಯರ್‌ ಮಾರ್ಗದರ್ಶನದಲ್ಲಿ ಹೂಳೆತ್ತಲಾಗುತ್ತಿದೆ. ಸೇತುವೆಯ ನಿರ್ಮಾಣದ ಸಮಯದಲ್ಲಿಯೇ ತೆರವು ಮಾಡಿದ್ದಲ್ಲಿ ಇಷ್ಟೊಂದು ಸುದೀರ್ಘ‌ ದಿನದಲ್ಲಿ ಕಾಮಗಾರಿ ನಡೆಯುತ್ತಿರಲಿಲ್ಲ ಎಂದರು.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.