ಸಂತೆ ವ್ಯಾಪಾರಕ್ಕೆ ತೆರೆದುಕೊಳ್ಳುತ್ತಿದೆ ಜಾತ್ರೆ ಗದ್ದೆ 


Team Udayavani, Apr 14, 2018, 11:38 AM IST

14-April-6.jpg

ನಗರ: ಮಹತೋಭಾರ ಶ್ರೀ ಮಹಾಲಿಂಗೇಶ್ವರನ ಜಾತ್ರೆ ಧಾರ್ಮಿಕ ವೈಶಿಷ್ಟ್ಯಗಳಷ್ಟೇ ವ್ಯಾಪಾರ ವಹಿವಾಟಿನ ವಿಚಾರಗಳಲ್ಲೂ ಪ್ರಸಿದ್ಧಿ. ವಿಶಾಲವಾದ ದೇವರಮಾರು ಗದ್ದೆಯಲ್ಲಿ ಜಾತ್ರೆಯ ಸಂದರ್ಭದಲ್ಲಿ ತೆರೆದುಕೊಳ್ಳುವ ವ್ಯಾಪಾರ ಮಳಿಗೆಗಳು, ಮನರಂಜನ ವ್ಯವಸ್ಥೆಗಳು ಸಾವಿರಾರು ಮಂದಿಯನ್ನು ಆಕರ್ಷಿಸುತ್ತವೆ.

ಎ. 20ರ ತನಕ ನಡೆಯುವ ಜಾತ್ರೆ ಅಂಗವಾಗಿ ಅಂಗಡಿ ಮಳಿಗೆಗಳು ತೆರೆದು ಕೊಳ್ಳುತ್ತಿವೆ. ಎ. 10ರಿಂದ 20ರ ತನಕ ವ್ಯಾಪಾರ ನಡೆಸಲು ಈ ತಾತ್ಕಾಲಿಕ ಅಂಗಡಿ ಮಾಲಕರಿಗೆ ದೇವಾಲಯದ ಭಂಡಾರದ ಹಕ್ಕಿನ ಸ್ಥಳವನ್ನು ಏಲಂ ಮೂಲಕ ನೀಡಲಾಗಿದೆ. ಜಾತ್ರಾ ಗದ್ದೆಯಲ್ಲಿ 200 ಕ್ಕೂ ಹೆಚ್ಚು ಅಂಗಡಿ ಮಳಿಗೆಗಳು, ಮನರಂಜನ ವ್ಯವಸ್ಥೆಗಳು ತೆರೆದುಕೊಳ್ಳಲಿವೆ.

ಏಲಂ ಮೂಲಕ ಹಕ್ಕು
ಅಂಗಡಿಯ ಸ್ಥಳವನ್ನು ಏಲಂನಲ್ಲಿ ಪಡೆದುಕೊಂಡಿರುವ ವ್ಯಾಪಾರಿಗಳು ಜಾತ್ರಾ ವ್ಯಾಪಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಎ. 16, 17, 18 ಮತ್ತು 19ರಂದು ಭರ್ಜರಿ ವ್ಯಾಪಾರ ನಡೆಯುವುದಾದರೂ ಅಂಗಡಿ ನಡೆಸುವ ಸ್ಥಳದ ಹಕ್ಕನ್ನು ಎ. 10ರಿಂದಲೇ ಏಲಂನಲ್ಲಿ ಪಡೆದು ಕೊಂಡವರಿಗೆ ನೀಡಲಾಗುತ್ತಿದೆ.

ಪ್ಲಾಸ್ಟಿಕ್‌ ಸಾಮಾಗ್ರಿ, ಚಪ್ಪಲಿ ವ್ಯಾಪಾರ, ಮಣಿ ಸರಕಿನ ವ್ಯಾಪಾರ ಮಳಿಗೆಗಳು ಒಂದೊಂದೇ ಆರಂಭವಾಗುತ್ತಿವೆ. ಚರುಂಬುರಿ, ಬೇಲ್‌ಪುರಿ, ಕಬ್ಬಿನ ಹಾಲು ಮಾರಾಟ ಮಳಿಗೆಗಳು ಎ. 10 ರಿಂದಲೇ ತಮ್ಮ ವ್ಯಾಪಾರ ಆರಂಭಿಸಿವೆ. ಮಕ್ಕಳ ಮನರಂಜನೆಯ ಜಾಯಿಂಟ್ ವೀಲ್‌, ಪುಟಾಣಿ ರೈಲು, ಟೊರೆಂಟೊರೋ ಮೊದಲಾದ ವ್ಯವಸ್ಥೆಗಳು ಸಿದ್ಧಗೊಳ್ಳುತ್ತಿವೆ. ಹಿಂದೆ ಜಾತ್ರೆ ಗದ್ದೆಯಲ್ಲಿ ಬಾಯಾರಿದರೆ ಗೋಳಿ ಸೋಡಾ, ಗೋಳಿ ಸೋಡಾ ಶರಬತ್ತು, ಕಲ್ಲಂಗಡಿ ಹಣ್ಣಿನ ಶರಬತ್ತು, ಬೆಲ್ಲ ಮತ್ತು ಸಜ್ಜಿಗೆ ಹಾಕಿ ತಯಾರಿಸಿದ ಸಿಹಿ ಪಾನೀಯ – ಸೋಜಿ ಸಿಗುತ್ತಿತ್ತು. ಇಂದಿನ ಜಾತ್ರೆಯಲ್ಲಿ ಅವೆಲ್ಲಾ ಮರೆಯಾಗಿ ರುಮಾಲಿ ರೋಟಿ, ವಿವಿಧ ಕಂಪೆನಿಗಳ ಐಸ್‌ಕ್ರೀಮ್‌ಗಳು, ತಂಪು ಪಾನೀಯಗಳು, ಹಣ್ಣಿನ ಜ್ಯೂಸ್‌ಗಳು, ಗೋಬಿಮಂಚೂರಿ, ಚಾಟ್ಸ್‌, ಚರಂಬುರಿ ಹೀಗೆ ಸಂತೆಯ ಆಹಾರ ಮಾರಾಟ ವ್ಯವಸ್ಥೆಯಲ್ಲಿ ಕೂಡ ಬದಲಾಗಿದೆ.

ಮನರಂಜನೆ
ರಥದ ಮೇಲೆ ವಿದ್ಯುದ್ದೀಪದ ಬೆಳಕು, ರಥವನ್ನು ವಿದ್ಯುದ್ದೀಪಗಳಿಂದ ಶೃಂಗಾರ, ಜಾತ್ರೆಗದ್ದೆಯುದ್ದಕ್ಕೂ ಅಲ್ಲಲ್ಲಿ
ವಿದ್ಯುತ್‌ ದೀಪಗಳ ವ್ಯವಸ್ಥೆ, ಜಾತ್ರೆ ಗದ್ದೆಯ ಸಂತೆಯಲ್ಲಿ ಅಂಗಡಿಗಳಲ್ಲೂ ವಿದ್ಯುದ್ದೀಪದ ವ್ಯವಸ್ಥೆ, ಯಕ್ಷಗಾನ ಮೇಳಗಳ ಪ್ರದರ್ಶನ ದಶಕದ ಹಿಂದಿನ ವ್ಯವಸ್ಥೆಯಾದರೆ ಇಂದು ಜೈಂಟ್‌ ವೀಲುಗಳು, ಮಕ್ಕಳ ಪುಟಾಣಿ ರೈಲುಗಳು ಹೀಗೆ ವಾಣಿಜ್ಯ ಪ್ರದರ್ಶನ ರೀತಿಯಲ್ಲಿ ಜಾತ್ರೆ ಗದ್ದೆಯಲ್ಲಿ ವಾಣಿಜ್ಯ ಮಳಿಗೆಗಳು ತೆರೆದುಕೊಳ್ಳುತ್ತಿವೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.