Mangaluru ಎಂಡಿಎಂಎ ಡ್ರಗ್ಸ್‌ ಮಾರಾಟ: ಕುಖ್ಯಾತ ಆರೋಪಿಯ ಬಂಧನ

Team Udayavani, Aug 19, 2023, 9:59 PM IST

Mangaluru ಎಂಡಿಎಂಎ ಡ್ರಗ್ಸ್‌ ಮಾರಾಟ: ಕುಖ್ಯಾತ ಆರೋಪಿಯ ಬಂಧನ

ಮಂಗಳೂರು: ನಿಷೇಧಿತ ಡ್ರಗ್ಸ್‌ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಟ್ವಾಳ ತಾಲೂಕು ವಿಟ್ಲ ಪಟ್ನೂರು ಕೊಡಂಗಾಯಿ ಹೌಸ್‌ನ ಹಸನ್‌ ಸಾದಿಕ್‌ ಆಲಿಯಾಸ್‌ ಬ್ಲೇಡ್‌ ಸಾದಿಕ್‌(35)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈತ ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿಕೊಂಡು ಮಾರುತಿ 800 ಕಾರಿನಲ್ಲಿಟ್ಟು ಮಂಗಳೂರು ನಗರ ಹಾಗೂ ಕೇರಳ ರಾಜ್ಯದ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಆರೋಪಿಯಿಂದ 50 ಗ್ರಾಂ ತೂಕದ 2.50 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ 800 ಕಾರು, ಮೊಬೈಲ್‌ ಫೋನ್‌, ಡಿಜಿಟಲ್‌ ತೂಕಮಾಪನ ಸಹಿತ ಅಂದಾಜು 3,65,500 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ತಿಳಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಆರೋಪಿ
ಆರೋಪಿ ಹಸನ್‌ ಸಾದಿಕ್‌ ವಿರುದ್ಧ ಈ ಹಿಂದೆ ವಿಟ್ಲ ಠಾಣೆಯಲ್ಲಿ ಒಟ್ಟು 8 ಹಲ್ಲೆ, ಬೆದರಿಕೆ ಪ್ರಕರಣಗಳು, 4 ಕೊಲೆ ಯತ್ನ ಪ್ರಕರಣ, ಪುತ್ತೂರು ನಗರ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ, ಉಪ್ಪಿನಂಗಡಿ ಠಾಣೆಯಲ್ಲಿ ಮಾನಭಂಗ ಹಾಗೂ ಕಿಡ್ನಾéಪ್‌ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾವೂರು ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ, ಬೆಂಗಳೂರು ಹೆಬ್ಬಾಳ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಹೀಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು ಈತ ಸುಮಾರು 6 ತಿಂಗಳುಗಳಿಂದ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯ ವಾರಂಟ್‌ ಹೊರಡಿಸಿತ್ತು.
ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ, ಪೊಲೀಸ್‌ ನಿರೀಕ್ಷಕ ಶ್ಯಾಮ್‌ ಸುಂದರ್‌ ಎಚ್‌. ಎಂ., ಪಿಎಸ್‌ಐಯವರಾದ ರಾಜೇಂದ್ರ ಬಿ., ನರೇಂದ್ರ, ಶರಣಪ್ಪ ಭಂಡಾರಿ, ಸುದೀಪ್‌ ಎಂ.ವಿ ಹಾಗೂ ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.