ಪಂಪ್ವೆಲ್ನಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ
Team Udayavani, Jul 10, 2019, 5:27 AM IST
ಮಂಗಳೂರು: ನಗರದ ಪಂಪ್ವೆಲ್ ವೃತ್ತದ ಬಳಿ ಮಂಗಳವಾರ ಮಧ್ಯಾಹ್ನ ಕಾರಿಗೆ ಲಾರಿ ಢಿಕ್ಕಿ ಹೊಡೆದು ಸರಣಿ ಅಪಘಾತ ನಡೆದ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಮೂರು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಪಾಯದಿಂದ ಪಾರಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಂತೂರು ಕಡೆಯಿಂದ ಪಂಪ್ವೆಲ್ ಕಡೆಗೆ ಅತಿ ವೇಗದಿಂದ ಸಾಗಿಬಂದ ಲಾರಿ ಎದುರಿನಲ್ಲಿ ಹೋಗುತ್ತಿದ್ದ ಕಾರನ್ನು ಓವರ್ ಟೇಕ್ ಮಾಡಲು ಯತ್ನಿಸಿದ್ದು ಈ ವೇಳೆ ಕಾರಿಗೆ ಢಿಕ್ಕಿಯಾಗಿದೆ. ಕಾರು ಎದುರಿನಿಂದ ಹೋಗುತ್ತಿದ್ದ ಎರಡು ಕಾರುಗಳಿಗೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಒಟ್ಟು ಮೂರು ಕಾರುಗಳು ನಜ್ಜುಗುಜ್ಜಾಗಿವೆೆ. ಲಾರಿಯ ಎದುರು ಭಾಗ ಜಖಂಗೊಂಡಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂದರ್ಭ ಸುಮಾರು ಅರ್ಧ ತಾಸು ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು ಸ್ಥಳೀಯರು ಹಾಗೂ ಪೊಲೀಸರು ಅಪಘಾತಕ್ಕೀಡಾದ ಕಾರುಗಳನ್ನು ಬದಿಗೆ ಸರಿಸಿ, ವಾಹನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕದ್ರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು