ಜ.20 ಕ್ಕೆ ತುಳುನಾಡಿನಾದ್ಯಂತ ”ಶಕಲಕ ಬೂಮ್‌‌‌‌‌ ಬೂಮ್” ಚಿತ್ರ ತೆರೆಗೆ

ಚಿತ್ರದುದ್ದಕ್ಕೂ ನಗುವಿನ ಟಾನಿಕ್

Team Udayavani, Jan 11, 2023, 2:34 PM IST

1-csadsdsad

ಮಂಗಳೂರು : ಯುಎನ್ ಸಿನೆಮಾಸ್ ಬ್ಯಾನರ್ನಡಿ ಮೂಡಿಬರುವ ”ಶಕಲಕ‌ ಬೂಮ್ ಬೂಮ್” ತುಳು ಚಲನಚಿತ್ರ ಜನವರಿ 20 ರಂದು ತುಳುನಾಡಿನಾದ್ಯಂತ ತೆರೆ ಕಾಣಲಿದೆ.

ಮಂಗಳೂರಿನಲ್ಲಿ ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಿರ್ಮಾಪಕರಲ್ಲೊಬ್ಬರಾದ ನಿತ್ಯಾನಂದ ನಾಯಕ್ ನರಸಿಂಗೆ ಅವರು, ಈ ಚಿತ್ರವನ್ನು‌ಶ್ರೀಶ ಎಳ್ಳಾರೆ ನಿರ್ದೇಶಿಸಿದ್ದು, ನಿತ್ಯಾನಂದ ನಾಯಕ್ ನರಸಿಂಗೆ, ಉಮೇಶ್ ಪ್ರಭು ಮಾಣಿಬೆಟ್ಟು ನಿರ್ಮಾಣ ಮಾಡಿದ್ದಾರೆ. ಡಾಲ್ವಿನ್ ಕೊಳಲಗಿರಿ ಸಂಗೀತ ಚಿತ್ರಕ್ಕಿದೆ. ತುಳುನಾಡಿನ ಖ್ಯಾತ ಛಾಯಾಗ್ರಾಹಕರಾದ ಪ್ರಜ್ವಲ್ ಸುವರ್ಣ ಹಾಗೂ ಅರುಣ್ ರೈ ಪುತ್ತೂರು ಕ್ಯಾಮರಾ ಕೈಚಳಕವಿದೆ ಎಂದರು.

ಚಿತ್ರದ ತಾರಾಂಗಣದ ಪ್ರಮುಖ ಭೂಮಿಕೆಯಲ್ಲಿ ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರವೀಣ್ ಮಾರ್ಕಮೆ, ಮಿಮಿಕ್ರಿ ಶರಣ, ಕಥಾನಾಯಕನಾಗಿ ಗಾಡ್ವಿನ್ ಸ್ಪಾರ್ಕಲ್ ಹಾಗೂ ಕಥಾನಾಯಕಿಯಾಗಿ ಲಕ್ಷಾ ಶೆಟ್ಟಿ, ರೂಪಶ್ರೀ ವರ್ಕಾಡಿ, ಮನೋಹರ್ ಶೆಟ್ಟಿ ನಂದಳಿಕೆ, ವಸಂತ್ ಮುನಿಯಾಲ್, ಹರೀಶ್ ಗಾಳಿಪಟ , ಸುನಿಲ್ ಕಡ್ತಲ, ಯತೀಶ್ ಪೂಜಾರಿ, ಯಶವಂತ್, ಪ್ರವೀಣ್ ಆಚಾರ್ಯ,ಕಾಮಿಡಿ ಕಿಲಾಡಿ ಖ್ಯಾತಿಯ ರಾಧೇಶ್, ಕಾಮಿಡಿ ಗ್ಯಾಂಗ್ ಖ್ಯಾತಿಯ ರಾಜೇಶ್ ದಾನಶಾಲೆ, ಲಂಚುಲಾಲ್, ರಾಜೇಶ್ವರಿ ಕುಲಾಲ್, ಧೀರಾಜ್, ಶಿವಾನಂದ, ಯಜ್ಞೆಶ್ ಶೆಟ್ಟಿ ಅಭಿನಯಿಸಿದ್ದಾರೆ ಎಂದು ತಿಳಿಸಿದರು.

ನಗುವಿನ ಟಾನಿಕ್
ಚಿತ್ರದುದ್ದಕ್ಕೂ ನಗುವಿನ ಟಾನಿಕ್ ಇದ್ದು, ಹೊಟ್ಟೆ ಹುಣ್ಣಾಗಿಸಲು ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್, ಉಮೇಶ್ ಮಿಜಾರ್, ಪ್ರವೀಣ್ ಮಾರ್ಕಮೆ, ಮಿಮಿಕ್ರಿ ಶರಣ್ ಜೊತೆಯಾಗುವ ಸನ್ನಿವೇಶಗಳು ನೈಜ್ಯವಾದ ಹಾಸ್ಯದ ಹೊನಲಾಗಿಸಲಿವೆ. ಶುದ್ಧವಾದ ಭಾಷೆ ಬಳಕೆ, ಉತ್ತಮವಾದ ಸಂಭಾಷಣೆ ಮನಮುಟ್ಟುವಂತಹ ನಟನೆಯನ್ನು ಹೊಂದಿರುವ ಚಿತ್ರ ಇದಾಗಿದೆ. ತುಳು ಸಿನೆಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಕಾಮಿಡಿ, ಹಾರರ್, ಥ್ರಿಲ್ಲರ್, ಸಸ್ಪೆನ್ಸ್ ಹೊಂದಿರುವ ಹೊಸತನದ ಚಿತ್ರ ಶಕಲಕ ಬೂಮ್ ಬೂಮ್ ಆಗಿದೆ ಎನ್ನುತ್ತಾರೆ ಅವರು.

ಏನಿದೆ ಕಥೆಯ ಸಾರ
ಸುಮಾರು 150 ವರ್ಷದ ಹಳೆಯ ಮನೆಯಲ್ಲಿ ಚಿತ್ರೀಕರಣ ನಡೆಸಿದ್ದೇವೆ. ಜನರನ್ನು ಮೋಸ ಮಾಡುತ್ತ ಬದುಕುವವರು, ಸಂಪತ್ತಿನ ಆಸೆಯಿಂದ ಬಂದು, ಒಂದು ಪಾಳು ಬಿದ್ದ ಮನೆಯಲ್ಲಿ ಬಂಧಿಯಾಗುತ್ತಾರೆ..ಆ ಮನೆಯ ರಹಸ್ಯ ಏನು? ಈ ಹಿಂದೆ ಆ ಮನೆಯಲ್ಲಿ ಏನಾಗಿತ್ತು? ನ್ಯಾಯ ಗೆಲ್ಲುತ್ತದಾ? ಸತ್ಯಕ್ಕೆ ಜಯವಿದೆಯಾ? ಎನ್ನುವ ವಿಶಿಷ್ಟವಾದ ಕಥಾಹಂದರ ಹೊಂದಿರುವ ವಿಭಿನ್ನವಾದ ಚಿತ್ರ ಇದಾಗಿದೆ. ಅಂಗ ದಾನ ಮಾಡಲು www.jeevasarthakathe.karnataka.gov.in ಲಾಗಿನ್ ಆಗಿ ಇತರರ ಬಾಳಿಗೆ ಬೆಳಕಾಗಿ ಎನ್ನುವ ಸಂದೇಶವನ್ನು ನಮ್ಮ ಚಿತ್ರತಂಡದಿಂದ ಸಾರ್ವಜನಿಕರಿಗೆ ತಿಳಿಯಪಡಿಸುತ್ತಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ‌ ಚಿತ್ರದ ಪ್ರಮುಖರಾದ ಗಾಡ್ವಿನ್ ಸ್ಪಾರ್ಕಲ್, ಸುನಿಲ್ ಕಡ್ತಲ, ಲಂಚುಲಾಲ್, ಡಾಲ್ವಿನ್ ಕೊಳಲಗಿರಿ, ವಿಘ್ನೇಶ್ ಇದ್ದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.