ಶೇವಿರೆ: ಚರಂಡಿ ಮುಚ್ಚಿ ರಸ್ತೆಯಲ್ಲಿ ನೀರು

Team Udayavani, Jul 16, 2017, 3:00 AM IST

ನೆಹರೂನಗರ : ರಕ್ತೇಶ್ವರಿ ವಠಾರದ ಅಂಗನವಾಡಿ ರಸ್ತೆಯ ಕೊನೆಯ ಶೇವಿರೆಯಲ್ಲಿ ರಸ್ತೆ ಬದಿ ಚರಂಡಿಯನ್ನು ಮನೆಗೆ ಹೋಗಲು ರಸ್ತೆ ನಿರ್ಮಾಣ ಮಾಡಲು ಮುಚ್ಚಿರುವ ಕಾರಣ ನೀರು ಶೇಖರಣೆಗೊಂಡು ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದೇ ಜಾಗದಲ್ಲಿ ನಿವೇಶನದಾರರು ತಮ್ಮ ಖಾಲಿ ನಿವೇಶನಕ್ಕೆ ಕೆಂಪು ಮಣ್ಣು ಹಾಕಿರುವುದು ಕರಗಿ ಚರಂಡಿಗೆ ಬಂದು ಚರಂಡಿ ಮುಚ್ಚಿದೆ. ಈಗ ಚರಂಡಿಯಲ್ಲಿ ಹರಿಯಬೇಕಾದ ನೀರು ಮುಖ್ಯ ರಸ್ತೆಯಲ್ಲಿ ಹರಿಯುತ್ತಿದ್ದು, ಮಳೆ ಬಂದಾಗ ಕೃತಕ ನೆರೆ ಸೃಷ್ಟಿಯಾಗಿದೆ.
ಇಲ್ಲಿನ ಸಮಸ್ಯೆಯ ಕುರಿತು ಎಪ್ರಿಲ್‌ ಕೊನೆಯ ವಾರದಲ್ಲಿ ಪೌರಾಯುಕ್ತರಿಗೆ ದೂರು ನೀಡಲಾಗಿದ್ದು, ಅನಂತರ ಸತತ 6 ಬಾರಿ ವೈಯಕ್ತಿಕವಾಗಿ ಭೇಟಿ ಮಾಡಿ ವಿನಂತಿಸಿ ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೆಚ್ಚು ಮಳೆ ಬಂದರೆ ಈ ಮಾರ್ಗದಲ್ಲಿ ಅಂಗನವಾಡಿಗೆ ಹೋಗುವ ಚಿಕ್ಕ ಮಕ್ಕಳಿಗೂ ತೊಂದರೆಯಾಗುತ್ತದೆ. ಕೂಡಲೇ ನಗರಸಭೆ ಆಡಳಿತ ಸ್ಪಂದಿಸಬೇಕು ಎಂದು ಸ್ಥಳೀಯ ನಿವಾಸಿ ಎನ್‌.ಕೆ. ಭಟ್‌ ಆಗ್ರಹಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ