ಶಿಮಂತೂರು: ಮಹಿಳೆಯ ಕೊಲೆ; ಆರೋಪಿ ಬಂಧನ

Team Udayavani, Dec 15, 2019, 8:48 PM IST

murder-case

ಮೂಲ್ಕಿ: ಇಲ್ಲಿಗೆ ಸಮೀಪದ ಶಿಮಂತೂರು ಬಳಿಯ ಪರೆಂಕಿಲ ತೋಟದ ಮನೆಯಲ್ಲಿ ಒಂಟಿಯಾಗಿ ವಾಸವಿದ್ದ ಶಾರದಾ ಶೆಟ್ಟಿ (78) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಈ ಸಂಬಂಧ ತುಕಾರಾಮ ಶೆಟ್ಟಿ ಯಾನೆ ಬೊಗ್ಗು ಶೆಟ್ಟಿ (50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಕೃತ್ಯ ಬೆಳಕಿಗೆ ಬಂದು 8 ತಾಸಿನೊಳಗೆ ಆರೋಪಿಯನ್ನು ಬಂಧಿಸುವ ಮೂಲಕ ಪೊಲೀಸರು ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮಹಿಳೆಯನ್ನು ಅವರ ಮನೆಯ ಬಾಗಿಲಿನ ಹೊರ ಭಾಗದಲ್ಲಿ ಕಲ್ಲಿನಿಂದ ಜಜ್ಜಿ ಕೊಂದು ಸ್ವಲ್ಪ ದೂರದಲ್ಲಿರುವ ಬಾವಿಯ ಕಟ್ಟೆಯವರೆಗೆ ಎಳೆದುಕೊಂಡು ಹೋದಂತೆ ಕಂಡುಬಂದಿದೆ.

ರವಿವಾರ ಬೆಳಗ್ಗೆ ಈ ಮಾರ್ಗವಾಗಿ ಹೋಗುತ್ತಿದ್ದ ಪಕ್ಕದ ಮನೆಯವರಿಗೆ ಶವ ಕಂಡುಬಂದ ಬಳಿಕ ಘಟನೆ ಬಹಿರಂಗವಾಗಿದೆ. ಕೊಲೆ ನಡೆದ ಮನೆಯ ಸಮೀಪದಲ್ಲಿ ಯಾವುದೇ ಮನೆಗಳು ಇಲ್ಲದ ಕಾರಣ ಘಟನೆ ನಡೆಯುವ ಹೊತ್ತಿಗೆ ಯಾರಿಗೂ ಗೊತ್ತಾಗಲಿಲ್ಲ ಎಂದು ಹೇಳಲಾಗುತ್ತಿದೆ.

ಪುತ್ರಿ ಮುಂಬಯಿಯಲ್ಲಿ
ಶಾರದಾ ಶೆಟ್ಟಿಗೆ ಒಬ್ಬರೇ ಮಗಳಿದ್ದು, ಅವರು ಮುಂಬಯಿಯಲ್ಲಿ ನೆಲೆಸಿದ್ದಾರೆ. ಸುಮಾರು 7 ತಿಂಗಳ ಹಿಂದೆ ತಾಯಿಗೆ ಮನೆ ಕಟ್ಟಿ ಕೊಟ್ಟು ಗೃಹಪ್ರವೇಶದ ಬಳಿಕ ಮುಂಬಯಿಗೆ ಮರಳಿದ್ದರು.

ಆಭರಣ ಕಳವಾಗಿಲ್ಲ
ಮಹಿಳೆ ಧರಿಸಿರುವ ಯಾವುದೇ ಚಿನ್ನಾಭರಣಗಳು ಕಳವಾಗಿಲ್ಲ. ಅವೆಲ್ಲವೂ ಆಕೆಯ ದೇಹದಲ್ಲಿಯೇ ಇರುವ ಕಾರಣ ದರೋಡೆ ಉದ್ದೇಶದಲ್ಲಿ ಈ ಕೃತ್ಯ ಮಾಡಿರುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಯಾವುದೋ ವಿವಾದಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಅಂತ್ಯವಾಗಿರಬಹುದು ಅಥವಾ ಪೂರ್ವದ್ವೇಷ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಬಂಧಿತನನ್ನು ಹೆಚ್ಚಿನ ತನಿಖೆಗೆ ಒಳಪಡಿಸಲಾಗುತ್ತಿದೆ.

ಮಾನಸಿಕ ಅಸ್ವಸ್ಥನಂತೆ ವರ್ತನೆ
ಆರೋಪಿಯು ಕುಡಿತದ ಚಟ ಹೊಂದಿದ್ದು, ಕುಡಿದ ಬಳಿಕ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಈ ಹಿಂದೆ ದೈವಸ್ಥಾನವೊಂದರ ಕಾಣಿಕೆ ಡಬ್ಬಿಯನ್ನು ಕದ್ದು ಪೇಟೆಯಲ್ಲಿ ತಲೆಯಲ್ಲಿ ಹೊತ್ತು ಸುತ್ತಾಡುತ್ತಿದ್ದ ಎಂದೂ ಸ್ಥಳೀಯರು ತಿಳಿಸಿದ್ದಾರೆ. ಈತನು ಕೊಲೆ ಬಳಿಕ ಸಮೀಪದ ಮನೆಗಳ ಹೊರಗಿದ್ದ ಬಟ್ಟೆಗಳಿಗೆ ಕೈ ಉಜ್ಜಿಕೊಂಡು ಹೋಗಿದ್ದು, ಅಲ್ಲಿ ರಕ್ತದ ಕಲೆ ಕಂಡು ಬಂದಿದೆ.

ಶ್ವಾನದಳದೊಂದಿಗೆ ಪೊಲೀಸರು ಆಗಮಿಸಿ ತನಿಖೆ ಪರಿಶೀಲಿಸಿದ್ದಾರೆ. ಮೂಲ್ಕಿ ಪೊಲೀಸರು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.