ಶಿರ್ತಾಡಿ ಹೌದಾಲ್‌: ಮೊಬೈಲ್‌ ಟವರ್‌ ವಿರುದ್ಧ ಪ್ರತಿಭಟನೆ

Team Udayavani, Mar 31, 2017, 3:02 PM IST

30mood2NEW-prathibhatane.jpg

ಮೂಡಬಿದಿರೆ: ಶಿರ್ತಾಡಿ ಗ್ರಾ.ಪಂ. ವ್ಯಾಪ್ತಿಯ ಹೌದಾಲ್‌ನ ಅಂಗನವಾಡಿ ಬಳಿಯೇ ಖಾಸಗಿ ಜಾಗದಲ್ಲಿ  ಪರಿಸರದಲ್ಲಿ  ಮೊಬೈಲ್‌ ಟವರ್‌ ಸ್ಥಾಪಿಸುವುದರ ವಿರುದ್ಧ ಶಿರ್ತಾಡಿ ಗ್ರಾ. ಪಂ. ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಗ್ರಾ. ಪಂ. ಅಧ್ಯಕ್ಷೆ ಹಾಗೂ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಟವರ್‌ ಅನ್ನು ಜನವಸತಿ ಇಲ್ಲದೆಡೆಗೆ ಸ್ಥಳಾಂತರಿಸಲು ಎಂದು ಆಗ್ರಹಿಸಿದರು.

ಪರೀಕ್ಷಾ ಹಾಲ್‌ ಬಳಿ ಮೈಕ್‌ ಗದ್ದಲ: ಗೊಂದಲ
ಪ್ರತಿಭಟನಕಾರರು ಪಂಚಾಯತ್‌ ಆವರಣದೊಳಕ್ಕೆ ಪ್ರವೇಶಿಸದಂತೆ ಗೇಟು ಹಾಕಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು.   ಮೈಕ್‌ನಲ್ಲಿ ಘೋಷಣೆಗಳನ್ನು ಕೂಗುವುದಕ್ಕೆ ಆರಂಭಿಸಿದ ಕೂಡಲೇ ಸ್ಥಳಕ್ಕೆ ಬಂದ ಪಂಚಾಯತ್‌ ಅಧ್ಯಕ್ಷೆ ಲತಾ ಹೆಗ್ಡೆ, ಹತ್ತಿರದಲ್ಲಿರುವ ಖಾಸಗಿ ಶಾಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿರುವುದರಿಂದ  ಮೈಕ್‌ ಬಂದ್‌ ಮಾಡಲು ಸೂಚಿಸುವಂತೆ  ಪೊಲೀಸರಿಗೆ ತಿಳಿಸಿದರು. 

ಇದರಿಂದ ಉದ್ರಿಕ್ತಗೊಂಡ ಪ್ರತಿಭಟನಕಾರರು  “ನಿಮಗೆ ಅನಧಿಕೃತವಾಗಿ, ಲಂಚದ ಆಮಿಷದಿಂದ  ಅಂಗನವಾಡಿಯ ಬಳಿಯೇ ಮೊಬೈಲ್‌ ಟವರ್‌ಗೆ ಅನುಮತಿ ನೀಡಲಿಕ್ಕಾಗುತ್ತದೆ. ಆಗ ಇಲ್ಲದ ಮಕ್ಕಳ ಮೇಲಿನ ಮಮಕಾರ ಈಗೆಲ್ಲಿಂದ ಬಂತು?’ ಎಂದು ಪ್ರಶ್ನಿಸಿದರು. ಇದಕ್ಕೆ  ನಿರ್ದಿಷ್ಟ ಉತ್ತರ ನೀಡದ ಅಧ್ಯಕ್ಷೆ  ತನ್ನ ಕಚೇರಿಗೆ ಮರಳಿದರು.

ಜಿಲ್ಲಾ  ರೈತ ಪ್ರಾಂತದ ಕಾರ್ಯದರ್ಶಿ ಯಾದವ ಶೆಟ್ಟಿ, ಹೋರಾಟಗಾರ್ತಿ ರಮಣಿ, “ಒಂದು ವಾರದೊಳಗೆ ಟವರ್‌ ಅನುಮತಿಯನ್ನು ರದ್ದುಗೊಳಿಸದಿದ್ದಲ್ಲಿ ಪಂಚಾಯತ್‌ ಆವರಣದೊಳಗೆ ಆಮರಣಾಂತ ಉಪವಾಸ ಸತ್ಯಾಗ್ರಹ ಕೂರುತ್ತೇವೆ’ ಎಂದು ಹೇಳಿದರು.

ಪ್ರತಿಭಟನೆಗೂ ಪಂಚಾಯತ್‌ ಅನುಮತಿ  ಅಗತ್ಯ!
ಪಂಚಾಯತ್‌ ವಿರುದ್ಧ ಪ್ರತಿಭಟನೆ ಮಾಡುವರು ಪಂಚಾಯತ್‌ನಲ್ಲಿ ಅನುಮತಿ ಪಡೆಯಬೇಕು ಎಂದು ಶಿರ್ತಾಡಿ ಗ್ರಾ.ಪಂ.ನಲ್ಲಿ  ತೀರ್ಮಾನಿಸಿ ಜಾರಿಗೆ ತರಲಾಗಿದೆ. ಎಲ್ಲೂ ಇಲ್ಲದ ಈ ರೀತಿಯ ನಿಯಮದಿಂದಾಗಿ ಪಂಚಾಯತ್‌ ವಿರುದ್ಧ ಪ್ರತಿಭಟನೆ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತವಾಯಿತು. ಈ ನಿರ್ಣಯದ ವಿರುದ್ಧ ಪಂಚಾಯತ್‌ ಆವರಣದೊಳಗೆ ಕಾರ್ಮಿಕ ಹೋರಾಟಗಾರ ಸುದತ್ತ  ಜೈನ್‌ ಮೂರು ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರು.

ಮನವಿ ಸ್ವೀಕರಿಸುವುದಕ್ಕಾಗಿ ಅಧ್ಯಕ್ಷೆಯನ್ನು ಸ್ಥಳಕ್ಕೆ ಕರೆಯುವಂತೆ ಪ್ರತಿಭಟನಕಾರರು ಎಎಸ್‌ಐ ಮೂಲಕವಾಗಿ ಕೇಳಿಕೊಂಡಾಗ ಅದಕ್ಕೊಪ್ಪದ ಅಧ್ಯಕ್ಷೆ ಲತಾ ಹೆಗ್ಡೆ,  ಈಗ ಮೀಟಿಂಗ್‌ ಇದ್ದು, ಅದು ಮುಗಿದ ಮೇಲೆ ಬರುವುದಾಗಿ  ತಿಳಿಸಿದರು.  ಸಭೆ ಮುಗಿದ ಬಳಿಕ ಉಪಾಧ್ಯಕ್ಷ ರಾಜೇಶ್‌ ಸುವರ್ಣ ಅವರನ್ನು ಪ್ರತಿಭಟನಕಾರರ ಬಳಿಗೆ ಕಳುಹಿಸಿದ ಅಧ್ಯಕ್ಷೆ, ತಾನು   ಮನವಿ ಸ್ವೀಕರಿಸುವುದಿಲ್ಲವೆಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.