ಕಾರಂತರು ಚೈತನ್ಯ ತುಂಬಿದ ಮಹಾತ್ಮರು: ಪೇಜಾವರ ಶ್ರೀ

ಡಾ| ಸಂಧ್ಯಾ ಎಸ್‌. ಪೈ ಅವರಿಗೆ "ಕಾರಂತ ಪ್ರಶಸ್ತಿ' ಪ್ರದಾನ

Team Udayavani, Oct 11, 2021, 6:05 AM IST

ಕಾರಂತರು ಚೈತನ್ಯ ತುಂಬಿದ ಮಹಾತ್ಮರು: ಪೇಜಾವರ ಶ್ರೀ

ಮಂಗಳೂರು: ಕಲೆ, ಸಾಹಿತ್ಯ, ಸಂಸ್ಕೃತಿ ನಮ್ಮ ಬದುಕಿಗೆ ಚೈತನ್ಯ ತುಂಬುತ್ತದೆ. ಯಾರು ತಮ್ಮ ಬದುಕಿಗೆ ಮಾತ್ರವಲ್ಲದೆ ನಾಡಿಗೆ, ಸಮಾಜಕ್ಕೆ ಚೈತನ್ಯ ತುಂಬುತ್ತಾರೋ ಅವರು ಮಹಾತ್ಮರೆನಿಸಿಕೊಳ್ಳುತ್ತಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ| ಕೋಟ ಶಿವರಾಮ ಕಾರಂತರು ಈ ರೀತಿ ಚೈತನ್ಯವನ್ನು ತುಂಬಿದ್ದಾರೆ ಎಂದು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತರ ಹುಟ್ಟಹಬ್ಬದ ಪ್ರಯುಕ್ತ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಮಂಗಳೂರಿನಲ್ಲಿ ರವಿವಾರ ಜರಗಿದ ಸಮಾರಂಭದಲ್ಲಿ ತರಂಗ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಅವರಿಗೆ “ಕಾರಂತ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ಅಶೀರ್ವಚನ ನೀಡಿದರು.

ಬದುಕು ನಿಂತ ನೀರಾಗದೆ ಸದಾ ಕ್ರಿಯಾಶೀಲತೆಯಿಂದ ಕೂಡಿರಬೇಕು. ಕಲೆ, ಸಾಹಿತ್ಯ, ಸಂಸ್ಕೃತಿ ಬದುಕಿಗೆ ಚೈತನ್ಯ ತುಂಬುತ್ತದೆ. ತಮ್ಮ ಬರೆಹಗಳ ಮೂಲಕ ಸಮಾಜದಲ್ಲಿ ಸಾಹಿತ್ಯ ಮತ್ತು ಮೌಲ್ಯಗಳನ್ನು ತುಂಬುತ್ತಿರುವ ಡಾ| ಸಂಧ್ಯಾ ಪೈ ಅವರಿಗೆ “ಕಾರಂತ ಪ್ರಶಸ್ತಿ’ ಸಂದಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಅಭಿನಂದಿಸಿದರು.

ಸಂಸ್ಕೃತಿ, ನೈತಿಕ ಮೌಲ್ಯಗಳ ಉದ್ದೀಪನೆ: ಡಾ| ಸಂಧ್ಯಾ ಪೈ
ಪ್ರಶಸ್ತಿ ಸ್ವೀಕರಿಸಿದ ಡಾ| ಸಂಧ್ಯಾ ಪೈ ಅವರು ಮಾತನಾಡಿ, ನಾವು ಎಳೆ ಯರಾಗಿದ್ದಾಗ ಹಿರಿಯರು ಕಥೆಗಳ ಮೂಲಕ ಮಕ್ಕಳಲ್ಲಿ ಪರಂಪರೆ, ಸಂಸ್ಕೃತಿಯ ಅರಿವು ಮೂಡಿ ಸುತ್ತಿ ದ್ದರು ಮತ್ತು ನೈತಿಕ ಮೌಲ್ಯಗಳನ್ನು ತುಂಬು ತ್ತಿದ್ದರು. ಆದರೆ ಪ್ರಸ್ತುತ ಅದು ಮರೆಯಾಗುತ್ತಿದೆ. ಬದುಕನ್ನು ಬದಲಾಯಿಸಲು ಸಾಧ್ಯವಿರುವುದು ಜೀವನದ ಮೌಲ್ಯಗಳನ್ನು ಅರ್ಥೈಸಿ ಕೊಂಡಾಗ. ಇಂತಹ ಉತ್ತಮ ಪರಂಪರೆಯನ್ನು ತರಂಗದ ಮೂಲಕ ಯಾಕೆ ಮರು ಆರಂಭಿಸಬಾರದು ಎಂಬ ಚಿಂತನೆ ನನ್ನಲ್ಲಿ ಮೂಡಿತು ಮತ್ತು ಆ ಪ್ರಯತ್ನ ಜನಮಾನಸವನ್ನು ಮುಟ್ಟಿತು ಎಂದು ಹೇಳಿದರು.

ಇದನ್ನೂ ಓದಿ:ಪ್ರತಿ ಜಿಲ್ಲೆಯಲ್ಲಿ ಮಾದರಿ ಕೋವಿಡ್‌ಫೀಲ್ಡ್‌ ಆಸ್ಪತ್ರೆ ತೆರೆಯಲು ಸರ್ಕಾರ ಸಿದ್ಧವಿದೆ

ತರಂಗ ವಾರಪತ್ರಿಕೆಗೆ ಮುಂದಿನ ಜನವರಿಗೆ 40 ವರ್ಷಗಳ ಸಂಭ್ರಮ. ತರಂಗದ ವ್ಯವಸ್ಥಾಪಕ ಸಂಪಾದಕಿ ಯಾಗಿ 25 ವರ್ಷಗಳನ್ನು ಪೂರೈಸುತ್ತಿ ದ್ದೇನೆ. ಸಂತೃಪ್ತ ಗೃಹಿಣಿಯಾಗಿದ್ದ ನನ್ನ ಬದುಕಿನಲ್ಲಿ ತರಂಗ ಹೊಸ ಚಿಂತನೆಯ ತರಂಗಗಳನ್ನು ಸೃಷ್ಟಿಸಿತು. ನಾನು ಇಂದು ಮಾಡಿರುವ ಸಾಧನೆ, ದೊರಕಿರುವ ಸಮ್ಮಾನಗಳಲ್ಲಿ ತರಂಗ ವಾರಪತ್ರಿಕೆಯ ಪಾತ್ರ ಮಹತ್ತರವಾ ದುದು ಎಂದ ಅವರು ಮಹಾನ್‌ ಸಾಹಿತಿ, ಸಾಧಕ ಡಾ| ಶಿವರಾಮ ಕಾರಂತರು ಒಂದು ಪಠ್ಯವಿದ್ದಂತೆ.ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಯನ್ನು ಸ್ವೀಕರಿಸುತ್ತಿರುವುದು ನನ್ನಲ್ಲಿ ಧನ್ಯತೆಯನ್ನು ಮೂಡಿಸಿದೆ ಎಂದರು.

ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿ.ವಿ. ಕುಲಪತಿ ಪ್ರೊ| ಪಿ.ಎಸ್‌. ಯಡಪಡಿತ್ತಾಯ ಮಾತ ನಾಡಿ, ಡಾ| ಶಿವರಾಮ ಕಾರಂತರ ನಡೆ, ನುಡಿ, ಬದುಕು ನಮ್ಮೆಲ್ಲರ ಬದುಕಿಗೆ ಮಾರ್ಗದರ್ಶಿಯಾಗಿದೆ ಎಂದರು.

ಸಾಹಿತಿ ನಿತ್ಯಾನಂದ ಕಾರಂತ ಪೊಳಲಿ, ಶಾಸಕ ವೇದವ್ಯಾಸ ಕಾಮತ್‌, ಕರ್ಣಾಟಕ ಬ್ಯಾಂಕಿನ ಮಹಾ  ಪ್ರಬಂಧಕ ನಾಗರಾಜ ರಾವ್‌ ಅವರು ಕಾರಂತರ ಸ್ಮರಣೆಗೈದರು.

ಮೇಯರ್‌ ಪ್ರೇಮಾನಂದ ಶೆಟ್ಟಿ ಅವರು ದೀಪ ಬೆಳಗಿದರು. ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಕಾರಂತ ಪ್ರಶಸ್ತಿ ಪುರಸ್ಕೃತರಾದ ಡಾ| ಸಂಧ್ಯಾ ಎಸ್‌. ಪೈ ಅವರನ್ನು ಅಭಿನಂದಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಸ್ವಾಗತಿಸಿ ಕಾರಂತ ಹುಟ್ಟುಹಬ್ಬ ಮತ್ತು ಕಾರಂತ ಪ್ರಶಸ್ತಿ ಬಗ್ಗೆ ವಿವರಿಸಿದರು.

ಕೆ. ಮೋಹನ್‌ ರಾವ್‌ ಮೊಡಂಕಾಪು, ಡಾ| ಮಂಜುಳಾ ಶೆಟ್ಟಿ ಹಾಗೂ ಅಚ್ಯುತ ಚೇವಾರು ಅವರಿಗೆ ಕಲ್ಕೂರ ಅಭಿನಂದನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಪ್ರಬಂಧ ಸ್ಪರ್ಧೆ, ಕಾರ್ಡಿನಲ್ಲಿ ಚಿತ್ರಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ದಯಾನಂದ ಕಟೀಲು ಪ್ರಶಸ್ತಿ ಪತ್ರ ವಾಚಿಸಿದರು. ಪ್ರೊ| ಜಿ.ಕೆ. ಭಟ್‌ ಸೇರಾಜೆ ವಂದಿಸಿದರು. ಮಂಜುಳಾ ಶೆಟ್ಟಿ, ಕವಿತಾ ಪಕ್ಕಳ ನಿರೂಪಿಸಿದರು.

ಕಾರಂತರ ಜತೆ ತರಂಗದ ಅವಿನಾಭಾವ ಸಂಬಂಧ
ಡಾ| ಶಿವರಾಮ ಕಾರಂತರು ಮತ್ತು “ತರಂಗ’ದ ನಡುವೆ ಒಂದು ಅವಿನಾಭಾವ ಸಂಬಂಧವಿತ್ತು. ತರಂಗ ಪ್ರಾರಂಭದ ದಿನಗಳಲ್ಲಿ ಕಾರಂತರು ಕಾರಂತಜ್ಜನಾಗಿ ಮೂರು ವರ್ಷಗಳ ಕಾಲ ತರಂಗದ ಬಾಲವನದಲ್ಲಿ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದ್ದರು. ಮುಖಪುಟದ ಲೇಖನಗಳನ್ನೂ ಬರೆಯುತ್ತಿದ್ದರು. ಸೂಕ್ತ ಮಾರ್ಗದರ್ಶನ ನೀಡುತ್ತಿದ್ದರು ಎಂದು ಡಾ| ಸಂಧ್ಯಾ ಎಸ್‌. ಪೈ ಸ್ಮರಿಸಿದರು.

ಟಾಪ್ ನ್ಯೂಸ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.