ಕಟೀಲಿನಲ್ಲಿ ನಾಗಮಂಡಲ: ಲಕ್ಷಾಂತರ ಭಕ್ತರು ಭಾಗಿ

Team Udayavani, Feb 2, 2020, 5:43 AM IST

NAGAMANDALA

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗ ವಾಗಿ ಶನಿವಾರ ಸಂಭ್ರಮದ ನಾಗಮಂಡಲೋತ್ಸವ ನಡೆಯಿತು. ಸುಮಾರು 2ಲಕ್ಷಕ್ಕೂ ಹೆಚ್ಚು ಭಕ್ತರು ಭಾಗಿಯಾದರು.

ಸಂಜೆ ಆರು ಗಂಟೆಗೆ ದೇವಸ್ಥಾನದ ಒಳಭಾಗದ ನಾಗ ಸನ್ನಿಧಿಯಲ್ಲಿ ಹಾಲಿಟ್ಟು ಸೇವೆ ನಡೆದ ಬಳಿಕ ಭ್ರಾಮರೀವನದಲ್ಲಿ ಸಗ್ರಿ ಗೋಪಾಲಕೃಷ್ಣ ಸಾಮಗರ ನೇತೃತ್ವದಲ್ಲಿ ಮದ್ದೂರು ಕೃಷ್ಣ ಪ್ರಸಾದ ವೈದ್ಯ ಬಳಗದವರಿಂದ ನಾಗಮಂಡಲೋತ್ಸವ ನಡೆಯಿತು.

ಸುಮಾರು 2 ಲಕ್ಷ ಮಂದಿ ಅನ್ನ ಪ್ರಸಾದ ಮತ್ತು ಫಲಾಹಾರ ಸ್ವೀಕರಿಸಿ ದರು. ನಾಗಮಂಡಲ ವೀಕ್ಷಣೆಗೆ ಬಸ್‌ ನಿಲ್ದಾಣ, ರಥಬೀದಿ, ಭೋಜನ ಶಾಲೆ ಮತ್ತಿತರ 10 ಕಡೆಗಳಲ್ಲಿ ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ದೇವರ ದರ್ಶನಕ್ಕೆ ಸರತಿ ಸಾಲು ಮಾಡಿದ್ದು ಎಲ್ಲ ಭಕ್ತರೂ ದೇವರ ದರ್ಶನ ಅವಕಾಶ ಪಡೆದು ಧನ್ಯರಾದರು.

ಉಚಿತ ಸಂಚಾರ ಸೇವೆ
ಕಟೀಲಿಗೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಬೆಳಗ್ಗಿನಿಂದ ರಾತ್ರಿ 11.30ರ ವರೆಗೆ ಕಟೀಲು ರೂಟಿನಲ್ಲಿ ಸಂಚರಿಸುವ ಬಸ್‌ಗಳು ಉಚಿತ ಸೇವೆ ಒದಗಿಸಿದವು. ಕಟೀಲಿನ ಸುಮಾರು 36 ಆಟೋರಿಕ್ಷಾಗಳು ಉಚಿತ ಪ್ರಯಾಣ ಒದಗಿಸಿದ್ದು ಮೆಚ್ಚುಗೆಗೆ ಪಾತ್ರವಾಯಿತು. ಇದಲ್ಲದೆ ಉಡುಪಿ, ಪುತ್ತೂರು, ಮಂಗಳೂರು ಮೊದಲಾದ ಕಡೆಗಳಿಂದಲೂ ಭಕ್ತರು, ಸಂಘಸಂಸ್ಥೆಗಳು ಭಕ್ತರಿಗಾಗಿ ಉಚಿತ ವಾಹನ ವ್ಯವಸ್ಥೆ ಮಾಡಿದ್ದರು.

ಸುಮಾರು 16 ಕಡೆಗಳಲ್ಲಿ ಮಜ್ಜಿಗೆ ಹಾಗೂ ಪಾನಕದ ವ್ಯವಸ್ಥೆ ಮಾಡಲಾಗಿತ್ತು. 10 ಕೌಂಟರ್‌ನಲ್ಲಿ ಬಫೆ ಊಟದ ವ್ಯವಸ್ಥೆ ಮತ್ತು 500 ಟೇಬಲ್‌ನಲ್ಲಿ ನಿರಂತರ ಕುಳಿತು ಊಟ ಮಾಡುವ ರಾತ್ರಿ 1 ಗಂಟೆಯ ತನಕ ಅನ್ನದಾನ ವ್ಯವಸ್ಥೆ ನಡೆಯಿತು.
ದೇವಸ್ಥಾನದಲ್ಲಿ ಶನಿ ವಾರ ಬೆಳಗ್ಗೆ ಒಳಗಿನ ನಾಗಸನ್ನಿಧಿಯಲ್ಲಿ ಕಲಶಾ ಭಿಷೇಕ, ತಿಲಹೋಮ, ಕೂಷ್ಮಾಂಡ ಹೋಮ, ಪವ ಮಾನ ಹೋಮ, ಸರ್ಪತ್ರಯ ಮಂತ್ರ ಹೋಮ ಮೊದಲಾದ ಧಾರ್ಮಿಕ ವಿಧಿವಿಧಾನಗಳು ನಡೆದವು.

ಇಂದು ಕೋಟಿ ಜಪ ಯಜ್ಞ
ಮಾರ್ಕಂಡೇಯ ಪುರಾಣದಲ್ಲಿ ಉದ್ಧರಿಸಲ್ಪಟ್ಟ ದೇವೀಮಹಾತ್ಮೆಯ ಸ್ತುತಿ ಶ್ಲೋಕವೊಂದನ್ನು ಭಕ್ತರೆಲ್ಲರೂ ಸೇರಿ ಕೋಟಿಸಂಖ್ಯೆಗಳಲ್ಲಿ ಜಪಿಸಲು ಕಟೀಲು ದುರ್ಗಾ ಪರಮೇಶ್ವರೀ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಸಂಕಲ್ಪಿಸಿತ್ತು. ಸುಮಾರು 30 ಸಾವಿರ ಭಕ್ತರು ಇದರ ದೀಕ್ಷೆ ಪಡೆದಿದ್ದಾರೆ. ರವಿವಾರ ಬೆಳಗ್ಗೆ 6ರಿಂದ ಸಂಜೆ 6ರ ತನಕ ಕೋಟಿ ಜಪಕ್ಕೆ ನೋಂದಣಿ ಮಾಡಿದವರು ಭ್ರಾಮರೀ ವನದ ಕೌಂಟರ್‌ನಲ್ಲಿ ಕುಂಕುಮ ಪಡೆದು ಮಂತ್ರಪಠಣ ಮಾಡಿ ಭ್ರಾಮರೀ ವನದಲ್ಲಿ ಕುಂಕುಮ ನೀಡಿ ಬಳಿಕ ಪ್ರಸಾದ ಪಡೆಯಬಹುದು.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.