100 ದಿನಗಳಲ್ಲಿ 110 ಕೆರೆಗಳಿಗೆ ಪುನಶ್ಚೇತನ ಭಾಗ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

Team Udayavani, Apr 6, 2022, 6:35 AM IST

100 ದಿನಗಳಲ್ಲಿ 110 ಕೆರೆಗಳಿಗೆ ಪುನಶ್ಚೇತನ ಭಾಗ್ಯ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ “ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮದಂತೆ ನಿರ್ಲಕ್ಷ್ಯಕ್ಕೊಳಗಾದ ಕೆರೆಗಳಿಗೆ ಕಾಯಕಲ್ಪ ನೀಡಲಾಗುತ್ತಿದ್ದು, ಪ್ರಸಕ್ತ ವರ್ಷ ಕೇವಲ 100 ದಿನಗಳಲ್ಲಿ ರಾಜ್ಯದ 110 ಕೆರೆಗಳಿಗೆ ಪುನಶ್ಚೇತನ ನೀಡಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ತಿಳಿಸಿದ್ದಾರೆ.

ರಾಜ್ಯದಲ್ಲಿ ಸಾವಿರಾರು ಕೆರೆಗಳಿದ್ದರೂ ನಿರ್ವಹಣೆಯಿಲ್ಲದೆ ಹೂಳು ತುಂಬಿವೆ. ಕೆಲವೆಡೆ ಮರಳು, ಮಣ್ಣಿಗಾಗಿ ಕೆರೆಯ ಒಡಲನ್ನು ಅಗೆಯುವುದು, ಒತ್ತುವರಿ ಮೊದಲಾದ ಕಾರಣಗಳಿಂದ ಇಡೀ ಗ್ರಾಮಕ್ಕೆ ನೀರುಣಿಸುತ್ತಿದ್ದ ಕೆರೆಗಳು ಹನಿ ನೀರಿಲ್ಲದೆ ಬತ್ತಿ ಹೋಗಿವೆ. ಹನಿ ನೀರಿಗಾಗಿ ಪರದಾಡುತ್ತಿರುವ ರೈತರು, ಮಹಿಳೆಯರ ಸಂಕಷ್ಟ ಗಮನಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ವೀ. ಹೆಗ್ಗಡೆಯವರು ಪಾರಂಪರಿಕ ಕೆರೆಗಳ ಪುನಶ್ಚೇತನಕ್ಕಾಗಿಯೇ “ನಮ್ಮೂರು ನಮ್ಮ ಕೆರೆ’ ಕಾರ್ಯಕ್ರಮವನ್ನು 2016ರಲ್ಲಿ ಪ್ರಾರಂಭಿಸಿದ್ದಾರೆ.

ವರ್ಷದ ಕೊನೆಯ ವರೆಗೂ ಸುರಿದ ಮಳೆಯಿಂದಾಗಿ ಕಳೆದ ಡಿಸೆಂಬರ್‌ ಮಧ್ಯಭಾಗದಲ್ಲಿ ಕೆರೆಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು, 9 ಎಂಜಿನಿಯರ್‌ಗಳು, 130 ನೋಡೆಲ್‌ ಅಧಿಕಾರಿಗಳು ಹಾಗೂ 550ಕ್ಕೂ ಹೆಚ್ಚು ಕೆರೆ ಸಮಿತಿ ಪದಾಧಿಕಾರಿಗಳ ತಂಡ ಜಲಯೋಧರಾಗಿ ದುಡಿದು ಯಶಸ್ಸಿಗೆ ಕಾರಣರಾಗಿದ್ದಾರೆ. 340 ಜೆಸಿಬಿ ಹಾಗೂ ಹಿಟಾಚಿ ಯಂತ್ರಗಳು, 2,450ಕ್ಕೂ ಅಧಿಕ ಟ್ರಾಕ್ಟರ್‌/ಟಿಪ್ಪರ್‌ಗಳನ್ನು ಬಳಸಿಕೊಳ್ಳಲಾಗಿದೆ. ಮಳೆ ನೀರನ್ನು ಹಿಡಿದಿಟ್ಟುಕೊಂಡು ಪರಿಸರದ ಅಂತರ್ಜಲ ಮಟ್ಟ ಹೆಚ್ಚಿಸಿ, ಜನ-ಜಾನುವಾರುಗಳ ನೀರಿನ ಬವಣೆಯನ್ನು ಈ ಕೆರೆಗಳು ನೀಗಿಸಲಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಡಾ| ಪ್ರಭಾಕರ ಭಟ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ದುರಸ್ತಿಗೊಂಡ ಕೆರೆಗಳ ವೈಶಿಷ್ಟ್ಯ
ಹೂಳು ತುಂಬಿ ಸ್ವರೂಪವನ್ನೇ ಕಳಕೊಂಡಿದ್ದ ನಾಡಪ್ರಭು ಕೆಂಪೇಗೌಡರು ರಾಮನಗರದ ಸಾವನದುರ್ಗ ಕೋಟೆಯಲ್ಲಿ ಯುದೊœàಪಕರಣಗಳನ್ನು ತಯಾರಿಸುತ್ತಿದ್ದ ಸೈನಿಕರಿಗಾಗಿ ನಿರ್ಮಿಸಿದ ಮೇಲೆಹಳ್ಳಿ ಕೆರೆ, ಕೆಳದಿ ಚೆನ್ನಮ್ಮನ ಆಳ್ವಿಕೆಯಲ್ಲಿ ನಿರ್ಮಾಣವಾಗಿದ್ದ ಹೊಸನಗರ ತಾಲೂಕಿನ ಒಟ್ಟೂರು ಕೆರೆಗಳು ಪುನಶ್ಚೇತನಗೊಂಡಿವೆ. ಸಂಡೂರು ಮಹಾರಾಣಿಗಾಗಿ ನಿರ್ಮಾಣವಾಗಿದ್ದ ಬೊಮ್ಮನಹಳ್ಳಿ ಕೆರೆ, ಮಕ್ಕಳಿಲ್ಲದ ಮಲ್ಲಕ್ಕ ಊರಿಗೆ ಕೊಡುಗೆಯಾಗಿ ನಿರ್ಮಿಸಿದ ಕಿತ್ತೂರು ಮಲ್ಲಕ್ಕನಕೆರೆ ಮೊದಲಾದ ಕೆರೆಗಳು ಜಲಸಂಗ್ರಹಕ್ಕೆ ಅಣಿಯಾಗಿವೆ.

ಪುನಶ್ಚೇತನಗೊಂಡ ಕೆರೆಗಳ ನಿರ್ವಹಣೆಯ ಜವಾಬ್ದಾರಿಯನ್ನು ಕೆರೆ ಸಮಿತಿ ಹಾಗೂ ಗ್ರಾ.ಪಂ.ಗಳಿಗೆ ವಹಿಸಲಾಗುತ್ತಿದೆ. ಪ್ರದೇಶವಾರು ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ಕೆರೆಯ ಸುತ್ತ ನೆಡಲಾಗುವುದು. ಕಾಮಗಾರಿ ಸಂದರ್ಭ ಸ್ವಾಮೀಜಿಗಳು, ಶಾಸಕರು ಹಾಗೂ ಇತರ ಜನಪ್ರತಿನಿಧಿಗಳು, ವಿವಿಧ ಇಲಾಖಾಧಿಕಾರಿಗಳು ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹಿಸಿದ್ದಾರೆ ಎಂದು ಡಾ| ಮಂಜುನಾಥ್‌ ತಿಳಿಸಿದ್ದಾರೆ.

ಇದುವರೆಗಿನ ಸಾಧನೆ
-ಪುನಶ್ಚೇತನಗೊಂಡ ಒಟ್ಟು ಕೆರೆಗಳು: 452
-ತೆಗೆದ ಹೂಳಿನ ಪ್ರಮಾಣ(ಕ್ಯೂ.ಮೀ): 11.86 ಕೋಟಿ
-ಹೆಚ್ಚಳವಾಗಿರುವ ನೀರಿನ ಸಂಗ್ರಹ ಸಾಮರ್ಥ್ಯ: 887.83 ಕೋಟಿ ಗ್ಯಾಲನ್‌
-ಪ್ರಯೋಜನ ಪಡೆಯುವ ಕೃಷಿಭೂಮಿ: 1.14 ಲಕ್ಷ ಎಕರೆ
-ಪ್ರಯೋಜನ ಪಡೆದ ಕುಟುಂಬಗಳು: 2.03 ಲಕ್ಷ
-ಸಂಸ್ಥೆಯಿಂದ ನೀಡಿದ ಅನುದಾನ:30.58 ಕೋ.ರೂ.
-ಸ್ಥಳೀಯರ ಪಾಲು (ಹೂಳು ಸಾಗಾಟ): 33.29 ಕೋ.ರೂ.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.