ಸಾಮಾಜಿಕ ನ್ಯಾಯದ ಹೋರಾಟಗಾರ ಮಂಗಳೂರಿನಲ್ಲಿ

Team Udayavani, Mar 18, 2018, 12:56 PM IST

18-March-11.jpg

ಬಾಬು ಜಗಜೀವನ್‌ ರಾಮ್‌- ಅವರು ಬಾಬೂಜಿ ಎಂದೇ ಪ್ರಸಿದ್ಧರಾಗಿದ್ದವರು. ಶೋಷಿತರ ಪರವಾಗಿ ಜೀವನಪೂರ್ತಿ (1908-86) ಹೋರಾಟ ನಡೆಸಿದವರು. ತನ್ನ ಹರೆಯದಲ್ಲೇ ‘ಅಖಿಲ ಭಾರತ ಶೋಷಿತ ವರ್ಗಗಳ ಲೀಗ್‌’ ಸ್ಥಾಪಿಸಿ ಜಾಗೃತಿ ಮೂಡಿಸಿದವರು.

ಬಿಹಾರದ ಬಾಬೂಜಿ ಅವರು ಪ್ರಧಾನಿ ಮೊರಾರ್ಜಿ ದೇಸಾೖ ಅವರ (ಜನತಾ ಪಕ್ಷ) ಸಂಪುಟದಲ್ಲಿ (1977-79) ಉಪ ಪ್ರಧಾನಿಯಾಗಿದ್ದರು. ಅದಕ್ಕೆ ಮೊದಲು ಇಂದಿರಾ ಗಾಂಧಿ ಮಂತ್ರಿಮಂಡಲದಲ್ಲಿ ವಿವಿಧ ಖಾತೆಗಳನ್ನು ನಿರ್ವಹಿಸಿದವರು. ಅವರು ರಕ್ಷಣಾ ಸಚಿವರಾಗಿದ್ದಾಗಲೇ 1971ರಲ್ಲಿ ಭಾರತ-ಪಾಕ್‌ ಯುದ್ಧ ನಡೆಯಿತು. ಭಾರತ ಯುದ್ಧ ಗೆದ್ದಿತು; ಪಾಕ್‌ ವಿಭಜನೆಯಾಗಿ ಬಾಂಗ್ಲಾದೇಶ ಅಸ್ತಿತ್ವಕ್ಕೆ ಬಂತು.

ಇಂದಿರಾ ತುರ್ತು ಪರಿಸ್ಥಿತಿ ಹೇರಿದಾಗ ಬಾಬೂಜಿ ಸಂಪುಟದಲ್ಲಿದ್ದವರು. ಬಳಿಕ ಸಂಪುಟಕ್ಕೆ ರಾಜಿನಾಮೆ ನೀಡಿದ ಪ್ರಥಮ ಹಿರಿಯ ಸಚಿವರಾಗಿ ದೇಶಾದ್ಯಂತ ಸಂಚಲನ ಮೂಡಿಸಿದವರು. ಅನಂತರ ಲೋಕಸಭೆಗೆ ನಡೆದ ಚುನಾವಣೆ ಯಲ್ಲಿ ಕಾಂಗ್ರೆಸ್‌ ಸೋತಿತು. ವಿಪಕ್ಷಗಳು ಒಂದಾಗಿ ಕಟ್ಟಿದ್ದ ಜನತಾ ಪಕ್ಷ ಅಧಿಕಾರಕ್ಕೆ ಬಂತು. ಪ್ರಧಾನಿ ಪಟ್ಟಕ್ಕೆ ಬಾಬೂಜಿ ಹೆಸರಿತ್ತು. ಆದರೆ ಅವರು ಉಪ ಪ್ರಧಾನಿ ಆಗ ಬೇಕಾಯಿತು. ಈ ಸರಕಾರ ಅಲ್ಪಾಯುಷಿಯಾಗಿತ್ತು!

ಬಾಬೂಜಿ ಉಪಪ್ರಧಾನಿಯಾಗಿದ್ದಾಗ ಮಂಗಳೂರಿಗೆ ಬಂದಿದ್ದರು. ಅದು ಕರ್ನಾಟಕದ ವಿಧಾನಸಭೆಗೆ 1978ರಲ್ಲಿ ನಡೆದ ಚುನಾವಣೆಯ ಸಂದರ್ಭ. ಆಗ ಮಂಗಳೂರು ಕ್ಷೇತ್ರ (ಈಗ ಭೌಗೋಳಿಕ ಸ್ವರೂಪ ಸ್ವಲ್ಪ ವಿಸ್ತರಿಸಿ ಮಂಗಳೂರು ದಕ್ಷಿಣ ಎಂದಾಗಿದೆ) ಜನತಾ ಪಕ್ಷದ ಅಭ್ಯರ್ಥಿ ಶಾರದಾ ಆಚಾರ್‌. ನೆಹರೂ ಮೈದಾನದಲ್ಲಿ ಬಾಬೂಜಿ ಅವರ ಸಾರ್ವಜನಿಕ ಚುನಾವಣಾ ಪ್ರಚಾರ ಭಾಷಣ ಏರ್ಪಾಡಾಗಿತ್ತು. (ವಿದ್ಯಾರ್ಥಿಯಾಗಿದ್ದ ನಾನು ಈ ಕಾರ್ಯಕ್ರಮದ ಪ್ರೇಕ್ಷಕರಲ್ಲಿ ಓರ್ವನಾಗಿದ್ದೆ). ಗಣನೀಯ ಸಂಖ್ಯೆಯಲ್ಲಿ ಜನ ಸೇರಿದ್ದರು. ಅವರು ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು.

ತುರ್ತು ಪರಿಸ್ಥಿತಿಯ ದೌರ್ಜನ್ಯ- ಇಂದಿರಾ ಸರ್ವಾಧಿಕಾರ- ಹಸಿರು ಕ್ರಾಂತಿ-ದಲಿತರ ಸಮಸ್ಯೆ- ಸಾಮಾಜಿಕ ನ್ಯಾಯ- ಕರ್ನಾಟಕದಲ್ಲೂ ಜನತಾಪಕ್ಷ ಅಧಿಕಾರಕ್ಕೆ ಬರಬೇಕಾದ ಅಗತ್ಯ ಬಗ್ಗೆ ಬಾಬೂಜಿ 70 ನಿಮಿಷ ಮಾತನಾಡಿದ್ದರು. ಜನತಾ ಪಕ್ಷದ ಅಭ್ಯರ್ಥಿಯಾಗಿದ್ದ- ರಾಷ್ಟ್ರೀಯ ಜನಸಂಘ ಪಕ್ಷ ಮೂಲದ ಶಾರದಾ ಆಚಾರ್‌ ಅವರು ಪ್ರಸಿದ್ಧ ಸಾಮಾಜಿಕ- ರಾಜಕೀಯ ಮುಂದಾಳಾಗಿದ್ದವರು. 1964ರಲ್ಲಿ ಪ್ರಥಮವಾಗಿ ಮಂಗಳೂರು ನಗರಸಭೆಗೆ ಆಗಿನ ಮೂರನೇ ಡಿವಿಜನ್‌ ವಾರ್ಡ್‌ನಿಂದ ಆಯ್ಕೆಯಾದವರು. ಮೂರು ಬಾರಿ ಅವರು ಇಲ್ಲಿ ಆಯ್ಕೆಯಾಗಿದ್ದರು. ನಗರಸಭೆಯ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದವರು.

ಬಾಬೂಜಿ ಆಗಿನ ಸಂದರ್ಭದ ಈ ಪ್ರದೇಶ ಕಾಂಗ್ರೆಸ್‌ ಭದ್ರಕೋಟೆ ಎಂದು ತಿಳಿದವರಾಗಿದ್ದರು. ಆದ್ದರಿಂದ, ಕೇಂದ್ರದಂತೆ ರಾಜ್ಯದಲ್ಲೂ ಜನತಾ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮತದಾರರನ್ನು ವಿನಂತಿಸಿದ್ದರು.

ಮನೋಹರ ಪ್ರಸಾದ್‌

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.