ಶೀಘ್ರದಲ್ಲಿ ಮಿನಿ ವಿಧಾನಸೌಧ ನಿರ್ಮಾಣ

ಇಲಾಖೆಯಿಂದ ನೀಲಿ ನಕಾಶೆ ತಯಾರಿ

Team Udayavani, Feb 7, 2020, 5:02 AM IST

big-30

ಮೂಲ್ಕಿ: ಮೂಲ್ಕಿಯಲ್ಲಿ ಮಿನಿ ವಿಧಾನಸೌಧದ ನಿರ್ಮಾಣದ ಬಹು ಬೇಡಿಕೆಯ ಕನಸು ಇದೀಗ ಸಾಕಾರಗೊಳ್ಳುವ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆಯಿಂದ ಬೇಕಾದ ಸಿದ್ಧತೆ ನಡೆಸಿದ್ದು ನೀಲಿ ನಕಾಶೆ ತಯಾರಿಸಲಾಗಿದ್ದು ಶೀಘ್ರದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಕಾರ್ಯ ಆರಂಭ ವಾಗಲಿದೆ.

ಮೂಲ್ಕಿ ಜನತೆಯ 60 ವರ್ಷಗಳ ಕನಸಾಗಿದ್ದ ಮೂಲ್ಕಿ ತಾಲೂಕು ರಚನೆ ಪ್ರಸ್ತಾವನೆಗೆ ಈ ಹಿಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮೂಲ್ಕಿಯನ್ನು ತಾಲೂಕು ಆಗಿ ಘೋಷಣೆ ಮಾಡಿದ್ದರು. ಈ ನೆಲೆಯಲ್ಲಿ ತಾಲೂಕು ಆಡಳಿತದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಸಕಲ ಸಿದ್ಧತೆ ನಡೆಸಿತ್ತು. ಇಲ್ಲಿಯ ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕಾರ್ನಾಡು ಗೇರುಕಟ್ಟೆ ಬಳಿ ತಾಲೂಕು ಕಚೇರಿಗಾಗಿಯೇ ಎರಡು ಎಕ್ರೆ ಜಾಗವನ್ನು ಕಾದಿರಿಸಲಾಗಿದೆ.

ನೂತನವಾಗಿ ಮೂಲ್ಕಿ ತಾಲೂಕು ಕಚೇರಿಗೆ ಕಾರ್ಯನಿರ್ವಹಿಸಲು ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಎಲ್ಲ ಸಿದ್ಧತೆಗಳು ನಡೆಯುತ್ತಿವೆ. ಸುಮಾರು ಆರು ದಶಕಗಳಿಂದ ಸರ ಕಾರದ ವಿವಿಧ ಸಮಿತಿಗಳು ಮೂಲ್ಕಿ ತಾ| ಕೇಂದ್ರವಾಗಿಸಲು ಎಲ್ಲ ಅರ್ಹತೆ ಹೊಂದಿರುವ ಪ್ರದೇಶ ಎಂಬುದಾಗಿ ವರದಿ ನೀಡುತ್ತಲೇ ಬಂದಿದ್ದವು.

ಇದರಲ್ಲಿ ವಾಸುದೇವ ರಾವ್‌, ಹುಂಡೆಕಾರ್‌, ಗದ್ದಿಗೌಡರ್‌ ಮುಂತಾದ ಸಮಿತಿಗಳು ಬಲವಾಗಿ ಮೂಲ್ಕಿ ತಾಲೂಕು ಘೋಷ ಣೆಯ ಬಗ್ಗೆ ಪ್ರತಿಪಾದಿಸಿದ್ದವು. ಘೋಷಣೆಯ ಬಳಿಕ ಮೂಲ್ಕಿ ವಿಶೇಷ ತಹಶೀಲ್ದಾರರ ಕಚೇರಿಗೆ ಅನುದಾನಗಳು ಬಿಡುಗಡೆಯಾಗುತ್ತಿದೆ. ನ್ಯಾಯಾಲಯ, ತಾಲೂಕು ದಂಡಾಧಿಕಾರಿಗಳ ಕಚೇರಿ, ಸರಕಾರದ ವಿವಿಧ ಇಲಾಖೆಗಳ ಕಚೇರಿಗಳು ಮೂಲ್ಕಿಯಲ್ಲಿ ಆರಂಭಿಸುವುದಕ್ಕೆ ಎಲ್ಲ ಸಿದ್ಧತೆಗಳು ನಡೆಯುತ್ತಿದೆ.

ಸುಮಾರು 25 ಸೆಂಟ್ಸ್‌ ಜಾಗವನ್ನು ಸಮು ದಾಯವೊಂದರ ಭವನ ನಿರ್ಮಾಣಕ್ಕಾಗಿ ಸರಕಾರ ಈ ಹಿಂದೆ ಮಂಜೂರು ಮಾಡಿ ಕೊಟ್ಟಿರುವುದನ್ನು ತಾಲೂಕು ಕಚೇರಿಯ ನಿರ್ಮಾಣದ ಹಿನ್ನೆಲೆಯಲ್ಲಿ ಸರಕಾರ ಮತ್ತೆ ತನ್ನ ವಶಕ್ಕೆ ಪಡೆದುಕೊಂಡಿದೆ.

ಬಹುದಿನಗಳ ಕನಸು ನನಸು
ಜನತೆಯ ಬಹುದಿನಗಳ ಕನಸು ನಾನು ಶಾಸಕನಾಗಿರುವ ಅವಧಿಯಲ್ಲಿ ಪೂರ್ಣ ಗೊಂಡಿದೆ. ಮಾತ್ರವಲ್ಲ ಇದಕ್ಕೆ ಪೂರಕವಾಗಿ ಈಗಾಗಲೇ ಮೂಲ್ಕಿ ನಗರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಮೂಲ್ಕಿ ಹೊಬಳಿಯ 32 ಗ್ರಾಮಗಳ ಜನರಿಗೆ ಸರಕಾರದ ಎಲ್ಲ ಸೌಲಭ್ಯಗಳನ್ನು ಇಲ್ಲಿ ನಿರ್ಮಾಣವಾಗಲಿರುವ ಮಿನಿ ವಿಧಾನಸೌಧದ ಮೂಲಕ ಸಿಗಲಿದೆ. ಶೀಘ್ರದಲ್ಲಿ ತಾಲೂಕು ಮಿನಿ ವಿಧಾನಸೌಧ ನಿರ್ಮಾಣವಾಗಲಿದೆ. ಸರಕಾರದ ಎಲ್ಲ ಕೆಲಸ ಕಾರ್ಯಗಳು ಸರಿಯಾಗಿ ಜನರನ್ನು ತಲುಪಲಿವೆ.
 - ಉಮಾನಾಥ ಕೋಟ್ಯಾನ್‌, ಶಾಸಕರು, ಮೂಲ್ಕಿ- ಮೂಡುಬಿದಿರೆ ಕ್ಷೇತ್ರ

-  ಎಂ. ಸರ್ವೋತ್ತಮ ಅಂಚನ್‌

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.