ಮಿಸೆಸ್‌ ಇಂಡಿಯಾ ವರ್ಲ್ಡ್ ವೈಸ್‌ನಲ್ಲಿ ಮಂಗಳೂರಿನ ಸೌಜನ್ಯಾ ಹೆಗ್ಡೆ

Team Udayavani, Jul 25, 2017, 11:20 AM IST

Sowjanya-24-7.jpg

ಮಂಗಳೂರು: ಹಾಟ್‌ ಮೊಂಡೆ ಸಂಸ್ಥೆ ನಡೆಸುವ ಮಿಸೆಸ್‌ ಇಂಡಿಯಾ ವರ್ಲ್ಡ್ ವೈಸ್‌ನ ಅಂತಿಮ ಸುತ್ತಿಗೆ ಮಂಗಳೂರಿನ ಸೌಜನ್ಯಾ ಹೆಗ್ಡೆ ಆಯ್ಕೆಯಾಗಿದ್ದಾರೆ. ಆ. 5ರಂದು ಹೊಸದಿಲ್ಲಿಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ. ಮಂಗಳೂರಿನಿಂದ ಆಯ್ಕೆಯಾಗಿರುವ ಏಕೈಕ ಅಭ್ಯರ್ಥಿ ಅವರಾಗಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದ ಸೌಜನ್ಯಾ ಹೆಗ್ಡೆ, ಸ್ಪರ್ಧೆ ಹಿನ್ನೆಲೆಯಲ್ಲಿ ಜು. 27ರಿಂದ ಆ. 4ರವರೆಗೆ ವಿಯೆಟ್ನಾಂನಲ್ಲಿ ನಡೆಯುವ ಪೂರಕ ತರಬೇತಿಯಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿಸಿದರು.

ವಿಯೆಟ್ನಾಂನಲ್ಲಿ ಸ್ಪರ್ಧೆ
ವಿಯೆಟ್ನಾಂನಲ್ಲಿ ‘ಬ್ಯೂಟಿ ವಿತ್‌ ಹಾರ್ಟ್‌’ ಸೇರಿದಂತೆ 15 ವಿವಿಧ ಟೈಟಲ್‌ಗ‌ಳಿಗಾಗಿ 60 ಮಂದಿ ಸ್ಪರ್ಧಿಗಳ ನಡುವೆ ಸ್ಪರ್ಧೆ ಹಾಗೂ ಆಯ್ಕೆ ನಡೆಯಲಿದೆ. ಮಿಸೆಸ್‌ ಟಾಲೆಂಟ್‌ ಟೈಟಲ್‌ಗಾಗಿ ಒಂದು ನಿಮಿಷದ ಸ್ಪರ್ಧೆಯಲ್ಲಿ ನಾನು ದೇವಿಯ ಅವತಾರವನ್ನು ‘ಶಕ್ತಿ’ ಹೆಸರಿನಲ್ಲಿ ಪ್ರದರ್ಶಿಸಲು ಸಿದ್ಧತೆ ನಡೆಸಿದ್ದೇನೆ. ಸ್ಪರ್ಧೆಯ ಅಂತಿಮ ಸುತ್ತು ಆ. 5ರಂದು ಹೊಸದಿಲ್ಲಿಯಲ್ಲಿ ನಡೆಯಲಿದೆ ಎಂದು ಅವರು ಹೇಳಿದರು. ಮಂಗಳೂರಿನ ಎಂ. ಸದಾಶಿವ ಹೆಗ್ಡೆ ಹಾಗೂ ನಿಟ್ಟಡೆಗುತ್ತು ಸುಮತಿ ಹೆಗ್ಡೆ ಅವರ ಪುತ್ರಿಯಾಗಿರುವ ಸೌಜನ್ಯ ಹೆಗ್ಡೆ, ಬಾಲ್ಯದಿಂದಲೇ ಸೌಂದರ್ಯ ಸ್ಪರ್ಧೆ, ನೃತ್ಯ ಹಾಗೂ ಯಕ್ಷಗಾನಗಳ ಮೂಲಕ ಗಮನ ಸೆಳೆದವರು. ಕದ್ರಿ ನೃತ್ಯಾಲಯದಲ್ಲಿ ದಿ| ಕೃಷ್ಣರಾವ್‌ ಹಾಗೂ ಪುತ್ರ ವಿದ್ವಾನ್‌ ಪ್ರವೀಣ್‌ ಅವರಲ್ಲಿ ಭರತನಾಟ್ಯ ಅಭ್ಯಾಸ ಮಾಡಿದ್ದಾರೆ. ದಿ| ಕುಂಬಳೆ ಚಂದ್ರಶೇಖರ ಅವರಿಂದ ಯಕ್ಷಗಾನ ಅಭ್ಯಾಸದ ಜತೆಗೆ ಫಿಲ್ಮ್ ಡ್ಯಾನ್ಸ್‌, ಫೋಕ್‌ ಡ್ಯಾನ್ಸ್‌ ಹಾಗೂ ಫ್ರೀಸ್ಟೈಲ್‌ ಡ್ಯಾನ್ಸ್‌ಗಳನ್ನೂ ಕಲಿತಿದ್ದಾರೆ. ಮಾಡೆಲಿಂಗ್‌ ಕ್ಷೇತ್ರದ ಅನುಭವವನ್ನೂ ಹೊಂದಿದ್ದು, 1999ರಲ್ಲಿ ಮಿಸ್‌ ಕೋಸ್ಟಲ್‌, 2000ದಲ್ಲಿ ಪ್ಯಾಟಸಿ, 2001ರಲ್ಲಿ ಜೆಸಿ ಕ್ವೀನ್‌ ಹಾಗೂ ಕರಾವಳಿ 2002 ಮೊದಲಾದ ಕಿರೀಟಗಳನ್ನು ತನ್ನದಾಗಿಸಿಕೊಂಡಿದ್ದಾರೆ. ‘ಮಾಯಾಜಿಂಕೆ’ ಕನ್ನಡ ಚಲನಚಿತ್ರ ಹಾಗೂ ‘ಬೊಳ್ಳಿಲು’ ತುಳು ಚಿತ್ರದಲ್ಲಿ ನಟಿಸಿದ್ದಾರೆ. ಪತಿ ಸುಧೀರ್‌ ಹೆಗ್ಡೆ ನೈಜೀರಿಯಾದಲ್ಲಿ ಪೆಪ್ಸಿ ಬಾಟ್ಲಿಗ್‌ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ. ಸೌಜನ್ಯಾ ತಂದೆ ಸದಾಶಿವ ಹೆಗ್ಡೆ, ತಾಯಿ ಸುಮತಿ ಹೆಗ್ಡೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.