ವಿದ್ಯಾರ್ಥಿನಿಯರಿಗೆ ಕ್ರೀಡಾ ವಸತಿ ನಿಲಯ: 4 ತಿಂಗಳುಗಳಲ್ಲಿ ಪೂರ್ಣ

1.5 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ವಸತಿ ನಿಲಯ

Team Udayavani, Dec 11, 2022, 5:10 AM IST

ವಿದ್ಯಾರ್ಥಿನಿಯರಿಗೆ ಕ್ರೀಡಾ ವಸತಿ ನಿಲಯ: 4 ತಿಂಗಳುಗಳಲ್ಲಿ ಪೂರ್ಣ

ಮಹಾನಗರ: ಕ್ರೀಡಾ ಚಟುವಟಿಕೆಗಳಿಗೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನಗರದ ಲಾಲ್‌ಬಾಗ್‌ನ ಮಂಗಳಾ ಕ್ರೀಡಾಂಗಣ ಬಳಿ ಪ್ರತ್ಯೇಕ ಕ್ರೀಡಾ ವಸತಿ ನಿಲಯ ನಿರ್ಮಾಣವಾಗುತ್ತಿದೆ. ಈಗಾಗಲೇ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ನಾಲ್ಕು ತಿಂಗಳುಗ ಳಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಳ್ಳಲಿದೆ.

ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಕ್ರೀಡಾ ಕ್ಷೇತ್ರದಲ್ಲಿ ಹಿಂದುಳಿಯಬಾರದು ಎಂಬ ಉದ್ದೇಶವನ್ನಿಟ್ಟು ರಾಜ್ಯ ಸರಕಾರ 10 ಜಿಲ್ಲೆಗಳಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣಕ್ಕೆ ಮುಂದಾಗಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ವಸತಿ ನಿಲಯ ಮಂಗಳೂರಿನ ಮಂಗಳಾ ಕ್ರೀಡಾಂಗಣ ಬಳಿ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಈಗಾಗಲೇ ಶೇ.50ರಷ್ಟು ಕಾಮಗಾರಿ ಪೂರ್ಣಗೊಂಡಿದೆ.

ಮಂಗಳಾ ಕ್ರೀಡಾಂಗಣ ಬಳಿ ಈಗಾಗಲೇ ಎರಡು ಮಹಡಿಯ ಕ್ರೀಡಾ ವಸತಿ ನಿಲಯ ವಿದೆ. ಇದರ ನೆಲ ಮಹಡಿಯಲ್ಲಿ ಪ್ರೌಢ ಶಾಲಾ ಬಾಲಕಿಯರು ಮತ್ತು ಮತ್ತೂಂದು ಮಹಡಿಯಲ್ಲಿ ಪ್ರೌಢಶಾಲಾ ಬಾಲಕರು ವಾಸ್ತವ್ಯವಿದ್ದಾರೆ. ಆದರೆ ಸರಕಾರದ ನಿಯಮ ದಂತೆ ಬಾಲಕರು- ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯ ಇರಬೇಕು ಎಂದಿದೆ. ಈ ನಿಟ್ಟಿನಲ್ಲಿ ಈಗಿರುವ ಹಾಸ್ಟೆಲ್‌ ಪಕ್ಕದಲ್ಲಿಯೇ ಮತ್ತೂಂದು ವಸತಿ ನಿಲಯ ನಿರ್ಮಾಣ ಕಾಮಗಾರಿ ಸಾಗುತ್ತಿದೆ. ಈ ಹೊಸ ಕಟ್ಟಡದಲ್ಲಿ ಎರಡು ಮಹಡಿ ಇರಲಿದ್ದು, ಒಟ್ಟು 50 ಮಕ್ಕಳು ಉಳಿದುಕೊಳ್ಳಲು ಅವಕಾಶ ನೀಡಲಾಗುತ್ತದೆ.

ಹೇಗೆ ನಡೆಯಲಿದೆ ಆಯ್ಕೆ ಪ್ರಕ್ರಿಯೆ?
ಮಂಗಳಾ ಕ್ರೀಡಾಂಗಣ ಬಳಿ ಈಗಿರುವ ಹಳೆ ಕ್ರೀಡಾ ವಸತಿ ನಿಲಯದಲ್ಲಿ ಐದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ಒಟ್ಟು 40 ಮಂದಿ ವಿದ್ಯಾರ್ಥಿಗಳು ವಾಸ್ತವ್ಯವಿದ್ದಾರೆ. ಇದರಲ್ಲಿ 16 ಮಂದಿ ಬಾಲಕಿಯರು ಮತ್ತು 24 ಮಂದಿ ಬಾಲಕರು. ಸದ್ಯ ನೂತನ ಕ್ರೀಡಾ ವಸತಿ ನಿಲಯ ನಿರ್ಮಾಣವಾಗುತ್ತಿದ್ದು, ಬಳಿಕ ಬಾಲಕಿಯರನ್ನು ಅಲ್ಲಿಗೆ ಸ್ಥಳಾಂತರಿಸಲಾಗು ತ್ತದೆ. ಮತ್ತಷ್ಟು ಕ್ರೀಡಾಸಕ್ತರನ್ನು ಸೆಳೆಯುವ ನಿಟ್ಟಿನಲ್ಲಿ ಜಿಲ್ಲೆಯ ತಾಲೂಕು ಮಟ್ಟದಲ್ಲಿ ಯುವ ಜನ ಕ್ರೀಡಾ ಇಲಾಖೆಯಿಂದ ಈ ತಿಂಗಳು ಅಂತ್ಯಕ್ಕೆ ಆಯ್ಕೆ ಪ್ರಕ್ರಿಯೆಯೂ ನಡೆ ಸಲು ನಿರ್ಧರಿಸಲಾಗಿದೆ.

ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ
ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರೌಢಶಾಲಾ ವಿದ್ಯಾರ್ಥಿನಿಯರ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ ಸರಕಾರ ಮುಂದಾಗಿದೆ. ಅದರಂತೆ ದ.ಕ. ಜಿಲ್ಲೆಯ ಮಂಗಳೂರಿನಲ್ಲಿ ಕ್ರೀಡಾ ವಸತಿ ನಿಲಯ ನಿರ್ಮಾಣ ಹಂತದಲ್ಲಿದೆ. ಕಾಮಗಾರಿಗೆ ವೇಗ ನೀಡಲಾಗಿದ್ದು, ಕೆಲವೇ ತಿಂಗಳಿನಲ್ಲಿ ವಿದ್ಯಾರ್ಥಿನಿಯರಿಗೆ ಬಳಕೆಯಾಗಲಿದೆ.
-ರವಿ ವೈ. ನಾಯ್ಕ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.