ಪೂರ್ಣಗೊಳ್ಳುವ ಹಂತದಲ್ಲಿ ಕ್ರೀಡಾ ವಸತಿ ನಿಲಯ

ಮಂಗಳಾ ಕ್ರೀಡಾಂಗಣ ಬಳಿ 1.5 ಕೋ.ರೂ. ವೆಚ್ಚದಲ್ಲಿ ನಿರ್ಮಾಣ

Team Udayavani, Jun 27, 2023, 4:07 PM IST

ಪೂರ್ಣಗೊಳ್ಳುವ ಹಂತದಲ್ಲಿ ಕ್ರೀಡಾ ವಸತಿ ನಿಲಯ

ಮಹಾನಗರ: ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಲಾಲ್‌ಬಾಗ್‌ನ ಮಂಗಳಾ ಕ್ರೀಡಾಂಗಣ ಬಳಿ ನಿರ್ಮಾಣ ವಾಗುತ್ತಿರುವ ಕ್ರೀಡಾ ವಸತಿ ನಿಲಯ ಕಾಮಗಾರಿ ಕೊನೆಯ ಹಂತದಲ್ಲಿದೆ.

ನಗರದಲ್ಲಿ ನೀರಿನ ಕೊರತೆ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೆಲವು ತಿಂಗಳುಗಳಿಂದ ಜಿಲ್ಲಾಡಳಿತ ಸ್ಥಗಿತಗೊಳಿ ಸಿತ್ತು. ಇದೇ ಕಾರಣ ಕ್ರೀಡಾ ವಸತಿ ನಿಲಯ ಕಾಮಗಾರಿ ವಿಳಂಬಗೊಂಡಿತ್ತು. ಇದೀಗ ಮಳೆ ಬಂದ ಹಿನ್ನೆಲೆಯಲ್ಲಿ ನಗರದಲ್ಲಿ ನೀರಿನ ರೇಷನಿಂಗ್‌ ಕೂಡ ಕೈ ಬಿಡಲಾಗಿದೆ. ನೀರು ಲಭ್ಯತೆ ಹಿನ್ನೆಲೆಯಲ್ಲಿ ಕ್ರೀಡಾ ವಸತಿ ನಿಲಯದ ಕೆಲಸ ಮತ್ತೆ ಆರಂಭಗೊಂಡಿದೆ. ಈ ಕಾಮಗಾರಿಗೆ ಮತ್ತಷ್ಟು ವೇಗ ನೀಡಲು ನಿರ್ಧರಿಸಲಾಗಿದ್ದು, ಮೂರ್‍ನಾಲ್ಕು ತಿಂಗಳೊ ಳಗೆ ಕಾಮಗಾರಿ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದೆ.

1.5 ಕೋಟಿ ರೂ. ವೆಚ್ಚ
ಕ್ರೀಡಾ ಚಟುವಟಿಕೆಗಳಲ್ಲಿ ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಹಿಂದುಳಿಯಬಾರದು ಎಂಬ ಉದ್ದೇಶಕ್ಕೆ ರಾಜ್ಯ ಸರಕಾರ 10 ಜಿಲ್ಲೆಗಳಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣಕ್ಕೆ ಮುಂದಾಗಿತ್ತು. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ ವಸತಿ ನಿಲಯ ಸುಮಾರು 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಲಾಲ್‌ಬಾಗ್‌ನ ಮಂಗಳೂರು ಮಂಗಳಾ ಕ್ರೀಡಾಂಗಣ ಬಳಿ ಈಗಾಗಲೇ ಎರಡು ಮಹಡಿಯ ಕ್ರೀಡಾ ವಸತಿ ನಿಲಯವಿದೆ. ಇದರ ನೆಲ ಮಹಡಿಯಲ್ಲಿ ಪ್ರೌಢಶಾಲಾ ಬಾಲಕಿಯರು, ಮತ್ತೂಂದು ಮಹಡಿಯಲ್ಲಿ ಪ್ರೌಢಶಾಲಾ ಬಾಲಕರು ವಾಸ್ತವ್ಯವಿದ್ದಾರೆ. ಆದರೆ ಸರಕಾರದ ನಿಯಮದಂತೆ ಬಾಲಕರು- ಬಾಲಕಿಯರಿಗೆ ಪ್ರತ್ಯೇಕ ವಸತಿ ನಿಲಯ ಇರಬೇಕು ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ಈಗಿರುವ ಹಾಸ್ಟೆಲ್‌ ಪಕ್ಕದಲ್ಲಿಯೇ ಮತ್ತೂಂದು ವಸತಿ ನಿಲಯ ನಿರ್ಮಾಣಕ್ಕೆ ನಿರ್ಧರಿಸಿ ಕಾಮಗಾರಿ ಸಾಗುತ್ತಿದೆ. ಈ ಹೊಸ ಕಟ್ಟಡದಲ್ಲಿ ಎರಡು ಮಹಡಿ ಇರಲಿದ್ದು, ಒಟ್ಟು 50 ವಿದ್ಯಾರ್ಥಿಗಳು ಉಳಿದುಕೊಳ್ಳಲು ಅವಕಾಶ ನೀಡಲಾಗುತ್ತದೆ.

ಹಳೆ ಕಟ್ಟಡ; 31 ಮಂದಿ ವಾಸ್ತವ್ಯ
ಮಂಗಳಾ ಕ್ರೀಡಾಂಗಣ ಬಳಿ ಈಗಿರುವ ಹಳೆ ಕ್ರೀಡಾ ವಸತಿ ನಿಲಯದಲ್ಲಿ ಐದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ಒಟ್ಟು 50 ಮಂದಿ ವಿದ್ಯಾರ್ಥಿಗಳು ವಾಸ್ತ ವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಸದ್ಯ 31 ಮಂದಿ ವಾಸ್ತವ್ಯ ಹೂಡಿದ್ದಾರೆ. ಇದರಲ್ಲಿ 18 ಮಂದಿ ಬಾಲಕಿಯರು, 13 ಮಂದಿ ಬಾಲಕರು. ಈಗಾಗಲೇ ನೂತನ ಕ್ರೀಡಾ ವಸತಿ ನಿಲಯ ನಿರ್ಮಾಣವಾಗುತ್ತಿದ್ದು, ಬಳಿಕ ಬಾಲಕಿ ಯರನ್ನು ಅಲ್ಲಿಗೆ ಸ್ಥಳಾಂತರಿಸಲಾಗುತ್ತದೆ.

ಕಾಮಗಾರಿ ಆರಂಭ
ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಬೇಕು ಎಂಬ ನಿಟ್ಟಿನಲ್ಲಿ ಮಂಗಳಾ ಕ್ರೀಡಾಂಗಣ ಬಳಿ ಕ್ರೀಡಾ ವಸತಿ ನಿಲಯ ನಿರ್ಮಾಣ ಆಗುತ್ತಿದೆ. ನೀರಿನ ಕೊರತೆ ಇದ್ದ ಕಾರಣ ಕೆಲವು ದಿನಗಳವರೆಗೆ ಕಾಮಗಾರಿ ನಿಲ್ಲಿಸಲಾಗಿತ್ತು. ಈಗ ಮತ್ತೆ ಆರಂಭಗೊಂಡಿದ್ದು, ಕೊನೆಯ ಹಂತದಲ್ಲಿದೆ.
-ರವಿ ವೈ. ನಾಯ್ಕ ,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.