ಎಸೆಸೆಲ್ಸಿ , ಪಿಯುಸಿಯಲ್ಲಿ ಅಗ್ರ ಶ್ರೇಣಿಗಾಗಿ ಕರಾವಳಿಯ ತುಡಿತ

Team Udayavani, Mar 5, 2021, 7:30 AM IST

ಎಸೆಸೆಲ್ಸಿ , ಪಿಯುಸಿಯಲ್ಲಿ ಅಗ್ರ ಶ್ರೇಣಿಗಾಗಿ ಕರಾವಳಿಯ ತುಡಿತ

ಮಂಗಳೂರು: ಕೋವಿಡ್ ಕಾರಣದಿಂದ ಶೈಕ್ಷಣಿಕ ವ್ಯವಸ್ಥೆ ಕಂಗೆಟ್ಟಿದ್ದರೂ ಈ ಬಾರಿಯೂ ಎಸೆಸೆಲ್ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿ ಈ ಬಾರಿಯೂ ಅಗ್ರಶ್ರೇಣಿ ಕಾಯ್ದುಕೊಳ್ಳಲು ದಕ್ಷಿಣ ಕನ್ನಡ, ಉಡುಪಿ ಜಿಲೆಯ ಶಿಕ್ಷಣ ಇಲಾಖೆ ವಿಶೇಷ ನಿಗಾ ಇರಿಸಿದೆ.

ಈ ಎರಡೂ ಜಿಲ್ಲೆಗಳ ಶಿಕ್ಷಣ ಇಲಾಖಾ ಅಧಿಕಾರಿಗಳು ಮತ್ತು ಶಿಕ್ಷಕರು ಉನ್ನತ ಫಲಿತಾಂಶಕ್ಕಾಗಿ ಈಗಾಗಲೇ ವಿವಿಧ ಕಾರ್ಯಯೋಜನೆಗಳನ್ನು ರೂಪಿಸಿದ್ದಾರೆ. ಈ ಬಾರಿ ಎಸೆಸೆಲ್ಸಿ / ಪಿಯುಸಿಯಲ್ಲಿ ಶೇ. 30ರಷ್ಟು ಪಠ್ಯಕ್ರಮ ಕಡಿತಗೊಂಡಿರುವ ಕಾರಣ “ಪ್ರಶ್ನಾ ಬ್ಯಾಂಕ್‌’ ಅನ್ನು ಈ ಬಾರಿ ಕರಾವಳಿ ಭಾಗದಲ್ಲಿ ಹೆಚ್ಚು ಆದ್ಯತೆ ನೆಲೆಯಲ್ಲಿ ಸಿದ್ಧಪಡಿಸಲಾಗುತ್ತಿದೆ.

29 ಅಧಿಕಾರಿಗಳಿಂದ 165 ಶಾಲೆಗಳ ದತ್ತು :

ಎಸೆಸೆಲ್ಸಿ ಫಲಿತಾಂಶದಲ್ಲಿ ದ.ಕ. ಜಿಲ್ಲೆ ಉತ್ತಮ ಸ್ಥಾನ ಗಳಿಸಬೇಕೆಂಬ ಇರಾದೆಯಿಂದ ತರಗತಿಗೆ ಹಾಜರಾಗದ ಸುಮಾರು 3,000 ಮಕ್ಕಳ ಮನೆಗೆ ಶಿಕ್ಷಕರು, ಅಧಿಕಾರಿಗಳು ಖುದ್ದು ಭೇಟಿ ನೀಡಿ ಅವರ ಮನವೊಲಿಸಿ ತರಗತಿಗೆ ಹಾಜರಾಗುವಂತೆ ಶ್ರಮಿಸುತ್ತಿದ್ದಾರೆ. ಆಯ್ದ 72 ಶಿಕ್ಷಕರಿಗೆ ವಿಶೇಷ ತರಬೇತಿ ನೀಡಿ ಅವರ ಮೂಲಕ ಬ್ಲಾಕ್‌ ಮಟ್ಟದಲ್ಲಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಈ ಹಿಂದೆ ಶೇ. 60ಕ್ಕಿಂತ ಕಡಿಮೆ ಅಂಕ ಪಡೆದ ಶಾಲೆಗಳ ಶಿಕ್ಷಕರಿಗೆ ಪ್ರತ್ಯೇಕವಾಗಿ ತರಬೇತಿ ನೀಡಲಾಗಿದೆ. ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳನ್ನು ವಸತಿ ನಿಲಯದಲ್ಲಿರಿಸಿ ವಿಶೇಷ ತರಬೇತಿ ನೀಡಲೂ ಉದ್ದೇಶಿಸಲಾಗಿದೆ. ಸಂಕಲನಾತ್ಮಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದವರ ಬಗ್ಗೆ ಸಂಬಂಧಪಟ್ಟ ಶಾಲೆ ವಿಶೇಷ ಒತ್ತು ನೀಡಲಿದೆ. ಒಟ್ಟು 29 ಅಧಿಕಾರಿಗಳ ಮೂಲಕ 165 ಶಾಲೆಗಳನ್ನು ದತ್ತು ಪಡೆದುಕೊಂಡು ಉತ್ತಮ ಫಲಿತಾಂಶಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮಕ್ಕಳ ಜತೆಗೆ ಫೋನ್‌ ಇನ್‌! :

ಉಡುಪಿ ಜಿಲ್ಲೆಯಲ್ಲಿ ಸಂಜೆ 5ರಿಂದ 7ರ ವರೆಗೆ “ಫೋನ್‌ ಇನ್‌’ ಎಂಬ ಪರಿಕಲ್ಪನೆಯ ಮೂಲಕ ಮಕ್ಕಳ ಪ್ರಶ್ನೆಗಳಿಗೆ ನುರಿತ ಶಿಕ್ಷಕರು ಉತ್ತರ ನೀಡುವ ವಿಶೇಷ ಪ್ರಯತ್ನ ನಡೆಯುತ್ತಿದೆ. ಪ್ರತೀ ದಿನ 150ಕ್ಕೂ ಅಧಿಕ ವಿದ್ಯಾರ್ಥಿಗಳು ಕರೆ ಮಾಡಿ ಉತ್ತರ ಪಡೆಯುತ್ತಿದ್ದಾರೆ. ರಾಜ್ಯದಲ್ಲಿಯೇ ಅಪೂರ್ವ ಪ್ರಯತ್ನ ಇದಾಗಿದೆ. ಜಿಲ್ಲೆಯ ಶಿಕ್ಷಕರಿಗೆ ಪ್ರೇರಣಾ ಶಿಬಿರ ಆಯೋಜಿಸಿ ತರಬೇತಿ ನೀಡಲಾಗಿದೆ. ಇಲಾಖಾ ಅಧಿಕಾರಿಗಳು, ಶಿಕ್ಷಕರು ಪಾಲಕರ ಜತೆಗೆ ಸಭೆ ನಡೆಸಿರುವುದಲ್ಲದೆ ಮನೆಗೆ ಭೇಟಿ ನೀಡಿ ಫಲಿತಾಂಶ ಉತ್ತಮವಾಗಲು ಮಾರ್ಗದರ್ಶನ ನೀಡುವಂತೆ ಕೇಳಿಕೊಳ್ಳುತ್ತಿದ್ದಾರೆ.

ನಿರಂತರ ಮುಂಚೂಣಿಯಲ್ಲಿ   :

2020ರ ಎಸೆಸೆಲ್ಸಿ ಪರೀಕ್ಷೆಯಲ್ಲಿ ಒಟ್ಟು ಫಲಿತಾಂಶದಲ್ಲಿ ಉಡುಪಿ ಜಿಲ್ಲೆ “ಎ’ ಗ್ರೇಡ್‌ ಹಾಗೂ ದ.ಕ. ಜಿಲ್ಲೆ  “ಬಿ’ ಗ್ರೇಡ್‌ ಗಳಿಸಿತ್ತು. ಕೆಲವು ವರ್ಷಗಳಿಂದ ಈ ಜಿಲ್ಲೆಗಳು ರಾಜ್ಯದಲ್ಲಿಯೇ ಉತ್ತಮ ಶ್ರೇಣಿಯ ಸ್ಥಾನ ದಾಖಲಿಸುತ್ತಿವೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆ ಜಿಲ್ಲಾವಾರು ಫಲಿತಾಂಶದಲ್ಲಿ ಮುಂಚೂಣಿಯಲ್ಲಿವೆ.

ಉತ್ತಮ ಫಲಿತಾಂಶದ ನಿರೀಕ್ಷೆ :  ಎಸೆಸೆಲ್ಸಿ ಪರೀಕ್ಷೆಯಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಗಳು ಈ ಬಾರಿ ಅತ್ಯುತ್ತಮ ಸಾಧನೆ ದಾಖಲಿಸಬೇಕೆಂಬ ಆಶಯದಿಂದ ಜನವರಿಯಿಂದಲೇ ವಿವಿಧ ಹಂತದ ಕಾರ್ಯಚಟುವಟಿಕೆಗಳನ್ನು ಶಾಲಾ ಹಂತದಲ್ಲಿ ನಡೆಸಲಾಗುತ್ತಿದೆ. ಇಲಾಖೆ, ಶಿಕ್ಷಕರು ಹಾಗೂ ಪೋಷಕರು ಈ ನಿಟ್ಟಿನಲ್ಲಿ ಒಮ್ಮತದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಉತ್ತಮ ಫಲಿತಾಂಶದ ವಿಶ್ವಾಸವಿದೆ. ಎನ್‌.ಎಚ್‌. ನಾಗೂರು / ಮಲ್ಲೇಸ್ವಾಮಿ, ಡಿಡಿಪಿಐಗಳು, ಉಡುಪಿ, ದ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.