ಎಸೆಸೆಲ್ಸಿ: ಕರಾವಳಿಯಲ್ಲಿ ಮೊದಲ ದಿನದ ಪರೀಕ್ಷೆ ಸಾಂಗ

ದ.ಕ.: 29,192 ಹಾಜರು, 350 ಗೈರು

Team Udayavani, Mar 29, 2022, 7:10 AM IST

ಎಸೆಸೆಲ್ಸಿ: ಕರಾವಳಿಯಲ್ಲಿ ಮೊದಲ ದಿನದ ಪರೀಕ್ಷೆ ಸಾಂಗ

ಮಂಗಳೂರು: ಬಹುನಿರೀಕ್ಷಿತ ಎಸೆಸೆಲ್ಸಿ ಪರೀಕ್ಷೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಸುಸೂತ್ರವಾಗಿ ನಡೆದಿದೆ.

ಜಿಲ್ಲೆಯ ಸಾಮಾನ್ಯ ಮತ್ತು ಖಾಸಗಿ ಪರೀಕ್ಷಾ ಕೇಂದ್ರಗಳು ಸೇರಿದಂತೆ ನೋಂದಣಿ ಮಾಡಿಸಿಕೊಂಡಿದ್ದ ಒಟ್ಟು 29,542 ವಿದ್ಯಾರ್ಥಿಗಳ ಪೈಕಿ 29,192 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

350 ಮಂದಿ ವಿವಿಧ ಕಾರಣಗಳಿಂದ ಗೈರು ಹಾಜರಾಗಿದ್ದಾರೆ. ಪರೀಕ್ಷೆ ಬರೆದ ಎಂಡೋ ಸಂತ್ರಸ್ತರು12 ಮಂದಿ ವಿಶೇಷ ಕೊಠಡಿಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ಕಡಬದ ಕೊçಲ ಎಂಡೋ ಪಾಲನ ಕೇಂದ್ರದ ಐವರು ಸಂತಸ್ತರು ಪರೀಕ್ಷೆಗೆ ಹಾಜರಾಗಿದ್ದು, ರಾಮಕುಂಜೇಶ್ವರ ಪದವಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸಹಾಯಕರ ಮೂಲಕ ಪರೀಕ್ಷೆ ಬರೆದರು.

ಪ್ರವೇಶ ದ್ವಾರದಲ್ಲಿಯೇ ಮೇಲ್ವಿ ಚಾರಕರು ವಿದ್ಯಾರ್ಥಿಗಳ ಪರೀಕ್ಷಾ ನೋಂದಣಿ ಪತ್ರಗಳನ್ನು ಪರಿಶೀಲಿಸಿ ಕೇಂದ್ರದೊಳಕ್ಕೆ ತೆರಳಲು ಅವಕಾಶ ಕಲ್ಪಿಸಿದರು. ಬಹುತೇಕ ವಿದ್ಯಾರ್ಥಿ ಗಳ ಪೋಷಕರು ಕೂಡ ಆಗಮಿಸಿ ಮಕ್ಕಳನ್ನು ಪ್ರೋತ್ಸಾಹಿಸಿ ಕೇಂದ್ರದೊಳಕ್ಕೆ ಕಳುಹಿಸುವುದೂ ಕಂಡುಬಂತು.

ಕೆಲವು ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರದವರೆಗೆ ಹಿಜಾಬ್‌ ಧರಿಸಿಯೇ ಬಂದರೂ ಆವರಣ ಪ್ರವೇಶಿಸುವ ಮುನ್ನ ತೆಗೆದಿರಿಸಿದರು. ಕೆಲವು ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಮಾತ್ರ ಕೆಲವು ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ಪರೀಕ್ಷೆ ಬರೆದಿದ್ದಾರೆ.

ಡಿಸಿ ಡಾ| ರಾಜೇಂದ್ರ ಕೆ.ವಿ., ಜಿ.ಪಂ. ಸಿಇಒ ಡಾ| ಕುಮಾರ್‌, ಡಿಡಿ ಪಿಐ ಸುಧಾಕರ್‌ ಕೆ. ಅವರು ವಿವಿಧ ಶಾಲೆಗಳಿಗೆ ಭೇಟಿ ನೀಡಿದರು.

ಕೊಡಗು: 6,447 ಹಾಜರು, 233 ಗೈರು
ಮಡಿಕೇರಿ: ಕೊಡಗು ಜಿಲ್ಲೆಯ 37 ಪರೀûಾ ಕೇಂದ್ರಗಳಲ್ಲಿ ಸೋಮವಾರ ಎಸೆಸೆಲ್ಸಿ ಮುಖ್ಯ ಪರೀಕ್ಷೆ ಸುಗಮವಾಗಿ ನಡೆಯಿತು. ಜಿಲ್ಲೆಯ ಒಟ್ಟು 6,680 ವಿದ್ಯಾರ್ಥಿಗಳಲ್ಲಿ 6,447 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 233 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. 6 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ವೇದಮೂರ್ತಿ ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ನಗರದ ಜೂನಿಯರ್‌ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್‌ ಮಹೇಶ್‌ ಜತೆಗಿದ್ದರು.

ದ.ಕ. ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು ನಿರಾಳರಾಗಿ, ಯಾವುದೇ ಆತಂಕಕ್ಕೆ ಒಳಗಾಗದೆ ಪರೀಕ್ಷೆ ಬರೆದಿದ್ದಾರೆ. ಮುಂದಿನ ಪರೀಕ್ಷೆಯನ್ನು ಕೂಡ ಇದೇ ರೀತಿ ಯಾವುದೇ ಅಳುಕಿಲ್ಲದೆ ಬರೆಯಲಿದ್ದಾರೆ. ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಹಲವರು ಶ್ಲಾಘನೀಯ ಸ್ಪಂದನೆ ನೀಡಿದ್ದರಿಂದ ಮೊದಲನೇ ದಿನದ ಪರೀಕ್ಷೆ ಯಶಸ್ವಿಯಾಗಿ ಸಾಂಗವಾಗಿ ನೆರವೇರಿದೆ.
– ಸುಧಾಕರ್‌ ಕೆ., ದ.ಕ. ಡಿಡಿಪಿಐ

ಉಡುಪಿ: 13,770 ಹಾಜರು, 210 ಗೈರು
ಉಡುಪಿ: ಸೋಮವಾರ ನಡೆದ ಪರೀಕ್ಷೆಗೆ ಜಿಲ್ಲೆಯಲ್ಲಿ 13,770 ವಿದ್ಯಾರ್ಥಿಗಳು ಹಾಜರಾಗಿದ್ದು 210 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಪ್ರಥಮ ಭಾಷೆ (ಕನ್ನಡ, ಇಂಗ್ಲಿಷ್‌, ಹಿಂದಿ, ಸಂಸ್ಕೃತ, ಅರೆಬಿಕ್‌, ಮರಾಠಿ, ಫ್ರಂಚ್‌ ಇತ್ಯಾದಿ) ವಿಷಯಕ್ಕೆ 13,980 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಜ್ವರ, ಶೀತ ಸಹಿತ ದಿಢೀರ್‌ ಅಸ್ವಸ್ಥತೆ ಕಾಣಿಸಿಕೊಂಡಿರುವ 12 ವಿದ್ಯಾರ್ಥಿಗಳು ವಿಶೇಷ ಕೊಠಡಿ ಯಲ್ಲಿ ಪರೀಕ್ಷೆ ಬರೆದಿದ್ದಾರೆ. 58 ಪರೀಕ್ಷಾ ಕೇಂದ್ರಗಳಲ್ಲೂ ವಿದ್ಯಾರ್ಥಿಗಳ ಸುರಕ್ಷೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. 17 ಕೇಂದ್ರಗಳಲ್ಲಿ ಶೇ. 100ರಷ್ಟು ಹಾಜರಾತಿ ದಾಖಲಾಗಿದೆ. ಎಲ್ಲೆಡೆ ಬಿಗಿ ಪೊಲೀಸ್‌ ಭದ್ರತೆಗೆ ಹೆಚ್ಚುವರಿ ಸಿಬಂದಿ ನೇಮಿಸಲಾಗಿತ್ತು.

ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ., ಜಿ.ಪಂ. ಸಿಇಒ ಡಾ| ವೈ. ನವೀನ್‌ ಭಟ್‌ ಅವರು ಉಡುಪಿ ನಗರದ ಪ್ರೌಢಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೈಂದೂರು 2,202, ಕುಂದಾಪುರ 2,583, ಕಾರ್ಕಳದ 2,592, ಉಡುಪಿ (ದಕ್ಷಿಣ ಮತ್ತು ಉತ್ತರ) 4,181 ಹೊಸ ವಿದ್ಯಾರ್ಥಿಗಳು ಈ ಐದು ಶೈಕ್ಷಣಿಕ ವಲಯದಿಂದ ಹಾಜರಾಗಿದ್ದರು. ಕುಂದಾಪುರದ 88, ಉಡುಪಿಯ 124 ಖಾಸಗಿ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 117 ಹೊಸ ಹಾಗೂ 93 ಖಾಸಗಿ ವಿದ್ಯಾರ್ಥಿಗಳು ಸೇರಿ 210 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಬಹುತೇಕ ವಿದ್ಯಾ ರ್ಥಿಗಳು ಸಮವಸ್ತ್ರದೊಂದಿಗೆ ಮಾಸ್ಕ್ ಧರಿಸಿದ್ದರು.

ಶಿಕ್ಷಣ ಅತೀ ಮುಖ್ಯ. ಯಾರೂ ಕೂಡ ಪರೀಕ್ಷೆಯಿಂದ ದೂರ ಉಳಿಯಬಾರದು. ಮುಸ್ಲಿಂ ಮುಖಂಡರು ಪರೀಕ್ಷಾ ಕೇಂದ್ರಕ್ಕೆ ಬಂದು ತಮ್ಮ ಮಕ್ಕಳನ್ನು ಬಿಟ್ಟು ಹೋಗುತ್ತಿರುವುದು ಅಭಿನಂದನೀಯ. ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಸರಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಜಿಲ್ಲೆಯ 58 ಪರೀಕ್ಷಾ ಕೇಂದ್ರದಲ್ಲೂ ಯಾವುದೇ ಗೊಂದಲ ಇಲ್ಲದೇ ಪರೀಕ್ಷೆ ನಡೆದಿದೆ.
-ಕೂರ್ಮಾ ರಾವ್‌, ಜಿಲ್ಲಾಧಿಕಾರಿ

 

 

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.