ಮಂಗಳಾ ಕ್ರೀಡಾಂಗಣದ ಅಭಿವೃದ್ಧಿಗೆ ಕ್ರಮ

Team Udayavani, Feb 6, 2019, 4:38 AM IST

6-february-1.jpg

ಮಹಾನಗರ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ರೀಡಾ ಇಲಾಖೆಗೆ ಸಂಬಂಧಿ ಸಿದ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿ ಮತ್ತು ಕ್ರೀಡಾ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯನ್ನು ಸದ್ಯದಲ್ಲೇ ನಡೆಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ರಹೀಂ ಖಾನ್‌ ತಿಳಿಸಿದರು.

ಮಂಗಳಾ ಕ್ರೀಡಾಂಗಣಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾ ಪಟುಗಳು ಮಂಗಳೂರಿನಲ್ಲಿದ್ದಾರೆ. ಕ್ರೀಡಾ ಸಾಧನೆಗೆ ತಯಾರಾಗಿರುವ ವಿದ್ಯಾರ್ಥಿ ಸಮೂಹವಿದೆ. ಇವರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಸೌಲಭ್ಯ ಒದಗಿಸಲು ಇಲಾಖೆ ಬದ್ಧವಾಗಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ನೀಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಚರ್ಚಿಸಿ ನಿರ್ಧಾರ
ಕರಾವಳಿ ಉತ್ಸವ ಮೈದಾನವನ್ನು ಕ್ರೀಡೆಗೆ ಮಾತ್ರ ಮೀಸಲಿರಿಸುವಂತೆ ಮನವಿಗಳು ಬಂದಿವೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿದೆ. ಈಜುಕೊಳ, ವಿವಿಧ ಕ್ರೀಡಾಂಗಣಗಳ ನಿರ್ಮಾಣಕ್ಕೆ ಕ್ರೀಡಾ ಇಲಾಖೆಗೆ ಭೂಮಿ ಒದಗಿಸುವ ಕುರಿತು ಕಂದಾಯ ಇಲಾಖೆ ಜತೆ ಮಾತುಕತೆ ನಡೆಸಲಾಗುವುದು ಎಂದರು.

ಸ್ಮಾರ್ಟ್‌ ಸಿಟಿ ಯೋಜನೆಯಡಿ ನಗರದ ಬಸ್‌ ನಿಲ್ದಾಣ ಪಡೀಲ್‌ ಮತ್ತು ಕೂಳೂರಿಗೆ ಸ್ಥಳಾಂತರವಾಗಲಿದೆ. ಆ ಬಳಿಕ ಹಂಪನಕಟ್ಟೆ ಪ್ರದೇಶದಲ್ಲಿ ವಸ್ತು ಪ್ರದರ್ಶ ನಕ್ಕೆ ಅವಶ್ಯವಿರುವ ಜಾಗ ಲಭ್ಯವಾಗ ಲಿದ್ದು, ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ವಸ್ತು ಪ್ರದರ್ಶನ ಸಹಿತ ಎಲ್ಲ ಕಾರ್ಯಕ್ರಮಗಳನ್ನು ಹಂಪನಕಟ್ಟೆಗೆ ಸ್ಥಳಾಂತರವಾಗುವುದು. ಬಳಿಕ ಕರಾವಳಿ ಉತ್ಸವ ಮೈದಾನ ಸಂಪೂರ್ಣವಾಗಿ ಕ್ರೀಡಾ ಚಟುವಟಿಕೆಗೆ ದೊರೆಯಲಿದೆ ಎಂದು ತಿಳಿಸಿದರು.

ಮಂಗಳಾ ಕ್ರೀಡಾಂಗಣ ಬಳಿಯ ಮನಪಾ ಅಧೀನದ ಈಜುಕೊಳದಲ್ಲಿ ಈಜುಪಟುಗಳಿಗೆ ಪ್ರತ್ಯೇಕ ಸಮಯ ನಿಗದಿಪಡಿಸಬೇಕು ಎಂದು ದ.ಕ. ಸ್ವಿಮ್ಮಿಂಗ್‌ ಅಸೋಸಿಯೇಶನ್‌ ವತಿಯಿಂದ ಸಚಿವರಿಗೆ ಮನವಿ ಸಲ್ಲಿಸಲಾಯಿತುಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕಲ್ಪನಾ, ವಿವಿಧ ಕ್ರೀಡಾ ಸಂಘಟನೆಗಳ ಪ್ರತಿನಿಧಿಗಳಾದ ಮಂಜುನಾಥ ಭಂಡಾರಿ, ಪುರುಷೋತ್ತಮ ಪೂಜಾರಿ, ಧರ್ಮೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಅನುದಾನಕ್ಕೆ ಶಾಸಕರಿಂದ ಮನವಿ
ಮಂಗಳಾ ಕ್ರೀಡಾಂಗಣದ ಅಭಿವೃದ್ಧಿ ಹಾಗೂ ನಗರದದಲ್ಲಿ ವಿವಿಧ ಕ್ರೀಡಾಂಗಣಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲು 3.35 ಕೋಟಿ ರೂ.ಅನುದಾನ ಒದಗಿಸಬೇಕು, ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣ ದುರಸ್ತಿಗೆ 14.75 ಲಕ್ಷ ರೂ. ನೀಡಬೇಕು ಎಂದು ಶಾಸಕ ವೇದವ್ಯಾಸ ಕಾಮತ್‌ ಸಚಿವ ರಹೀಂಖಾನ್‌ ಅವರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಭೇಟಿ ಮಾಡಿ, ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳೋಣ ಎಂದು ಸಚಿವರು ಶಾಸಕರಿಗೆ ತಿಳಿಸಿದರು.

ಬಾಕಿ ಅನುದಾನ ಶೀಘ್ರ ಒದಗಿಸಿ
ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್‌ ಡಿ’ಸೋಜಾ ಅವರು, ಕ್ರೀಡಾಂಗಣದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕು. ಸರಕಾರ ಮತ್ತು ಜಿಲ್ಲಾ ಪಂಚಾಯತ್‌ನಿಂದ ಕ್ರೀಡಾ ಇಲಾಖೆಗೆ ಬಾಕಿ ಇರುವ ಅನುದಾನವನ್ನು ಶೀಘ್ರ ಒದಗಿಸಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.