ಕಡಬ ತಾಲೂಕು ಉದ್ಘಾಟನೆಗೆ ಸಿದ್ಧತೆ ಆರಂಭ 

Team Udayavani, Aug 5, 2018, 11:41 AM IST

5-agust-8.jpg

ಕಡಬ: ನೂತನವಾಗಿ ಅನುಷ್ಠಾನಗೊಳ್ಳುತ್ತಿರುವ ಕಡಬ ತಾಲೂಕಿನ ಉದ್ಘಾಟನ ಸಮಾರಂಭವು ಆ. 15ರಂದು ನಿಗದಿಯಾಗಿರುವ ಹಿನ್ನೆಲೆಯಲ್ಲಿ ಉದ್ಘಾಟನೆಯ ವೇಳೆಗೆ ಸರಕಾರದ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ಕಟ್ಟಡಗಳ ಲಭ್ಯತೆಯ ಕುರಿತು ವಿವಿಧ ಸರಕಾರಿ ಕಟ್ಟಡಗಳನ್ನು ಶನಿವಾರ ಪರಿಶೀಲಿಸಲಾಯಿತು.

ಕೋಡಿಂಬಾಳದ ಉಂಡಿಲದಲ್ಲಿರುವ ಸುವರ್ಣ ಭವನದ ಕಟ್ಟಡ, ಹಳೆಸ್ಟೇಶನ್‌ ನಲ್ಲಿರುವ ತಾಲೂಕು ಪಂಚಾಯತ್‌ಗೆ ಸೇರಿದ ವಸತಿಗೃಹಗಳು, ಪಶು ವೈದ್ಯಕೀಯ ಚಿಕಿತ್ಸಾಲಯದ ಹಳೆಯ ಕಟ್ಟಡ, ಕಡಬ ಮಾದರಿ ಶಾಲೆಯ ವಠಾರದಲ್ಲಿರುವ ಹೊಸ ಅಂಗನವಾಡಿ ಕಟ್ಟಡ ಮತ್ತು ಕ್ಲಸ್ಟರ್‌ ಮುಖ್ಯಸ್ಥರ ಕಚೇರಿ ಕಟ್ಟಡಗಳನ್ನು ಪರಿಶೀಲಿಸಿ ಗುರುತಿಸಿಕೊಳ್ಳಲಾಯಿತು.

ಕಡಬ ತಹಶೀಲ್ದಾರ್‌ ಜಾನ್‌ಪ್ರಕಾಶ್‌ ರೋಡ್ರಿಗಸ್‌, ಪುತ್ತೂರು ತಹಶೀಲ್ದಾರ್‌ ಅನಂತ ಶಂಕರ, ಪುತ್ತೂರು ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಜಗದೀಶ್‌ ಹಾಗೂ ಜನಪ್ರತಿನಿಧಿಗಳ ನೇತೃತ್ವದಲ್ಲಿ ಕಡಬ ಪರಿಸರದ ವಿವಿಧ ಸರಕಾರಿ ಕಟ್ಟಡಗಳನ್ನು ಪರಿಶೀಲಿಸಲಾಯಿತು.

ಜಿ. ಪಂ. ಸದಸ್ಯರಾದ ಪಿ.ಪಿ. ವರ್ಗೀಸ್‌, ಸರ್ವೋತ್ತಮ ಗೌಡ, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ತಾ.ಪಂ. ಸದಸ್ಯರಾದ ಫಝಲ್‌ ಕೋಡಿಂಬಾಳ, ಗಣೇಶ್‌ ಕೈಕುರೆ, ಪಿ.ವೈ.ಕುಸುಮಾ, ಕಡಬ ಗ್ರಾಮ ಪಂಚಾಯತ್‌ ಅಧ್ಯಕ್ಷ ಬಾಬು ಮುಗೇರ, ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ, ಸದಸ್ಯರಾದ ನಾರಾಯಣ ಪೂಜಾರಿ, ಅಶ್ರಫ್‌ ಶೇಡಿಗುಂಡಿ, ಶರೀಫ್‌ ಎ.ಎಸ್‌., ಶಿಕ್ಷಣ ಇಲಾಖಾ ಕ್ಲಸ್ಟರ್‌ ಮುಖ್ಯಸ್ಥ ಕುಮಾರ್‌ ಕೆ.ಜೆ. ಹಾಜರಿದ್ದರು.

ಸರಕಾರಿ ಕಟ್ಟಡಗಳು ಸ್ವಂತ ಕಚೇರಿ ಸ್ಥಾಪಿಸಿ, ಆಯಾಯ ಕಚೇರಿಗೆ ಅಧಿಕಾರಿ ಮತ್ತು ಸಿಬಂದಿ ನಿಯೋಜಿಸಬೇಕು. ಪೂರ್ಣಪ್ರಮಾಣದ ಅಧಿಕಾರಿ ಇಲ್ಲದಿದ್ದರೆ ಪ್ರಭಾರ ವ್ಯವಸ್ಥೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕುಮಾರ್‌ ಅವರು ನಿರ್ದೇಶನ ನೀಡಿದ್ದಾರೆ.

ಶೀಘ್ರ ತಾ| ಮಟ್ಟದ ಕಚೇರಿ ತೆರೆಯಲು ನಿರ್ದೇಶನ
ಕಂದಾಯ ಇಲಾಖೆ, ಭೂಮಾಪನ ಇಲಾಖೆ, ಆಹಾರ ಇಲಾಖೆ, ಉಪ ನೋಂದಣಿ ಕಚೇರಿ, ಪತ್ರಾಂಕಿತ ಉಪ ಖಜಾನೆ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ತಾಲೂಕು ಪಂಚಾಯತ್‌, ಕೃಷಿ ಇಲಾಖೆ, ತೋಟಗಾರಿಕ ಇಲಾಖೆ, ಪಶು ಸಂಗೋಪನ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ಇಲಾಖೆ, ಅಬಕಾರಿ ಇಲಾಖೆ, ವಾಣಿಜ್ಯ ತೆರಿಗೆ ಇಲಾಖೆ, ಗ್ರಂಥಾಲಯ ಹಾಗೂ ಅಗ್ನಿಶಾಮಕ ದಳ ಇಲಾಖೆಯ ತಾಲೂಕುಮಟ್ಟದ ಕಚೇರಿಗಳು ಕಡಬದಲ್ಲಿ ತೆರೆಯಬೇಕಾಗಿದ್ದು, ಕೆಲವು ಇಲಾಖೆಗಳಿಗೆ ಕಟ್ಟಡಗಳನ್ನು ಗುರುತಿಸಲಾಗಿದ್ದು, ಇನ್ನು ಕೆಲವು ಇಲಾಖೆಗಳಿಗೆ ಕಟ್ಟಡದ ವ್ಯವಸ್ಥೆಯಾಗಬೇಕಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.