ದ್ವಿತೀಯ ಪಿಯು ಪರೀಕ್ಷೆ ಆರಂಭ 


Team Udayavani, Mar 2, 2018, 10:30 AM IST

2-March-4.jpg

ಮಹಾನಗರ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಗುರುವಾರದಿಂದ ಆರಂಭಗೊಂಡಿದೆ. ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಮೂಡಬಿದಿರೆ ಕೇಂದ್ರ ಸೇರಿದಂತೆ ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಬೆಳಗ್ಗಿನಿಂದಲೇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಹೊರಭಾಗದಲ್ಲಿ ಅಂತಿಮ ಸಿದ್ಧತೆ ಮಾಡಿಕೊಂಡು ಪರೀಕ್ಷೆ ಬರೆದರು. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ದ.ಕ. ಜಿಲ್ಲಾಡಳಿತವು ಪೂರ್ಣ ರೀತಿಯಲ್ಲಿ ವ್ಯವಸ್ಥೆ ಕೈಗೊಂಡಿದ್ದು, ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಸಿಸಿ ಕೆಮರಾಗಳನ್ನು ಅಳವಡಿಸಲಾಗಿತ್ತು. ಜತೆಗೆ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಲೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕೊನೆಯ ಕ್ಷಣದ ಸಿದ್ಧತೆ
ಮಂಗಳೂರು ವ್ಯಾಪ್ತಿಯಲ್ಲಿ ಬಹುತೇಕ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನುತಲುಪಿದ್ದರು. ಪರೀಕ್ಷೆ ಆರಂಭವಾಗುವ ಮೊದಲು ವಿದ್ಯಾರ್ಥಿಗಳು ಸಹಪಾಠಿಗಳ ಜತೆಗೆ ಸೇರಿ ಕೊನೆಯ ಕ್ಷಣದ ಸಿದ್ಧತೆ, ಅಭ್ಯಾಸ ಮಾಡಿದರು. 

ಈ ಮಧ್ಯೆ ಕೆಲವು ವಿದ್ಯಾರ್ಥಿಗಳ ಹೆತ್ತವರು ಕೂಡ ಮಕ್ಕಳ ಜತೆಗೆ ಆಗಮಿಸಿ, ಪರೀಕ್ಷಾ ಕೇಂದ್ರದ ಹೊರಭಾಗದಲ್ಲಿ ಅವ ರಿಗೆ ಧೈರ್ಯ ತುಂಬುತ್ತಿದ್ದ ದೃಶ್ಯ ಕಂಡು ಬಂತು. ಜಿಲ್ಲೆಯ ಒಟ್ಟು 54 ಪರೀಕ್ಷಾ ಕೇಂದ್ರ ಗಳ ಪೈಕಿ ಮಂಗಳೂರು ತಾಲೂಕಿನ 25, ಮೂಡಬಿದಿರೆ 5, ಬಂಟ್ವಾಳ 7, ಪುತ್ತೂರು 9, ಬೆಳ್ತಂಗಡಿ 5 ಹಾಗೂ ಸುಳ್ಯದ 3 ಕೇಂದ್ರಗಳಲ್ಲಿ ಪರೀಕ್ಷೆ ಮೊದಲ ದಿನ ನಡೆಯಿತು. ಪರೀಕ್ಷೆ ಬರೆಯುವ ವಿದ್ಯಾ ರ್ಥಿಗಳು ಬೆಳಗ್ಗೆ ಬೇಗ ಎದ್ದು ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡರು. 

ಜಿಲ್ಲೆಯಲ್ಲಿ 54 ಪರೀಕ್ಷಾ ಕೇಂದ್ರ
ದ.ಕ. ಜಿಲ್ಲೆಯಲ್ಲಿ ಒಟ್ಟು 19,567 ಗಂಡು ಮಕ್ಕಳು ಹಾಗೂ 19,066 ಹೆಣ್ಣು ಮಕ್ಕಳು ಸೇರಿ ಒಟ್ಟು 38,633 ವಿದ್ಯಾರ್ಥಿಗಳು ಒಟ್ಟು 54 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹತೆ ಪಡೆದುಕೊಂಡಿದ್ದರು. ಇದರಲ್ಲಿ 34,863 ರೆಗ್ಯುಲರ್‌ ವಿದ್ಯಾರ್ಥಿಗಳು, 1,400 ಮಂದಿ ರಿಪೀಟರ್‌, 2,370 ಮಂದಿ ಖಾಸಗಿಯಾಗಿ ಬರೆಯುವವರು ಆಗಿದ್ದಾರೆ. ಕಲಾ ವಿಭಾಗದಲ್ಲಿ 4,901, ವಾಣಿಜ್ಯ ವಿಭಾಗದಲ್ಲಿ 17,045 ಹಾಗೂ ವಿಜ್ಞಾನ ವಿಭಾಗದಲ್ಲಿ 16,687 ವಿದ್ಯಾರ್ಥಿಗಳಿದ್ದಾರೆ. 

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.