ಪಕ್ಷ ವಿರೋಧಿ ಚಟುವಟಿಕೆ: ಸಹಕಾರಿ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಶಿಸ್ತುಕ್ರಮ

Team Udayavani, Jan 14, 2020, 3:51 PM IST

ಸುಳ್ಯ: ಐವರ್ನಾಡು -ಪ್ರಾ.ಕೃ.ಪ.ಸ.ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಎಸ್.ಎನ್.ಮನ್ಮಥ ಹಾಗೂ ಅರಂತೋಡು ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಅಭ್ಯರ್ಥಿಯಾಗಿರುವ ಸಂತೋಷ್ ಕುತ್ತಮೊಟ್ಟೆಯವರು ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳಲ್ಲ ಎಂದು ಬಿಜೆಪಿ ಮಂಡಲ ಸಮಿತಿ ತಿಳಿಸಿದೆ.

ಸುಳ್ಯ ಕ್ಷೇತ್ರದಲ್ಲಿ ಸಹಕಾರಿ ಸಂಘಗಳ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತಿಯ ಸೂಕ್ತ ಅಭ್ಯರ್ಥಿಗಳನ್ನು ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ. ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಎಸ್ ಎನ್ ಮನ್ಮಥರು ಹಾಗೂ ಅರಂತೋಡು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಸಂತೋಷ್ ಕುತ್ತಮೊಟ್ಟೆಯವರು ಭಾರತೀಯ ಜನತಾ ಪಾರ್ಟಿ ಮತ್ತು ಸಹಕಾರ ಭಾರತಿಯ ಸೂಚನೆಗಳನ್ನು ಧಿಕ್ಕರಿಸಿರುತ್ತಾರೆ. ಹಾಗೂ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ.

ಹಾಗಾಗಿ ಅವರ ಮೇಲೆ ಸೂಕ್ತ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಅವರು ನಮ್ಮ ಅಭ್ಯರ್ಥಿಗಳಾಗಿರುವುದಿಲ್ಲ ಎಂದು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಬೋಧ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ