ಸಂಸದೆ ಸುಮಲತಾ ಅಂಬರೀಶ್‌ ಕುಕ್ಕೆಗೆ ಭೇಟಿ

Team Udayavani, Dec 15, 2019, 8:17 PM IST

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ರವಿವಾರ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಹಾಗೂ ಪುತ್ರ ಅಭಿಷೇಕ್‌ ಗೌಡ ಅವರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ವಿಶೇಷ ಸೇವೆಗಳನ್ನು ಸಲ್ಲಿಸಿದರು.
ಬೆಳಗ್ಗೆ ದೇಗುಲಕ್ಕೆ ಆಗಮಿಸಿದ ಅವರು ಶ್ರೀ ದೇವರ ದರ್ಶನ ಪಡೆದರು. ಅರ್ಚಕರು ಶಾಲು ಹಾಕಿ ಪ್ರಸಾದ ನೀಡಿದರು. ಬಳಿಕ ಅವರು ಆಶ್ಲೇಷಾ ಬಲಿ, ನಾಗಪ್ರತಿಷ್ಠೆ, ಪವಮಾನ ಅಭಿಷೇಕ, ಶೇಷ ಸೇವೆ ನೆರವೇರಿಸಿದರು. ಹೊಸೊಳಿಗಮ್ಮ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು. ಬಳಿಕ ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠಕ್ಕೆ ತೆರಳಿ ಅಲ್ಲಿ ಆಶ್ಲೇಷಾ ಸೇವೆ ನೆರವೇರಿಸಿಕೊಂಡರು. ದೇಗುಲದ ಶಿಷ್ಟಾಚಾರ ಅಧಿಕಾರಿ ಗೋಪಿನಾಥ ನಂಬೀಶ ಉಪಸ್ಥಿತರಿದ್ದರು.
ನಟಿ ಅಮೂಲ್ಯಾರಿಂದ ಸರ್ಪಸಂಸ್ಕಾರ ಸೇವೆ
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಎರಡು ದಿನಗಳ ಹಿಂದೆ ಆಗಮಿಸಿದ್ದ ಚಿತ್ರನಟಿ ಅಮೂಲ್ಯಾ ದಂಪತಿ ಶ್ರೀ ಮಠದಲ್ಲಿ ಸರ್ಪಸಂಸ್ಕಾರ ಸೇವೆ ನಡೆಸಿ, ರವಿವಾರ ಪೂಜೆ ಮುಗಿಸಿ ಮರಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ