ಬೇಸಗೆ ರಜೆಯನ್ನು ಕ್ರೀಡೆಯೊಂದಿಗೆ ಕಳೆಯಿರಿ: ನಾಗಭೂಷಣ್‌ ರೆಡ್ಡಿ


Team Udayavani, May 14, 2018, 2:47 PM IST

14-May-11.jpg

ಹಳೆಯಂಗಡಿ: ಮಕ್ಕಳಲ್ಲಿನ ಕ್ರೀಡಾ ಉತ್ಸಾಹಕ್ಕೆ ಪೋಷಕರು ಸೂಕ್ತ ಸಮಯದಲ್ಲಿ ಪ್ರೋತ್ಸಾಹ ನೀಡಬೇಕು. ಬೇಸಗೆ ರಜೆಯನ್ನು ವ್ಯರ್ಥ ಮಾಡದೆ, ಕ್ರೀಡೆಯನ್ನು ಅಭ್ಯಸಿಸುವ ಮೂಲಕ ಸಿಕ್ಕಿದ ಅವಕಾಶಗಳನ್ನು ಸದುಪಯೋಗಿಸಬೇಕು ಎಂದು ಹಿರಿಯ ಸಮಾಜ ಸೇವಕ ನಾಗಭೂಷಣ್‌ ರೆಡ್ಡಿ ಹೇಳಿದರು. ಹಳೆಯಂಗಡಿ ಟಾರ್ಪೋಡೇಸ್‌ ನ್ಪೋರ್ಟ್ಸ್ ಕ್ಲಬ್‌ ತೋಕೂರು ಇದರ ಸಂಯೋಜನೆಯಲ್ಲಿ ಮೇ 13ರಂದು ಪ್ರಾರಂಭಗೊಂಡ ವಿಶೇಷ ಕ್ರೀಡಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ಲಬ್‌ನ ಮಾರ್ಗದರ್ಶಕ ಡಾ| ಅರವಿಂದ ಭಟ್‌ ಸುರತ್ಕಲ್‌ ಮಾತನಾಡಿ, ಟಾರ್ಪೋಡೇಸ್‌ ಕ್ಲಬ್‌ ಗ್ರಾಮೀಣ ಭಾಗದ ಮಕ್ಕಳಲ್ಲಿನ ಕ್ರೀಡಾ ಕ್ಷಮತೆಯನ್ನು ಗುರುತಿಸಿ, ವೇದಿಕೆಯನ್ನು ನೀಡುತ್ತಿರುವುದರಿಂದ ಜಿಲ್ಲಾ ರಾಜ್ಯೋತ್ಸವದಂತಹ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದೆ. ಇದರ ಅವಕಾಶವನ್ನು ಸ್ಥಳೀಯರು ಮುಕ್ತವಾಗಿ ಪಡೆಯಬೇಕು ಎಂದರು.

ಕ್ಲಬ್‌ನ ಅಧ್ಯಕ್ಷ ಗೌತಮ್‌ ಶೆಟ್ಟಿ ಮಾತನಾಡಿ, ಗ್ರಾಮೀಣ ಭಾಗದ ಕ್ರೀಡಾ ಪಟುಗಳಿಗೆ ಅವಕಾಶ ನೀಡಲು, ಹಳೆಯಂಗಡಿ, ತೋಕೂರು, ಮೂಲ್ಕಿ ಬಪ್ಪನಾಡು ದೇಗುಲದ ಬಳಿಯ ನೇಚರ್ ಟೆಂಪಲ್‌ ವಸತಿ ಸಮುಚ್ಚಯದಲ್ಲಿ, ಪಡುಬಿದ್ರಿಯ ಸಾಗರ್‌ ವಿದ್ಯಾ ಮಂದಿರದ ಬಳಿಯಲ್ಲಿ ಶಿಬಿರ ನಡೆಸಲಾಗುತ್ತಿದೆ. ಆರೋಗ್ಯ ಶಿಬಿರದ ಜತೆಗೆ ನಿರಂತರವಾಗಿ ಕ್ರೀಡೆಯಿಂದ ಮನೋವಿಕಾಸ ಹಾಗೂ ಆತ್ಮಸ್ಥೈರ್ಯ ಹೆಚ್ಚಿಸುವ ಉದ್ದೇಶ ನಮ್ಮದು ಎಂದರು.

ಮುಖ್ಯ ತರಬೇತುದಾರ ವಿವೇಕ್‌ ಮಾಹಿತಿ ನೀಡಿದರು. ಕ್ರಿಕೆಟ್‌ ತರಬೇತುದಾರ ನಿತಿನ್‌ ಮೂಲ್ಕಿ, ರಹೀಂ, ಟೇಬಲ್‌ ಟೆನ್ನಿಸ್‌ ತರಬೇತುದಾರ ಅಶ್ವಿ‌ನ್‌, ಬ್ಯಾಡ್ಮಿಂಟನ್‌ ತರಬೇತುದಾರ ಸಂತೋಷ್‌, ವಿವೇಕ್‌, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಗೌತಮ್‌ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

ಸರಕಾರಿ ಶಾಲಾ ಮಕ್ಕಳಿಗೆ ತರಬೇತಿ
ಟಾರ್ಪೋಡೇಸ್‌ ಸ್ಪೋರ್ಟ್ಸ್ ಕ್ಲಬ್‌ ನಿಂದ ನಡೆಯುತ್ತಿರುವ ವಿಶೇಷ ತರಬೇತಿಯನ್ನು ಈ ಬಾರಿ ಸ್ಥಳೀಯ ಸರಕಾರಿ ಶಾಲೆಯ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ. ಒಟ್ಟು 45 ಮಕ್ಕಳು ತರಬೇತಿ ಪಡೆಯುತ್ತಿದ್ದಾರೆ. ಅವರಿಗೆ ದಿನದಲ್ಲಿ ಕ್ರೀಡಾ ಸಲಕರಣೆಗಳ ಸಹಿತ ಕ್ಲಬ್‌ನಿಂದ ಮಾರ್ಗದರ್ಶನ ನೀಡಲಾಗುವುದು ಎಂದು ನಾಗಭೂಷನ್‌ ಹೇಳಿದರು.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.