ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ: ಕೃತ್ಯಕ್ಕೆ ಬಳಸಿದ ಕಾರು ಮಾಲಕ ಪೊಲೀಸ್ ವಶಕ್ಕೆ
Team Udayavani, Jul 31, 2022, 8:46 AM IST
ಫಾಝಿಲ್
ಮಂಗಳೂರು: ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸುರತ್ಕಲ್ ನ ಫಾಝಿಲ್ ಕೊಲೆ ಪ್ರಕರಣದಲ್ಲಿ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಗುರುವಾರ ರಾತ್ರಿ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಂಗಳಪೇಟೆ ನಿವಾಸಿ 23 ವರ್ಷದ ಫಾಝಿಲ್ ನ ಮೇಲೆ ಮಾರಕಾಸ್ತ್ರಗಳಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು.
ಇದೀಗ ಘಟನೆಗೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಿಗೆ ಸಹಾಯ ಮಾಡಿದ್ದ ಆರೋಪದಡಿ ಕಾರು ಮಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
16 ಮಂದಿ ವಶಕ್ಕೆ: ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ 16 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಗೊಳಪಡಿಸಿದ್ದು ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಸಿಕ್ಕಿದೆ.
ಇದನ್ನೂ ಓದಿ:ಪಿಎಫ್ಐ ನಿಷೇಧ ಮಾಡಿ; ಮುಸ್ಲಿಂ ಮುಖಂಡರ ಜತೆ ಅಜಿತ್ ದೋವಲ್ ಮಾತುಕತೆ
ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವ ನಾಲ್ಕು ಮಂದಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಶೀಘ್ರ ಬಂಧನ ಪ್ರಕ್ರಿಯೆಗೆ ಒಳಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಶಯದ ಮೇರೆಗೆ ಮೊದಲು 21 ಮಂದಿ ಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದಾರೆ. ಶುಕ್ರವಾರ ರಾತ್ರಿ ಮತ್ತೆ 16 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ರೀತಿ ವಶಕ್ಕೆ ಪಡೆದವರಿಂದ ದೊರೆತ ಮಾಹಿತಿಯ ಆಧಾರದಲ್ಲಿ ಆರೋಪಿ ಗಳ ಖಚಿತ ಮಾಹಿತಿ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ