ವೇಣೂರು: ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

ಕಂಬಳವು ನಿರರ್ಗಳವಾಗಿ ನಡೆಯುವಂತಾಗಲಿ: ಡಾ| ಪದ್ಮಪ್ರಸಾದ ಅಜಿಲ

Team Udayavani, Feb 15, 2020, 4:11 PM IST

ವೇಣೂರು: ಕಂಬಳವು ಇತಿಹಾಸವುಳ್ಳ ಪುರಾತನದಿಂದ ಬಂದ ಗ್ರಾಮೀಣ ಕ್ರೀಡೆ. ಅಡ್ಡಿ, ಆತಂಕ ಇಲ್ಲದ ಕಂಬಳವು ನಿರರ್ಗಳವಾಗಿ ನಡೆಯುವಂತಾಗಲಿ ಎಂದು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲ ಹೇಳಿದರು.

ವೇಣೂರು ಪೆರ್ಮುಡದಲ್ಲಿ ಶನಿವಾರ ಜರಗಿದ ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ 27ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ. ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂಡದಬೆಟ್ಟು ಜುಮ್ಮಾ ಮಸೀದಿಯ ಧರ್ಮಗುರು ಕೆ.ಎಂ. ಹನೀಫ್ ಸಖಾಫಿ ಬಂಗೇರ್‌ಕಟ್ಟೆ ಅವರು ಸಂದೇಶ ನೀಡಿ, ಕೋಣಗಳು ಪ್ರತಿಭೆಯ ಸ್ವರೂಪಗಳು. ಕಂಬಳದಲ್ಲಿ ಕೋಣಗಳಿಗೆ ನೀಡುವ ಸಣ್ಣಪುಟ್ಟ ಏಟುಗಳು ಹಿಂಸೆಯ ಸ್ವರೂಪ ಅಲ್ಲ.

ಅದು ಕೋಣಗಳಲ್ಲಿರುವ ಪ್ರತಿಭೆಯನ್ನು ಚುರುಕುಗೊಳಿಸುವಂತೆ ಮಾಡುವ ವಿಧಾನವಾಗಿದೆ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ವ್ಯಕ್ತಿಗತವಾಗಿ ಆತ್ಮವಿಶ್ವಾಸ ವೃದ್ಧಿಸಿಕೊಳ್ಳೋಣ ಎಂದರು.

ಅಳದಂಗಡಿಯ ಪ್ರೌಸ್ಟಿಲ್ ಅಜಿಲ, ಕಂಬಳ ಸಮಿತಿ ಗೌರವ ಸಲಹೆಗಾರರು ಜಿ.ಪಂ. ಸದಸ್ಯರಾದ ಶೇಖರ ಕುಕ್ಕೇಡಿ, ಪಿ. ಧರಣೇಂದ್ರ ಕುಮಾರ್, ದ.ಕ.-ಉಡುಪಿ ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೀವ್ ಶೆಟ್ಟಿ ಎಡ್ತೂರು, ವೇಣೂರು ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಕಾರ್ಯದರ್ಶಿ ಯಂ. ವಿಜಯರಾಜ ಅಧಿಕಾರಿ, ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ತೇಜಾಕ್ಷಿ, ಪಡಂಗಡಿ ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ವೇಣೂರು ಪದ್ಮಾಂಬ ಸಮೂಹ ಸಂಸ್ಥೆಯ ವ್ಯವಸ್ಥಾಪಕ ಜಿನರಾಜ ಜೈನ್, ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷ ನವೀನ್ ಪೂಜಾರಿ ಪಚ್ಚೇರಿ, ವೇಣೂರು ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸುಧೀರ್ ಭಂಡಾರಿ, ವೇಣೂರಿನ ಉದ್ಯಮಿ ಕೆ. ಭಾಸ್ಕರ ಪೈ, ಕುಕ್ಕೇಡಿ-ನಿಟ್ಟಡೆ ಬಿಲ್ಲವ ಸಂಘದ ಅಧ್ಯಕ್ಷ ಸದಾನಂದ ಪೂಜಾರಿ, ವೇಣೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಿಮಲ ಚಂದ್ರ ಕೋಟ್ಯಾನ್, ಭಾಸ್ಕರ ಬಲ್ಯಾಯ, ಪಡಂಗಡಿ ತಾ.ಪಂ. ಸದಸ್ಯೆ ಸುಶೀಲ, ಅಳದಂಗಡಿ ತಾ.ಪಂ. ಸದಸ್ಯೆ ವಿನುಷಾ ಪ್ರಕಾಶ್, ಕುಕ್ಕೇಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಧರ್ಣಪ್ಪ ಪೂಜಾರಿ, ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಲೋಲಾಕ್ಷ ಕೆ., ಬೆಳ್ತಂಗಡಿಯ ವಕೀಲ ಸತೀಶ್ ಪಿ.ಎನ್., ರಾಜೇಶ್ ಬೆಳುವಾಯಿ, ಗುಣವತಿ ಡಿ. ಕುಕ್ಕೇಡಿ, ಶಿಲ್ಪಾ ನಿತೀಶ್ ಕುಕ್ಕೇಡಿ, ಪೆರ್ಮುಡ ಕಂಬಳ ಸಮಿತಿ ಕಾರ್ಯದರ್ಶಿ ಭರತ್‌ರಾಜ್ ಪಾಪುದಡ್ಕ, ಉಪಾಧ್ಯಕ್ಷರಾದ ಕರುಣಾಕರ ಸಾಲ್ಯಾನ್, ಜೆಫ್ರಿ ಫೆರ್ನಾಂಡಿಸ್, ಗೋಪಾಲ ಪೂಜಾರಿ, ಕೋಶಾಧ್ಯಕ್ಷ ಅಶೋಕ್ ಪಾಣೂರು, ಸಮಿತಿ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಆಗಮಿಸಿದ್ದರು.

ವೇಣೂರು ಪೆರ್ಮುಡ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಪ್ರಾಸ್ತಾವಿಸಿ, ಸ್ವಾಗತಿಸಿದರು. ಸತೀಶ್ ಹೊಸ್ಮಾರ್ ಕಾರ್ಯಕ್ರಮ ನಿರ್ವಹಿಸಿ, ಅನೂಪ್ ಜೆ. ಪಾಯಸ್ ವಂದಿಸಿದರು.

ಮುಂದಿನ ಪೀಳಿಗೆಗೆ ದಾಟಿಸೋಣ
ಪೂರ್ವಜರು ಆರಂಭಿಸಿದ ಆರಾಧನೆಯ ಕ್ರೀಡೆ ಕಂಬಳ. ಕಂಬಳ ಅಂದರೆ ಈಶ್ವರ ದೇವರ ಆರಾಧನೆ ಆಗಿದೆ. ಕಂಬಳ ಪ್ರಾರಂಭದಿಂದ ಅಂತ್ಯದವರೆಗೆ ಸ್ಥಳದಲ್ಲಿ ದೇವರ ಸಾನಿಧ್ಯ ನೆಲೆಯಾಗುತ್ತದೆ. ಕಂಬಳವನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ದಾಟಿಸುವ ಕೆಲಸ ನಮ್ಮಿಂದ ಆಗಬೇಕಿದೆ.
– ರಾಜೀವ್ ಶೆಟ್ಟಿ ಎಡ್ತೂರು, ಪ್ರಧಾನ ಕಾರ್ಯದರ್ಶಿ ದ.ಕ.

– ಉಡುಪಿ ಜಿಲ್ಲಾ ಕಂಬಳ ಸಮಿತಿ

ಕಳೆದ 3 ವರ್ಷಗಳಿಂದ ಮಾಜಿ ಶಾಸಕರಾದ ಕೆ. ವಸಂತ ಬಂಗೇರವರ ಗೌರವಾಧ್ಯಕ್ಷತೆಯಲ್ಲಿ, ಇಲ್ಲಿಯ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿಯವರ ಸಲಹೆಯೊಂದಿಗೆ ಕಂಬಳಾಭಿಮಾನಿಗಳ ಸಹಕಾರದಲ್ಲಿ ಪೆರ್ಮುಡ ಕಂಬಳವನ್ನು ವ್ಯವಸ್ಥಿತ ರೀತಿಯಲ್ಲಿ ನಡೆಸಿಕೊಂಡು ಬಂದಿದ್ದೇವೆ.
– ನಿತೀಶ್ ಎಚ್., ಅಧ್ಯಕ್ಷರು ವೇಣೂರು ಪೆರ್ಮುಡ ಕಂಬಳ ಸಮಿತಿ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ