ಸ್ಮಾರ್ಟ್‌ ನಗರಿಯಲ್ಲಿ ತಾಂತ್ರಿಕ ಅಭಿವೃದ್ಧಿಯಾಗಲಿ

Team Udayavani, Apr 21, 2019, 6:00 AM IST

smart-city-mangalore

ಆಧುನಿಕತೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಅದಕ್ಕೆ ತಕ್ಕಂತೆ ತಾಂತ್ರಿಕತೆಯೂ ಬೆಳೆಯುತ್ತಿದೆ. ದೇಶದ ಪ್ರಧಾನಿಯೂ ನಾವು ಸ್ಮಾರ್ಟ್‌ ಆಗಿರಬೇಕು ಎನ್ನುವ ಕಾರಣಕ್ಕೆ ಕ್ಯಾಸ್‌ಲೆಸ್‌ ವ್ಯವಸ್ಥೆಯನ್ನು ಜಾರಿಗೊಳಿಸಲು ಮುಂದಾದರು.

ಆದರೆ ನಗರದ ಬಹುತೇಕ ಇಲಾಖೆಗಳಲ್ಲಿ ಆನ್‌ಲೈನ್‌ ವ್ಯವಸ್ಥೆಗಳು ಇನ್ನೂ ಜಾರಿಗೆ ಬಂದಿಲ್ಲ. ಇತರ ದೇಶಗಳಿಗೆ ಹೋಲಿಸಿದರೆ ನಾವು ಇನ್ನೂ ತಾಂತ್ರಿಕವಾಗಿ ಹಿಂದುಳಿದಿದ್ದೇವೆ.ನೀರಿನ ಬಿಲ್‌, ತೆರಿಗೆ ಸೇರಿದಂತೆ ದಂಡ ತೆರಬೇಕಿದ್ದರೂ ಕಚೇರಿಗಳಿಗೆ ಅಲೆಯ ಬೇಕಾದ ಸ್ಥಿತಿ ಇನ್ನೂ ಇದೆ. ಅಂಗೈಯಲ್ಲೇ ಜಗತ್ತು ಇದೆ ಎಂದು ಹೇಳಿದರೂ ಕಚೇರಿಗಳಿಗೆ ತೆರಳಿ ಗಂಟೆಗಟ್ಟಲೆ ನಿಲ್ಲಬೇಕಾದ ಸ್ಥಿತಿ ಮಾತ್ರ ಇನ್ನೂ ಹೋಗಿಲ್ಲ.

ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ತೆರಬೇಕಾದ ದಂಡವನ್ನೂ ಪೊಲೀಸ್‌ ಠಾಣೆಗೆ ಹೋಗಿ ಕಟ್ಟಬೇಕಾಗಿದೆ. ತಾಂತ್ರಿಕವಾಗಿ ಅಭಿವೃದ್ಧಿಯತ್ತ ಸಾಗುತ್ತಿರುವ ದೇಶಕ್ಕೆ ಇದು ಒಂದು ಋಣಾತ್ಮಕ ಅಂಶವಾಗಿ ತೋರಲಿದೆ. ನೀರಿನ ಬಿಲ್‌ ಸೇರಿದಂತೆ ಎಲ್ಲ ಬಿಲ್‌ಗ‌ಳನ್ನು ಮನೆಯಲ್ಲಿಯೇ ಕುಳಿತು ಕಟ್ಟುವಂತಹ ವ್ಯವಸ್ಥೆ ಸೃಷ್ಟಿಯಾಗಬೇಕು. ಕ್ಯಾಶ್‌ಲೆಸ್‌ ವ್ಯವಹಾರಗಳು ಹೆಚ್ಚಾಗಬೇಕು. ಇದಕ್ಕಾಗಿ ಇತರ ದೇಶಗಳಂತೆ ಕಟ್ಟುನಿಟ್ಟಿನ ಆದೇಶಗಳು ಬರಬೇಕು. ಆನ್‌ಲೈನ್‌ ವ್ಯವಹಾರಗಳನ್ನು ಕಡ್ಡಾಯ ಮಾಡಿದಾಗ ಮೊದಮೊದಲು ಜನಸಾಮಾನ್ಯರಿಗೆ ಕೊಂಚ ಕಷ್ಟ ಎಂದು ತೋರಿದರೂ ದಿನಕಳೆದಂತೆ ಅವರೂ ತಾಂತ್ರಿಕವಾಗಿ ಬೆಳೆಯುವ ಸಾಧ್ಯತೆ ಇದೆ.

ನಗರಕ್ಕೆ ಪ್ರಥಮ ಬಾರಿಗೆ ಆಗಮಿಸುವ ಜನರಿಗೆ ದಾರಿ ತೋರಿಸುವ ಟ್ಯಾಬ್‌ಗಳನ್ನು ಮುಖ್ಯ ಭಾಗಗಳಲ್ಲಿ ಅಳವಡಿಸುವಂತಾಗಬೇಕು. ಎಲ್ಲ ಅಂಗಡಿ ಮುಂಗಟ್ಟುಗಳಲ್ಲೂ ಕ್ಯಾಶ್‌ಲೆಸ್‌ ವ್ಯವಸ್ಥೆಗಳನ್ನು ಕಲ್ಪಿಸುವಂತಿರಬೇಕು. ಇತರ ದೇಶಗಳಿಗೆ ಹೋಲಿಸಿದಾಗ ನಾವು ಇನ್ನಷ್ಟು ತಾಂತ್ರಿಕವಾಗಿ ಪರಿಣತಿ ಹೊಂದಬೇಕಾದ ಅನಿವಾರ್ಯತೆ ಇದೆ. ಕರಾವಳಿಯೂ ಪ್ರವಾಸೋದ್ಯಮಗಳಿಗೆ ತೆರೆದುಕೊಂಡಿದ್ದು, ಇತರ ಭಾಗಗಳ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ನಾವು ಇನ್ನಷ್ಟು ತಾಂತ್ರಿಕ ಅಭಿವೃದ್ಧಿಯ ಪಥದಲ್ಲಿ ಸಾಗಬೇಕಾಗಿದೆ.

– ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.