ಸಂಚಾರಿ ಪೊಲೀಸ್ಗೆ ಗುದ್ದಿದ ಕಾರು ಪೊಲೀಸ್ ವಶಕ್ಕೆ: ಚಾಲಕ ವಿದ್ಯಾರ್ಥಿ ಪರಾರಿ
Team Udayavani, Oct 4, 2022, 12:46 AM IST
ಉಳ್ಳಾಲ: ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸ್ ಹೆಡ್ಕಾನ್ಸ್ಟೆಬಲ್ ಹೈವೇ ಪಟ್ರೋಲ್ ಚಾಲಕ ಲೋಕೇಶ್ ಅವರಿಗೆ ಅಪಘಾತ ನಡೆಸಿದ ಕಾರನ್ನು ಸಂಚಾರಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಕಾರು ಚಾಲಕ ಪರಾರಿಯಾಗಿದ್ದಾನೆ.
ಮುಕ್ಕಚ್ಚೇರಿ ನಿವಾಸಿ ಮೊಹಮ್ಮದ್ ಇಕ್ಬಾಲ್ ಎಂಬಾತನಿಗೆ ಸೇರಿದ ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಕಾರನ್ನು ನಿಲ್ಲಿಸದೆ, ತಡೆಯಲು ಮುಂದಾಗಿದ್ದ ಸಂಚಾರಿ ಠಾಣೆಯ ಹೆಡ್ಕಾನ್ಸ್ಟೆಬಲ್ ಲೋಕೇಶ್ ಅವರಿಗೆ ಗುದ್ದಿ ಪರಾರಿಯಾಗಿದ್ದ ಕಾರನ್ನು ವಿದ್ಯಾರ್ಥಿಯೊಬ್ಬ ಚಲಾಯಿಸುತ್ತಿದ್ದ ಎನ್ನುವ ಮಾಹಿತಿ ಲಭ್ಯವಾಗಿದೆ.
ಗಂಭೀರ ಗಾಯಗೊಂಡಿದ್ದ ಲೋಕೇಶ್ ಮಂಗಳೂರಿನ ಆಸ್ಪತ್ರೆ ಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಟ್ ಆ್ಯಂಡ್ ರನ್ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸಿಸಿ ಟಿವಿಯಲ್ಲಿ ದೊರೆತ ಮಾಹಿತಿ ಆಧಾರದಡಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಲೆಮರೆಸಿಕೊಂಡ ಚಾಲಕ ವಿದ್ಯಾರ್ಥಿ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್