ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತ ಪಾಠ ಕೈಬಿಟ್ಟಿಲ್ಲ: ಸುದರ್ಶನ್ ಮೂಡುಬಿದಿರೆ
Team Udayavani, May 21, 2022, 12:45 AM IST
ಮಂಗಳೂರು: ಹತ್ತನೆಯ ತರಗತಿ ಪಠ್ಯದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತ ಪಾಠವನ್ನು ಕೈ ಬಿಟ್ಟಿಲ್ಲ. ಕಾಂಗ್ರೆಸ್ ಈ ಬಗ್ಗೆ ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ ಎಂದು ಬಿಜೆಪಿ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಲು ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಬಳಸಿಕೊಳ್ಳುತ್ತಿದೆ. ಗಣರಾಜ್ಯೋತ್ಸವ ಪಥಸಂಚಲನದ ಸಂದರ್ಭದಲ್ಲೂ ಕಾಂಗ್ರೆಸ್ ಇದೇ ರೀತಿ ಮಾಡಿತ್ತು ಎಂದರು.
ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿಡುವುದಕ್ಕೆ ಮಾಜಿ ಶಾಸಕ ಜೆ.ಆರ್. ಲೋಬೋ ಸೇರಿದಂತೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಕೇರಳದಲ್ಲಿ ಕಾಂಗ್ರೆಸ್ ಶಿವಗಿರಿ ಮಠಕ್ಕೂ ತೊಂದರೆ ಉಂಟು ಮಾಡಿತ್ತು ಎಂದು ಆರೋಪಿಸಿದ ಅವರು, ಇದೀಗ ಕಾಂಗ್ರೆಸಿಗರು ಗುರುಗಳ ಬಗ್ಗೆ ಯಾವ ನೈತಿಕತೆಯಿಂದ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
10 ತರಗತಿಯ ಪಠ್ಯ ಮುದ್ರಣವೇ ಆಗಿಲ್ಲ. ಆದರೆ ಮಾಜಿ ಶಾಸಕ ರಮಾನಾಥ ರೈ ಸೇರಿದಂತೆ ಕಾಂಗ್ರೆಸಿಗರು 10ನೇ ತರಗತಿ ಪಠ್ಯದಿಂದ ನಾರಾಯಣ ಗುರುಗಳ ಹೆಸರು ಕೈಬಿಟ್ಟಿರುವುದಾಗಿ ಅಪಪ್ರಚಾರ ಮಾಡುತ್ತಿದ್ದಾರೆ. 7ನೇ ತರಗತಿ ಪಠ್ಯದಲ್ಲೂ ನಾರಾಯಣ ಗುರುಗಳ ಪಾಠವಿದೆ. ಹತ್ತನೆಯ ತರಗತಿ ಪಠ್ಯದಲ್ಲೂ ಪಾಠ ಇರಲಿದ್ದು ಯಾವುದೇ ಕಾರಣಕ್ಕೆ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದರು.
ಪಠ್ಯದಲ್ಲಿ ಮಂಜೆ ಮಂಗೇಶರಾಯರು, ಗೋವಿಂದ ಪೈಗಳು, ಪರಿಸರ ತಜ್ಞ ಶಿವಾನಂದ ಕಳವೆ ಸೇರಿದಂತೆ ಹಲವು ಪ್ರಮುಖರ ವಿಷಯಗಳು ಬರಲಿವೆ. ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರವೇ ಪಠ್ಯಕ್ರಮ ಇರಲಿದೆ ಎಂದು ಸುದರ್ಶನ ಮೂಡುಬಿದಿರೆ ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಕಣ್ಣೂರು, ವಕ್ತಾರರಾದ ರವಿಶಂಕರ ಮಿಜಾರು, ಜಗದೀಶ ಶೇಣವ, ರಣದೀಪ್ ಕಾಂಚನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಟ್ಲ: ಮಳೆ ಅಬ್ಬರ- ಹಲವು ಮನೆಗಳು ಜಲಾವೃತ-ಜನ ಜೀವನ ಅಸ್ತವ್ಯಸ್ತ
ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ
ಕುಣಿಗಲ್: ಕೆಂಪೇಗೌಡರಿಗೆ ಅಪಮಾನವಾದ ಸ್ಥಳದಲ್ಲಿ ಪ್ರತಿಮೆ ನಿರ್ಮಾಣ: ಕೆಂಪೇಗೌಡ ಸೇನೆ ತಿರ್ಮಾನ
ಉದಯಪುರ ಮತ್ತೆ ಉದ್ವಿಗ್ನ: ಶಿರಚ್ಛೇದನ ಘಟನೆ ಖಂಡಿಸಿ ಬೃಹತ್ ಪ್ರತಿಭಟನೆ, ಕಲ್ಲುತೂರಾಟ
400 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’