ಒಂಟಿ ಮಹಿಳೆಯ ಮನೆಗೆ ನುಗ್ಗಿದ ಆಗಂತುಕ

Team Udayavani, Jun 28, 2018, 9:53 AM IST

unknown.jpg

ಉಪ್ಪಿನಂಗಡಿ: ಹಾಡಹಗಲೇ ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿದ ಅಪರಿಚಿತ ಯುವಕ ಮಹಿಳೆಯ ಕತ್ತು ಹಿಸುಕಿ ಹಣ ನೀಡುವಂತೆ ಬೆದರಿಸಿದ ಘಟನೆ ಬುಧವಾರ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಜತ್ತೂರು ಗ್ರಾಮದ ಮಣಿಕ್ಕಳದಲ್ಲಿ ಸಂಭವಿಸಿದೆ.

ಉಪ್ಪಿನಂಗಡಿ ಸಿ.ಎ.ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಘುವೀರ್‌ ರಾವ್‌ ಅವರ ಪತ್ನಿ ರೇವತಿ ಹಲ್ಲೆಗೊಳಗಾದವರು. ಅವರು ಬಚ್ಚಲು ಮನೆಯಲ್ಲಿ ಬೆಂಕಿ ಹಾಕಲೆಂದು ತೆಂಗಿನಗರಿ ಹಿಡಿದುಕೊಂಡು ಮುಂಬಾಗಿಲ ಮೂಲಕ ಒಳಬರುತ್ತಿದ್ದಂತೆ ಸುಮಾರು 25ರಿಂದ 30 ವರ್ಷ ಪ್ರಾಯದ ಯುವಕ ಮನೆಯೊಳಗೆ ಪ್ರವೇಶಿಸಿದ್ದಾನೆ. ಯಾರು ನೀನು ಎಂದು ರೇವತಿ ಪ್ರಶ್ನಿಸುತ್ತಿದ್ದಂತೆಯೇ, ಆತ ಮಹಿಳೆಯ ಕತ್ತು ಅಮುಕಿ, ಸಮೀಪದಲ್ಲಿದ್ದ ಟೂತ್‌ ಪೇಸ್ಟ್‌ ಅನ್ನು ಬಾಯಿಗೆ ತುರುಕಿ ಬೊಬ್ಬೆ ಹೊಡೆಯಬಾರದೆಂದು ಬೆದರಿಸಿದ. ನನ್ನನ್ನು ಕೊಲ್ಲಬೇಡ. ನಿನಗೆ ಏನು ಬೇಕೋ ಅದನ್ನು ತೆಗೆದುಕೊಂಡು ಹೋಗು ಎಂದು ಮಹಿಳೆ ಬೇಡಿಕೊಂಡಾಗ, ಚಿನ್ನಾಭರಣ ಬೇಡ; ಹಣ ಕೊಡು ಎಂದು ಹೇಳಿದ. ಕೊಡುತ್ತೇನೆಂದು ಮಹಿಳೆ ಆತನಿಂದ ಬಿಡಿಸಿಕೊಂಡು ಕೋಣೆಯೊಳಗೆ ಹೋದರು. ಅಷ್ಟರಲ್ಲಿ ಏನಾಯಿತೋ ಗೊತ್ತಿಲ್ಲ – ಆತ ಸಮೀಪದ ಕಾಡಿನತ್ತ ಓಡಿ ಹೋದ. ಹಲ್ಲೆ ನಡೆಸುವ ವೇಳೆ ಆತನಲ್ಲಿ ಕೊಡೆ ಮಾತ್ರ ಇತ್ತು. ಯಾವುದೇ ಆಯುಧ ಕಾಣಿಸುತ್ತಿರಲಿಲ್ಲ ಎಂದು ಮಹಿಳೆ ತಿಳಿಸಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಎಸ್ಸೆ„ ನಂದಕುಮಾರ್‌ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ನೆನಪಿಗೆ ಬರುತ್ತಿದೆ ಪುಷ್ಪಲತಾ ಕೊಲೆ ಪ್ರಕರಣ 
ಸುಮಾರು 5 ವರ್ಷಗಳ ಹಿಂದೆ ಹಾಡಹಗಲೇ ನಡೆದಿದ್ದ, ಇಂದಿಗೂ ಪೊಲೀಸರಿಗೆ ಭೇದಿಸಲಾಗದ ಪುಷ್ಪಲತಾ ಕೊಲೆ ಪ್ರಕರಣಕ್ಕೆ ಸಾಮ್ಯತೆ ಇರುವಂತೆ ನಡೆದ ಈ ಘಟನೆಯಲ್ಲಿ ದುಷ್ಕರ್ಮಿ ಓಡಿ ಹೋಗಲು ಕಾರಣವೇನು ಎಂಬುದು ನಿಗೂಢವಾಗಿದೆ. ಯಾರೋ ಬಂದಂತೆ ಭಾಸವಾಗಿರುವ ಹಿನ್ನೆಲೆಯಲ್ಲಿ ಆತ ಪರಾರಿಯಾಗಿರಬೇಕು ಎಂದು ಶಂಕಿಸಲಾಗಿದೆ. ಈ ಮನೆಯ ಸುತ್ತಮುತ್ತ ಬೇರೆ ಮನೆಗಳಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಪುಷ್ಪಲತಾ ಪ್ರಕರಣದಲ್ಲೂ ಹಂತಕ ಚಿನ್ನಾಭರಣವನ್ನು ಒಯ್ದಿರಲಿಲ್ಲ ಎಂಬುದು ಪ್ರಕರಣದ ಬಗ್ಗೆ ಕುತೂಹಲ ಮೂಡುವಂತಾಗಿದೆ.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.