ರಾಜ್ಯಾಧ್ಯಕ್ಷ ಸ್ಥಾನ ಹುದ್ದೆಯಲ್ಲ; ಜವಾಬ್ದಾರಿ

Team Udayavani, Aug 22, 2019, 5:22 AM IST

nalin

ಮಂಗಳೂರು: ಯಾವುದೇ ಪದವಿ ನಿರೀಕ್ಷಿಸದೆ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷದ ನಾಯಕರು ಮತ್ತು ಹಿರಿಯರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದು, ಅದನ್ನು ಹುದ್ದೆಯಾಗಿ ಅಲ್ಲ, ಜವಾಬ್ದಾರಿಯಾಗಿ ಸ್ವೀಕರಿಸುತ್ತೇನೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಬುಧವಾರ ಬಿಜೆಪಿ ಕಚೇರಿಗೆ ಆಗಮಿಸಿ, ನಾಯಕರು, ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಬೆಳೆಸಿದ್ದೇ ಸಂಘ
ಚಿಕ್ಕಂದಿನಲ್ಲೇ ಸಂಘ ಪರಿವಾರದ ಕಾರ್ಯಕರ್ತನಾಗಿ ಹಲವು ಸವಾಲುಗಳ ಮಧ್ಯೆ ಈಜುತ್ತಲೇ ಇಲ್ಲಿವರೆಗೆ ಬಂದಿದ್ದೇನೆ. ಭಾರತ ಮಾತೆಯ ಗೌರವವನ್ನು ಬೆಳಗಿಸುವ ಉದ್ದೇಶದೊಂದಿಗೆ ಸಂಘದಲ್ಲಿ ತೊಡಗಿಕೊಂಡಿದ್ದ ನನ್ನನ್ನು ಬೆಳೆಸಿರುವುದು ಸಂಘ ಎಂದರು.

ಪಕ್ಷದ ಕಾರ್ಯಾಲಯ ದೇವಾಲಯ; ಕಾರ್ಯಕರ್ತರು ನನ್ನ ಪಾಲಿನ ದೇವರು. ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪೂರ್ವದಲ್ಲಿ ಕಾರ್ಯಕರ್ತರನ್ನು ಭೇಟಿ ಯಾಗಿ ಕಟೀಲು ದೇವಿಯ ಅನುಗ್ರಹ ಪಡೆದು ಬೆಂಗಳೂರಿಗೆ ತೆರಳುತ್ತೇನೆ ಎಂದರು.

ಪಕ್ಷದ ಸಿದ್ಧಾಂತಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಹಿರಿಯರು ಮತ್ತು ಕಿರಿಯ ಕಾರ್ಯ ಕರ್ತರನ್ನು ವಿಶ್ವಾಸದಲ್ಲಿ ಇರಿಸಿಕೊಂಡು ಜವಾಬ್ದಾರಿ ನಿರ್ವಹಿಸಲಿದ್ದೇನೆ. ಪಕ್ಷಕ್ಕೀಗ ಸುವರ್ಣ ಯುಗ. ಜವಾಬ್ದಾರಿಯೊಂದಿಗೆ ಆತ್ಮವಿಶ್ವಾಸದ ಜತೆ, ಎಚ್ಚರಿಕೆ, ಭಯವೂ ನನ್ನಲ್ಲಿದೆ ಎಂದರು.

ಮಾಜಿ ವಿಧಾನ ಪರಿಷತ್‌ ಸದಸ್ಯ ಮೋನಪ್ಪ ಭಂಡಾರಿ ಮಾತನಾಡಿ, ಸಂಘ ತೋರಿದ ದಾರಿಯಲ್ಲಿ ನಡೆದವರು ಇಂದು ಉನ್ನತ ಹುದ್ದೆಗಳಲ್ಲಿದ್ದಾರೆ. 16ನೇ ವಯಸ್ಸಿನಿಂದ ಸಂಘದ ಜವಾಬ್ದಾರಿ ಹೊತ್ತ ನಳಿನ್‌ಗೆ ರಾಜ್ಯಾಧ್ಯಕ್ಷ ಸ್ಥಾನ ದೊರೆತಿದೆ. ಪಕ್ಷದ ಕಾರ್ಯಕರ್ತರು ಯಾವ ಸಂದರ್ಭದಲ್ಲೂ ಸಂಯಮ ಕಳೆದುಕೊಳ್ಳದೆ ಹಿರಿಯರ ಮಾತುಗಳನ್ನು ಪಾಲಿಸುತ್ತ ನಳಿನ್‌ ಅವರನ್ನು ಬೆಂಬಲಿಸಬೇಕು ಎಂದು ಕರೆ ನೀಡಿದರು.

ಪಕ್ಷದ ಮುಖಂಡರಾದ ಜಗದೀಶ್‌ ಅಧಿಕಾರಿ, ಕಿಶೋರ್‌ ರೈ, ರವಿಶಂಕರ್‌ ಮಿಜಾರು, ರಾಮಚಂದರ್‌ ಬೈಕಂಪಾಡಿ ಮೊದಲಾದವರು ಉಪಸ್ಥಿತರಿದ್ದರು.
ಸುದರ್ಶನ್‌ ಅವರು ಕಾರ್ಯಕ್ರಮ ನಿರೂಪಿಸಿದರು.

ಅಸಮಾಧಾನಗಳಿದ್ದರೆ ಪಕ್ಷದೊಳಗೆ ಬಗೆಹರಿಸಿ
ಮಂಗಳೂರು: ಅಧಿಕಾರ ಸಿಗದೇ ಇದ್ದಾಗ ನೋವು ಸಹಜ. ಹಾಗೆಂದು ನಾವೇ ಕಟ್ಟಿ ಬೆಳೆಸಿದ ಪಕ್ಷದ ವಿರುದ್ಧ ಮಾತನಾಡುವುದು ಸರಿಯಲ್ಲ. ಅಸಮಾಧಾನಗಳೇನೇ ಇದ್ದರೂ ಪಕ್ಷದೊಳಗೆ ಬಗೆಹರಿಸಬೇಕು ಎಂದು ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಬುಧವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದ ಅತಿವೃಷ್ಟಿಗೆ ಕೇಂದ್ರದಿಂದ ಪರಿಹಾರ ಪಡೆಯಬೇಕಾದರೆ ಆಗಿರುವ ಹಾನಿಯ ಬಗ್ಗೆ ಸಮಗ್ರ ವರದಿ ಸಲ್ಲಿಕೆಯಾಗಬೇಕು. ಅನಂತರ ಕೇಂದ್ರದ ತಂಡ ಪರಿಶೀಲನೆ ನಡೆಸಬೇಕು. ಆ ಬಳಿಕವೇ ಪರಿಹಾರ ಮೊತ್ತ ಬಿಡುಗಡೆಗೊಳಿಸುವುದು ನಿಯಮ. ಆದರೂ ಸಚಿವರಿಲ್ಲದೆ ಏಕಾಂಗಿಯಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ ತತ್‌ಕ್ಷಣದ ಪರಿಹಾರ ಘೋಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರವೂ ಪರಿಹಾರ ಮೊತ್ತವನ್ನು ಪ್ರಕಟಿಸುವ ವಿಶ್ವಾಸವಿದೆ ಎಂದರು.

ರಾಜ್ಯದ ಅಭ್ಯುದಯಕ್ಕೆ ಬದ್ಧ
ಸಂಸದ, ಪಕ್ಷದ ರಾಜ್ಯಾಧ್ಯಕ್ಷ ಎರಡೂ ಹೊಣೆಗಳನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸ ಇದೆ. ಈ ಹಿಂದೆ ಡಿ.ವಿ. ಸದಾನಂದ ಗೌಡ ಮತ್ತು ಪ್ರಹ್ಲಾದ ಜೋಶಿ ಇದೇ ಎರಡು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು. ಈಗಲೂ ರಾಜ್ಯದ ವಿಚಾರದಲ್ಲಿ ಎಲ್ಲ ಸಂಸದರು ಒಟ್ಟಾಗಿ ಕೇಂದ್ರ ಸಚಿವರು ಅಥವಾ ಅಧಿಕಾರಿಗಳನ್ನು ಭೇಟಿ ಮಾಡುತ್ತೇವೆ. ಇದರಲ್ಲಿ ರಾಜಕೀಯದ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ನಳಿನ್‌ ತಿಳಿಸಿದರು.

ಇಂದು ದಿಲ್ಲಿಯಲ್ಲಿ ವರಿಷ್ಠರ ಭೇಟಿ
ಬುಧವಾರ ಬೆಳಗ್ಗೆ ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಬಂದಿಳಿದ ನಳಿನ್‌ ಅವರಿಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ದೊರೆಯಿತು. ಬಳಿಕ ಅವರು ತಮ್ಮ ನಿವಾಸಕ್ಕೆ ತೆರಳಿ ತಾಯಿಯ ಆಶೀರ್ವಾದ ಪಡೆದರು. ಪತ್ನಿ ಆರತಿ ಬೆಳಗಿ, ತಿಲಕವಿರಿಸಿ ಸ್ವಾಗತಿಸಿದರು. ಮನೆ ಮಂದಿ ಸಿಹಿಯನ್ನು ಬಾಯಿಗಿರಿಸಿ ಸಂಭ್ರಮಿಸಿದರು. ಬಳಿಕ ಸಂಘ ನಿಕೇತನದಲ್ಲಿ, ಬಿಜೆಪಿ ಕಚೇರಿಯಲ್ಲಿ ನಳಿನ್‌ ಅಭಿನಂದನೆ ಸ್ವೀಕರಿಸಿದರು. ಸಂಜೆ ಕಟೀಲು, ಶರವು ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದರು.
ಗುರುವಾರ ಬೆಳಗ್ಗೆ ನಳಿನ್‌ ಕುಮಾರ್‌ ಅವರು ದಿಲ್ಲಿಗೆ ತೆರಳಲಿದ್ದು, ಪಕ್ಷದ ವರಿಷ್ಠರನ್ನು ಭೇಟಿ ಮಾಡುವರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.