ಭರದಿಂದ ಸಾಗುತ್ತಿದೆ ಕಾಮಗಾರಿ

ಪಂಪ್‌ವೆಲ್‌ ಮೇಲ್ಸೇತುವೆ ಗಡುವಿಗೆ ವಾರವಷ್ಟೇ ಬಾಕಿ

Team Udayavani, Jan 25, 2020, 1:30 AM IST

ಮಂಗಳೂರು: ಬಹುಚರ್ಚಿತ ಪಂಪ್‌ವೆಲ್‌ ಮೇಲ್ಸೇತುವೆ ಕಾಮಗಾರಿ ಕೆಲವು ದಿನಗಳಿಂದ ಭರದಿಂದ ಸಾಗುತ್ತಿದೆ. ಮೇಲ್ಸೇತುವೆಯ ಡಾಮರೀಕರಣ ವೇಗವಾಗಿ ನಡೆಯುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಉದ್ಘಾಟನೆಗೊಳ್ಳುವ ಸಾಧ್ಯತೆಯಿದೆ.

ಪಂಪ್‌ವೆಲ್‌ ಮೇಲ್ಸೇತುವೆಗೆ ಅನೇಕ ಗಡುವುಗಳ ಬಳಿಕ 2019ರ ಡಿ. 31ರೊಳಗೆ ಕಾಮಗಾರಿ ಪೂರ್ಣಗೊಂಡು 2020ರ ಜನವರಿ ಮೊದಲ ವಾರ ಉದ್ಘಾಟನೆ ಎಂದು ಸಂಸದ ನಳಿನ್‌ ಇತ್ತೀಚೆಗೆ ಡೆಡ್‌ಲೈನ್‌ ನೀಡಿದ್ದರು. ಆದರೆ ಗುತ್ತಿಗೆ ನಿರ್ವಹಿಸಿದ ಸಂಸ್ಥೆಗೆ ಈ ಡೆಡ್‌ಲೈನ್‌ನಲ್ಲಿ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ.

ಡಿ. 31ರಂದು ಸಂಸದರು ಮತ್ತು ಅಧಿಕಾರಿಗಳ ಜತೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿತ್ತು. ಕಾಮಗಾರಿ ಪೂರ್ಣಗೊಳಿಸಲು 2020ರ ಫೆಬ್ರವರಿ ಅಂತ್ಯದವರೆಗೆ ಕಾಲಾವಕಾಶವನ್ನು ಗುತ್ತಿಗೆ ನಿರ್ವಹಿಸಿದ ಸಂಸ್ಥೆ ಕೇಳಿತ್ತು. ಆ ವೇಳೆ ಸಂಸದರು ಪಂಪ್‌ವೆಲ್‌ ಮೇಲ್ಸೇತುವೆಯ ಸಂಪೂರ್ಣ ಮೇಲುಸ್ತುವಾರಿಯನ್ನು ಜಿಲ್ಲಾಡಳಿತಕ್ಕೆ ವಹಿಸಿದ್ದರು. ಗಡುವಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು, ಪಂಪ್‌ವೆಲ್‌ ಮೇಲ್ಸೇತುವೆ ಕಾಮಗಾರಿ ಹಗಲು-ರಾತ್ರಿ ಭರದಿಂದ ಸಾಗುತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ