ಬಿಸಿಲ ಬೇಗೆ: ಅಡಿಕೆ ತೋಟಕ್ಕೆ ನೀರಿಲ್ಲ

Team Udayavani, Feb 19, 2018, 11:48 AM IST

19-Feb-4.jpg

ಸುಳ್ಯ : ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆ ಏರಿಕೆಯಾಗುತ್ತಿದ್ದು ಬಹುತೇಕ ಬಾವಿ, ಕೆರೆಯ ನೀರು ಇಳಿಮುಖವಾಗುತ್ತಿದೆ. ತಾಲೂಕಿನ ಪ್ರಮುಖ ಅಡಿಕೆ ಕೃಷಿಗೆ ಈ ತಿಂಗಳಲ್ಲೇ ನೀರಿನ ಕೊರತೆ ಕಾಡುವ ಆತಂಕ ಹುಟ್ಟಿಸಿದೆ.

ಹಳದಿರೋಗ, ಬೇರು ಹುಳ ರೋಗ, ಆನೆಕಾಟ ಇತ್ಯಾದಿಗಳಿಂದ ತತ್ತರಿಸಿರುವ ತಾಲೂಕಿನ ಅಡಿಕೆ ಬೆಳೆಗಾರರಿಗೆ ಸುಡು ಬಿಸಿಲು ಮತ್ತಷ್ಟು ಆತಂಕ ಸೃಷ್ಟಿಸಿದೆ. ಸಮರ್ಪಕ ವಿದ್ಯುತ್‌ ಪೂರೈಕೆ ಇಲ್ಲದೇ ಅತಂತ್ರ ಸ್ಥಿತಿಯಲ್ಲಿರುವ ಕೃಷಿಕರಿಗೆ ಈಗ ನೀರೂ ಕಡಿಮೆಯಾಗುತ್ತಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಅಡಿಕೆಯೇ ಆಧಾರ
ರಬ್ಬರ್‌ ಧಾರಣೆ ಪಾತಾಳಕ್ಕೆ ಇಳಿದ ಪರಿಣಾಮ, ಅಡಿಕೆಯನ್ನೇ ಜನ ನಂಬಿಕೊಂಡಿದ್ದಾರೆ. ಬೇಸಗೆಯಲ್ಲಿ ಅಡಿಕೆಗೆ ನೀರು ಅತ್ಯಗತ್ಯ. ಬೇರಿಂದ ಕೊಂಬೆ ತನಕವು ಹಸುರಾಗಿದ್ದರೆ ಮಾತ್ರ ಅದರಿಂದ ಫಸಲು ನಿರೀಕ್ಷಿಸಬಹುದು. ಫಸಲು ನೀಡುವ ಅಡಿಕೆ ಮರಕ್ಕೆ ದಿನಕ್ಕೆ 18ರಿಂದ 20 ಲೀ. ನೀರು ಬೇಕು. ಅವೆಲ್ಲವೂ ಕೆರೆ, ಬಾವಿ, ಹೊಳೆ ಅಥವಾ ಕೊಳವೆಬಾವಿ ಮೂಲಕ ಭರಿಸಬೇಕು. ಆ ನೀರಿನ ಮೂಲಗಳೇ ಬತ್ತುತ್ತಿರುವುದರಿಂದ ಮಾರ್ಚ್‌ ಬಳಿಕ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇದೆ. 

ಈ ಬಾರಿ ಉಷ್ಣಾಂಶ ಅಧಿಕವಾಗಿದೆ. ಮಧ್ಯಾಹ್ನ 12ರಿಂದ 4 ಗಂಟೆಯ ತನಕ ಸುಡು ಬಿಸಿಲು ಇದೆ. ಫೆಬ್ರವರಿಯಲ್ಲಿ 30 ಡಿ.ಸೆ. ನಿಂದ 33 ಡಿ. ಸೆ. ಒಳಗೆ ಇರುತ್ತಿದ್ದ ಉಷ್ಣಾಂಶ ಈ ವರ್ಷ 37 ಡಿ. ಸೆ. ಗಡಿ ದಾಟಿದೆ. ಹವಾಮಾನ ಇಲಾಖೆ ಪ್ರಕಾರ ಶಿವರಾತ್ರಿ ಬಳಿಕ ಬಿಸಿಲು ಹೆಚ್ಚಿದೆ.

ವಿದ್ಯುತ್‌ ಕಣ್ಣಾಮುಚ್ಚಾಲೆ
ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್‌ ಕಣ್ಣಾಮುಚ್ಚಾಲೆ ಸಾಮಾನ್ಯವಾಗಿದೆ. ಮಧ್ಯರಾತ್ರಿ ತ್ರಿಫೇಸ್‌ ವಿದ್ಯುತ್‌ ನೀಡುವ ಕಾರಣ, ಕೆರೆ, ಹೊಳೆಗಳಿಂದ ನೀರು ಬಳಸುವ ಕೃಷಿಕರಿಗೆ ಈ ಹೊತ್ತಲ್ಲಿ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಮಧ್ಯರಾತ್ರಿ ಬದಲು ಬೆಳಗ್ಗಿನ ಹೊತ್ತಲ್ಲಿ ತ್ರಿಫೇಸ್‌ ವಿದ್ಯುತ್‌ ನೀಡಬೇಕು ಎಂಬ ಕೃಷಿಕರ ಬೇಡಿಕೆ ಈಡೇರಿಲ್ಲ.

ಫಸಲು ನಷ್ಟ ಭೀತಿ
ತಾಲೂಕಿನ ಒಟ್ಟು ಅಡಿಕೆ ಬೆಳೆಯುವ ಪ್ರದೇಶ 28,096 ಎಕ್ರೆ. ತೋಟಗಾರಿಕಾ ಇಲಾಖೆಯ ಪ್ರಕಾರ ಹೆಕ್ಟೇರಿಗೆ 20 ಕಿಂಟ್ವಾಲ್‌ ಅಡಿಕೆ ಸಿಕ್ಕಿದರೆ, ಒಟ್ಟು ಹೆಕ್ಟೇರಿಗೆ 5,61,920 ಕಿಂಟ್ವಾಲ್‌ ದೊರೆಯುತ್ತದೆ. ಕೆಲ ವರ್ಷಗಳಿಂದ ನೀರಿನ ಕೊರತೆಯಿಂದ ಅಡಿಕೆ ಇಳುವರಿ ಕುಸಿತವಾಗುತ್ತಿದೆ. ಬಿಸಿಲಿನ ತೀವ್ರತೆ ಇದೇ ರೀತಿ ಮುಂದುವರಿದರೆ, ಹೊಸ ಹಿಂಗಾರ ಕರಟಿ ಫಸಲು ನಷ್ಟವಾಗುವುದು ನಿಶ್ಚಿತ ಅನ್ನುತ್ತಾರೆ ಬೆಳೆಗಾರರು.

ಒಂದು ತಿಂಗಳು ಸಮಸ್ಯೆಯಿಲ್ಲ
ಸದ್ಯಕ್ಕೆ ಇನ್ನು ಒಂದು ತಿಂಗಳು ಸಮಸ್ಯೆ ಕಾಡದು. ಆದರೆ ಅನಂತರ ಬಿಸಿಲಿನ ಪ್ರಖರತೆ ತೀವ್ರವಾದಷ್ಟು ನೀರಿನ ಕೊರತೆ ಹೆಚ್ಚಬಹುದು. ಈ ಬಗ್ಗೆ ಯೋಚಿಸಬೇಕಿದೆ.
– ಎಂ.ಡಿ. ವಿಜಯ ಕುಮಾರ್‌
ಸಂಚಾಲಕರು, ಅಖಿಲ ಭಾರತ ಅಡಿಕೆ
ಬೆಳೆಗಾರರ ಸಂಘ, ಸುಳ್ಯ ಘಟಕ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.