ಹೆದ್ದಾರಿಗೆ ಬಿದ್ದ ಮರ: ಸಚಿವರ ವಾಹನಕ್ಕೆ ತಡೆ

Team Udayavani, Jul 11, 2018, 2:21 PM IST

shiradi.png

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ರಾ.ಹೆ. 75ರಲ್ಲಿ ಬರುವ ಪೆರಿಯಶಾಂತಿ ಬಳಿಯ ಲಾವತ್ತಡ್ಕದಲ್ಲಿ ಮಂಗಳವಾರ ಸಾಯಂಕಾಲ ಹೆದ್ದಾರಿಗೆ ಮರವೊಂದು ಬಿದ್ದ ಪರಿಣಾಮ ಅದೇ ದಾರಿಯಾಗಿ ಬೆಂಗಳೂರಿನತ್ತ ಸಾಗುತ್ತಿದ್ದ ವಿಧಾನಸಭಾಧ್ಯಕ್ಷರು, ಸಚಿವರು, ವಿಧಾನ ಪರಿಷತ್‌ ಸದಸ್ಯರ ಸಂಚಾರಕ್ಕೆ ತಡೆಯುಂಟಾಯಿತು.

ಮಂಗಳವಾರ ನಿಧನ ಹೊಂದಿದ ಮಾಜಿ ಸಚಿವ ಬಿ.ಎ. ಮೊಹಿದೀನ್‌ ಅವರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಧಾನ ಸಭಾಧ್ಯಕ್ಷ ರಮೇಶ್‌ ಕುಮಾರ್‌, ಸಚಿವ ಯು.ಟಿ. ಖಾದರ್‌, ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಅವರು ಬೆಂಗಳೂರಿನಿಂದ ಶಿರಾಡಿ ಘಾಟಿ ಮಾರ್ಗವಾಗಿ ಸಂಚರಿಸುತ್ತಿದ್ದರು. ರಸ್ತೆ ತಡೆಯಿಂದಾಗಿ ಸ್ವಲ್ಪ ಕಾಲ ಅಲ್ಲೇ ಉಳಿದ ಅವರು ಬಳಿಕ ಇಚ್ಲಂಪಾಡಿಯಲ್ಲಿ ಕಚ್ಚಾರಸ್ತೆಯ ಮೂಲಕ ಸಂಚರಿಸಿ ಪ್ರಯಾಣ ಮುಂದುವರಿಸಿದರು.

ಅರಣ್ಯ ಇಲಾಖಾ ಸಿಬಂದಿ ತುರ್ತು ಕಾರ್ಯಾಚರಣೆ ನಡೆಸಿ ಬಿದ್ದ ಮರವನ್ನು ತೆರವುಗೊಳಿಸಿದರು.

ಶಿರಾಡಿ: ಗಣ್ಯರಿಗೆ ಮುಕ್ತ !
ಕಾಂಕ್ರೀಟ್‌ ಕಾಮಗಾರಿ ಕಾರಣಕ್ಕೆ ಶಿರಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಸ್ಥಳೀಯರಿಗೆ ಕೂಡ ಈ ರಸ್ತೆಯನ್ನು ಬಳಸಲು ಅವಕಾಶ ನೀಡಲಾಗದು ಎಂದು ಕಟ್ಟಪ್ಪಣೆ ಮಾಡಲಾಗಿತ್ತು. ಆದರೆ ಮಂಗಳವಾರ ಸಚಿವರಾದಿಯಾಗಿ ರಾಜಕಾರಣಿಗಳು ಈ ರಸ್ತೆಯಲ್ಲಿ ಸಂಚರಿಸುವುದರೊಂದಿಗೆ ನಿಷೇಧ ಕೇವಲ ಸಾಮಾನ್ಯ ಜನರಿಗೆ ಮಾತ್ರ ಎನ್ನುವುದು ಜಗಜ್ಜಾಹೀರಾಯಿತು.

ಈ ಹಿಂದೆಯೂ ಕಾಮಗಾರಿ ನಡೆಯುತ್ತಿದ್ದ ವೇಳೆ ಅಧಿಕಾರಿಗಳಿಗೆ ಹಾಗೂ ರಾಜಕಾರಣಿಗಳಿಗೆ ಮುಕ್ತ ಸಂಚಾರ ಪ್ರಾಪ್ತವಾಗಿತ್ತಾದರೂ ಅದೆಲ್ಲವೂ ಗೌಪ್ಯವಾಗಿತ್ತು. ಇಂದು ರಸ್ತೆಗೆ ಮರ ಬಿದ್ದು ಸಂಚಾರ ಸ್ಥಗಿತಗೊಂಡ ಕಾರಣ ಪ್ರಭಾವಿಗಳ ವಾಹನ ಸಂಚಾರ ನಿರಾತಂಕವಾಗಿದೆ ಎನ್ನುವುದು ಜನಸಾಮಾನ್ಯರಿಗೆ ತಿಳಿಯಿತು. ಪ್ರಭಾವಿಗಳ ವಾಹನ ಸಂಚಾರದಿಂದ ಕಾಮಗಾರಿಯ ಗುಣಮಟ್ಟಕ್ಕೆ ಯಾವುದೇ ತೊಂದರೆಯಾಗಲಾರದೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಶಿರಾಡಿ ಘಾಟಿ ರಸ್ತೆ ತೆರೆದಿಲ್ಲ : ಡಿ.ಸಿ.
ಮಂಗಳೂರು: ಶಿರಾಡಿ ಘಾಟಿ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ ಎಂಬ ಸಂದೇಶ ರವಾನೆಯಾಗುತ್ತಿದ್ದು, ಇದು ಸುಳ್ಳು, ವದಂತಿ ಮಾತ್ರ. ರಸ್ತೆ ಕಾಮಗಾರಿ ಸಂಪೂರ್ಣವಾಗದ ಹಿನ್ನೆಲೆಯಲ್ಲಿ ಶಿರಾಡಿ ಘಾಟಿ ರಸ್ತೆ ಸಂಚಾರಕ್ಕೆ ಮುಕ್ತವಾಗಿಲ್ಲ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಸ್ಪಷ್ಟಪಡಿಸಿದ್ದಾರೆ.

ಮಾಜಿ ಸಚಿವ ಬಿ.ಎ. ಮೊಹಿದೀನ್‌ ಅವರ ಪಾರ್ಥಿವ ಶರೀರ ಹಾಗೂ ಅವರೊಂದಿಗೆ ಮೂವರು ಸಚಿವರು ಇದ್ದ ಹಿನ್ನೆಲೆಯಲ್ಲಿ ಅವರ ವಾಹನ ಶಿರಾಡಿ ಘಾಟಿ ರಸ್ತೆಯಲ್ಲಿ ಆಗಮಿಸಿದೆ. ಅದನ್ನು ಹೊರತು ಪಡಿಸಿ ಇನ್ಯಾವುದೇ ವಾಹನಗಳನ್ನು ಆ ರಸ್ತೆಯಲ್ಲಿ ಬಿಡುತ್ತಿಲ್ಲ. ಜು. 15ರ ವೇಳೆಗೆ ಕಾಮಗಾರಿ ಪೂರ್ಣಗೊಂಡು ರಸ್ತೆ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆ ಇದೆ ಎಂದು  ತಿಳಿಸಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.