ಕೊಣಾಜೆ ಭಜನಾ ಮಂದಿರದಲ್ಲಿ ಕುಕೃತ್ಯ ಎಸಗಿದ ದುಷ್ಕರ್ಮಿಗಳು: ಭಗವಧ್ವಜಕ್ಕೆ ಅವಮಾನ!
Team Udayavani, Jan 20, 2021, 1:41 PM IST
ಉಳ್ಳಾಲ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳು ಭಗವಧ್ವಜದ ಮೇಲೆ ಮಲ ಮೂತ್ರ ವಿಸರ್ಜಿಸಿ ಕಳವಿಗೆ ವಿಫಲ ಯತ್ನ ನಡೆಸಿದ್ದಾರೆ.
ಮಂಗಳವಾರ ಸಂಜೆ ಉಳ್ಳಾಲ ಜಂಕ್ಷನ್ ನಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಮತ್ತು ಬಿಜೆಪಿ ಮುಖಂಡರ ಪತ್ರಿಕೆ ಜಾಹೀರಾತಿನಲ್ಲಿ ಅವಾಚ್ಯ ಶಬ್ದಗಳನ್ನು ಬರೆದಿರುವ ಪತ್ರ ಹಾಕಿರುವುದು ಬೆಳಕಿಗೆ ಬರುತ್ತಿದ್ದಂತೆ, ಇದೀಗ ಕೊಣಾಜೆ ಭಜನಾ ಮಂದಿರದಲ್ಲಿ ದುಷ್ಕೃತ್ಯ ಎಸಗಲಾಗಿದೆ.
ಇದನ್ನೂ ಓದಿ:ಉಳ್ಳಾಲ: ಕಾಣಿಕೆ ಹುಂಡಿಯಲ್ಲಿ ಪತ್ತೆಯಾದ ಕಾಂಡೋಮ್
ಮಂದಿರದ ಬಾಗಿಲು ಒಡೆಯಲು ಯತ್ನಿಸಿದ ದುಷ್ಕರ್ಮಿಗಳು ಸ್ಥಳದಲ್ಲಿದ್ದಂತಹ ಭಗವಧ್ವಜಕ್ಕೆ ಮಲಮೂತ್ರ ವಿಸರ್ಜಿಸಿ ತೆರಳಿದ್ದಾರೆ.
ಇದನ್ನೂ ಓದಿ: ವಿಮಾನದಲ್ಲಿ 74 ಲಕ್ಷ ರೂ. ಸಾಗಿಸುತ್ತಿದ್ದ ಕಸ್ಟಮ್ಸ್ ಅಧಿಕಾರಿಯನ್ನು ಬಂಧಿಸಿದ ಪೊಲೀಸರು
ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಕಮೀಷನರ್ ಭೇಟಿ ನೀಡಿದ್ದಾರೆ. ಕಳವಿಗೆ ಯತ್ನಿಸಿರುವವರು ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ಹೇಳಿದರು.