ಜೆಇ ಲಸಿಕೆಯಿಂದ ಅಡ್ಡ ಪರಿಣಾಮವಿಲ್ಲ
Team Udayavani, Dec 8, 2022, 11:36 PM IST
ಮಂಗಳೂರು: ಮೆದುಳು ಜ್ವರ ಬಾರದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಮಕ್ಕಳಿಗೆ ಜಪಾನೀಸ್ ಎನ್ಸೆಫಲೈಟಿಸ್ (ಜೆಇ) ಲಸಿಕೆ ನೀಡಿದ್ದು, ಮಕ್ಕಳಿಗೆ ಯಾವುದೇ ರೀತಿಯ ಅಡ್ಡಪರಿಣಾಮ ಉಂಟಾಗಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಕುಮಾರ್ ಅವರು ತಿಳಿಸಿದ್ದಾರೆ.
ಈ ಲಸಿಕಾಕರಣ ಅತ್ಯಂತ ಸುರಕ್ಷಿತವಾಗಿದೆ. ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಯಾವುದೇ ಕಾರಣಕ್ಕೆ ಭಯ ಪಡುವ ಅಗತ್ಯವಿಲ್ಲ. 1ರಿಂದ 15 ವರ್ಷದ ಮಕ್ಕಳೆಲ್ಲರೂ ಈ ಲಸಿಕೆ ಪಡೆಯುವ ಮೂಲಕ ಸಂಪೂರ್ಣ ಸಹಕಾರ ನೀಡಬೇಕು. ಸಾಮಾಜಿಕ ಜಾಲತಾಣದಲ್ಲಿ ಹರಡುವ ಯಾವುದೇ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಹೇಳಿದ್ದಾರೆ.
24,936 ಮಕ್ಕಳಿಗೆ ಲಸಿಕೆ:
ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುರುವಾರ 24,936 ಮಂದಿಗೆ ಜೆಇ ಲಸಿಕೆ ನೀಡಲಾಗಿದೆ. ಬಂಟ್ವಾಳ 815, ಬೆಳ್ತಂಗಡಿ 2,058, ಮಂಗಳೂರು 11,614, ಪುತ್ತೂರು 3,264, ಉಡುಪಿ 4,152, ಕುಂದಾಪುರ 964 ಮತ್ತು ಕಾರ್ಕಳದಲ್ಲಿ 2,069 ಮಕ್ಕಳು ಲಸಿಕೆ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ