ಬಂಟ್ವಾಳದ ಒಂದೇ ಮನೆಯ ಮೂವರಿಗೆ ಕೋವಿಡ್-19 ಸೋಂಕು
Team Udayavani, May 9, 2020, 12:30 PM IST
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಒಂದೇ ಮನೆಯ ಮೂವರಿಗೆ ಇಂದು ಕೋವಿಡ್ -19 ಸೋಂಕು ದೃಢವಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಜನರ ಆತಂಕ ಮತ್ತಷ್ಟು ಹೆಚ್ಚಿದೆ.
ಈ ಹಿಂದೆ ಸೋಂಕು ದೃಢವಾಗಿದ್ದ ಸೋಂಕಿತ ಸಂಖ್ಯೆ 578ರ ಸಂಪರ್ಕದಿಂದ ಈಗ ಮತ್ತೆ ಮೂವರಿಗೆ ಸೋಂಕು ತಾಗಿದೆ. 30 ವರ್ಷದ ಪುರುಷ, 60 ಮತ್ತು 70 ವರ್ಷದ ಇಬ್ಬರು ಮಹಿಳೆಯರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢಪಟ್ಟಿದೆ.
ಇವರು ಮೊದಲು ಮೃತಪಟ್ಟಿದ್ದ ಬಂಟ್ವಾಳದ ಮಹಿಳೆಯ ಮಹಿಳೆಯ ದ್ವಿತೀಯ ಸಂಪರ್ಕದವರಾಗಿದ್ದಾರೆ. ಸದ್ಯ ಇವರ ಮನೆಯ ನಾಲ್ವರು ಸದಸ್ಯರಿಗೆ ಕೋವಿಡ್-19 ಸೋಂಕು ತಾಗಿರುವದು ದೃಢವಾಗಿದೆ.
ರಾಜ್ಯದಲ್ಲಿ ಇಂದು ಹೊಸ 36 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಇವರಲ್ಲಿ 30 ಜನರು ಮರಣ ಹೊಂದಿದ್ದರೆ, 379 ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ಒಂದು ಪ್ರಕರಣ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ