ಮೂಲ್ಕಿ-ಮೂಡುಬಿದಿರೆ 30 ಕಿ.ಮೀ. ತಿರಂಗಾ ಯಾತ್ರೆ ಸಂಪನ್ನ : 100 ಮೀ. ಉದ್ದದ ಧ್ವಜ ಬಳಕೆ

Team Udayavani, Aug 15, 2022, 9:05 AM IST

ಮೂಲ್ಕಿ-ಮೂಡುಬಿದಿರೆ 30 ಕಿ.ಮೀ. ತಿರಂಗಾ ಯಾತ್ರೆ ಸಂಪನ್ನ : 100 ಮೀ. ಉದ್ದದ ಧ್ವಜ ಬಳಕೆ

ಮೂಡುಬಿದಿರೆ : ಬಿಜೆಪಿ ಮೂಲ್ಕಿ-ಮೂಡುಬಿದಿರೆ ಮಂಡಲದ ಆಝಾದಿ ಕಾ ಅಮೃತ್‌ ಮಹೋತ್ಸವದ ತಿರಂಗಾ ಯಾತ್ರೆ ಅಭಿಯಾನ ಸಮಿತಿ ಹಮ್ಮಿಕೊಂಡ “ಮೂಲ್ಕಿ ತಾಲೂಕಿನಿಂದ ಮೂಡುಬಿದಿರೆ ತಾಲೂಕಿಗೆ 100 ಮೀಟರ್‌ ಉದ್ದದ ರಾಷ್ಟ್ರಧ್ವಜದೊಂದಿಗೆ ಸಾಗಿ ಬಂದ ತಿರಂಗಾ ಯಾತ್ರೆ ಮೂಡುಬಿದಿರೆ ತಾಲೂಕು ಆಡಳಿತ ಸೌಧದ ಎದುರು ರವಿವಾರ ಅಪರಾಹ್ನ ಸಂಪನ್ನಗೊಂಡಿತು.

ಶಾಸಕ ಉಮಾನಾಥ ಕೋಟ್ಯಾನ್‌ ಮಾತನಾಡಿ, ಸ್ವಾತಂತ್ರ್ಯ ಸೇನಾನಿ ಕಾರ್ನಾಡು ಸದಾಶಿವ ರಾಯರ ಹುಟ್ಟೂರಾದ ಮೂಲ್ಕಿಯಿಂದ ಮುಂಜಾನೆ 8ಕ್ಕೆ ಹೊರಟು, ಭಾರತದ ಪ್ರಪ್ರಥಮ ಸ್ವಾತಂತ್ರÂ ಯೋಧೆ ವೀರ ರಾಣಿ ಅಬ್ಬಕ್ಕಳ ಹುಟ್ಟೂರಾದ ಮೂಡುಬಿದಿರೆಗೆ ಸಂಜೆ 6.30ಕ್ಕೆ ತಲುಪಿದ ತಿರಂಗಾ ಯಾತ್ರೆಯು ಅಭೂತಪೂರ್ವ ಯಶಸ್ಸು ಕಂಡಿದೆ; 10 ತಾಸು ಕಾಲ, 30 ಕಿ.ಮೀ. ಉದ್ದಕ್ಕೆ ಮೂರು ಮೀಟರ್‌ ಅಗಲ, ನೂರು ಮೀಟರ್‌ ಉದ್ದದ ರಾಷ್ಟ್ರಧ್ವಜವನ್ನು ಕೈಯಲ್ಲಿ ಹಿಡಿದು ನಡೆದುಕೊಂಡೇ ಸಾಗಿ ಬಂದಿರುವುದು ದಾಖಲೆಯಾಗಿದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ. ಮಾತನಾಡಿ, ಭಾರತ ಯಾವುದೇ ಬಾಹ್ಯ ಆಕ್ರಮಣಗಳಿಗೆ ಜಗ್ಗಿಲ್ಲ; ತಾನಾಗಿ ಯಾವತ್ತೂ ಆಕ್ರಮಣ ಮಾಡಿಲ್ಲ. ವಿಶ್ವದಲ್ಲೇ ಇನ್ನೊಂದೆಡೆ ಕಾಣದ, ದೈವದತ್ತ ಪ್ರಾಕೃತಿಕ ಸ್ವರೂಪ, ಸಂಪನ್ಮೂಲಗಳ ಆಗರವಾದ ಭಾರತವು ಧರ್ಮ, ಸಂಸ್ಕೃತಿ, ಕಲೆ, ವಿಜ್ಞಾನ, ಶಿಕ್ಷಣ ಹೀಗೆ ಎಲ್ಲ ರಂಗಗಳಲ್ಲೂ ಮುಂಚೂಣಿಯಲ್ಲಿದೆ ಎಂದರು.

ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಕಸ್ತೂರಿ ಪಂಜ, ಉಪಾಧ್ಯಕ್ಷ ಈಶ್ವರ ಕಟೀಲು, ವಕ್ತಾರ ಜಗದೀಶ ಶೇಣವ, ಪುರಸಭೆ ಅಧ್ಯಕ್ಷ ಪ್ರಸಾದ್‌ ಕುಮಾರ್‌, ಮೂಲ್ಕಿ ನಗರ ಪಂ. ಅಧ್ಯಕ್ಷ ಸುಭಾಷ ಶೆಟ್ಟಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ, ಹಿರಿಯ ವಕೀಲ ಕೆ. ಆರ್‌. ಪಂಡಿತ್‌, ಬಿಜೆಪಿ ಮಂಡಲಾಧ್ಯಕ್ಷ ಸುನಿಲ್‌ ಆಳ್ವ, ತಿರಂಗ ಅಭಿಯಾನ ಸಂಚಾಲಕರಾದ ಸುಧಾಕರ ಆಚಾರ್ಯ, ಅಭಿಲಾಷ್‌ ಶೆಟ್ಟಿ, ಪ್ರಮುಖರಾದ ಗೋಪಾಲ ಶೆಟ್ಟಿಗಾರ್‌, ಕೇಶವ ಕರ್ಕೇರ, ಲಕ್ಷ್ಮಣ ಪೂಜಾರಿ, ಭಾರತಿ ಶೆಟ್ಟಿ ಮೊದಲಾದವರಿದ್ದರು.

ಭಾರತ ಮಾತೆಯ ಭಾವಚಿತ್ರ ಮುಂದಿರಿಸಿಕೊಂಡು ಸುಮಾರು 3 ಸಾವಿರ ಮಂದಿ ಹಾದಿಯುದ್ದಕ್ಕೂ ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆಗೈಯುತ್ತ, ದೇಶ ಭಕ್ತಿಗೀತೆಯ ಗಾಯನದೊಂದಿಗೆ ಹೆಜ್ಜೆಹಾಕಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.