ಕೊಂಕಣಿ ಸಮಾಜದ ಸುಮಂಗಲಿಯರಿಗೆ ಚೂಡಿ ಪೂಜೆ ಸಂಭ್ರಮ

Team Udayavani, Aug 12, 2018, 10:33 AM IST

12-agust-4.jpg

ಈಶ್ವರಮಂಗಲ: ಜಿಎಸ್‌ಬಿ ಸಮಾಜದಲ್ಲಿ ಶ್ರಾವಣ ಮಾಸಕ್ಕೆ ವಿಶೇಷ ಸ್ಥಾನಮಾನವಿದೆ. ಶ್ರಾವಣ ಮಾಸ ಹಬ್ಬಗಳ ಹೆಬ್ಟಾಗಿಲನ್ನೇ ತೆರೆಯುತ್ತದೆ. ಈ ವರ್ಷ ಶ್ರಾವಣ ಮಾಸ ರವಿವಾರ ಪ್ರಾರಂಭವಾಗುತ್ತಿದ್ದು, ಚೂಡಿ ಪೂಜೆಯ ಸಂಭ್ರಮ ದ್ವಿಗುಣಗೊಳಿಸಿದೆ. 

ಜಿಎಸ್‌ಬಿ ಸಮಾಜದ ಸುಮಂಗಲಿಯರು ಶ್ರಾವಣ ಮಾಸದಲ್ಲಿ ರವಿವಾರ-ಶುಕ್ರವಾರ ಚೂಡಿ ಪೂಜೆ ಆಚರಿಸುತ್ತಾರೆ. ರಕ್ಕಸ ದೊರೆ ಜಲಂಧರನ ಪತ್ನಿ ವೃಂದಾ ಪತಿವ್ರತೆಯಾಗಿದ್ದಳು. ವಿಷ್ಣುವಿನ ಪರಮ ಭಕ್ತೆ. ಜಲಂಧರನಿಂದ ದೇವತೆಗಳನ್ನು ರಕ್ಷಿಸಲು ವಿಷ್ಣು ಅವಕಾಶಕ್ಕಾಗಿ ಕಾಯುತ್ತಿರುತ್ತಾನೆ. ಜಲಂಧರ ಸಾಯಬೇಕಾದರೆ ವೃಂದಾಳ ಪಾತಿವ್ರತ್ಯಕ್ಕೆ ಧಕ್ಕೆ ಬರಬೇಕು. ಹೀಗಾಗಿ, ಜಲಂಧರ ಯುದ್ಧಕ್ಕೆ ತೆರಳಿದ್ದ ಸಂದರ್ಭದಲ್ಲಿ ವಿಷ್ಣು ಆತನ ರೂಪದಲ್ಲಿ ವೃಂದಾಳ ಬಳಿಗೆ ಬರುತ್ತಾನೆ. ತನ್ನ ಗಂಡನೆಂದು ನಂಬಿ ವೃಂದಾ ವಿಷ್ಣುವನ್ನು ಕೂಡುತ್ತಾಳೆ. ಯುದ್ಧಭೂಮಿಯಲ್ಲಿ ಜಲಂಧರ ಸಾಯುತ್ತಾನೆ. ಪತಿಯ ಸಾವಿನಿಂದ ದುಃಖೀತಳಾದ ವೃಂದಾ ಮತ್ತೆ ಪಾತಿ ವ್ರತ್ಯ ಕೊಡಿಸುವಂತೆ ವಿಷ್ಣುವಿನ ಮೊರೆ ಹೋಗುತ್ತಾಳೆ. ಶ್ರಾವಣ ಮಾಸದಲ್ಲಿ ವಿವಿಧ ಹೂವುಗಳನ್ನು ನಾರಿನಿಂದ ಕಟ್ಟಿ ತುಳಸಿಗೆ ಅರ್ಪಿಸಿ, ತುಳಸೀ ದೇವಿಯನ್ನು ಪೂಜಿಸುವಂತೆ ವೃಂದಾಗೆ ತಿಳಿಸುತ್ತಾನೆ. ತುಳಸೀಯನ್ನು ಪೂಜಿಸಿ ವೃಂದಾ ಪವಿತ್ರಳಾಗುವ ಕಥೆಯೇ ಚೂಡಿ ಪೂಜೆಗೆ ಹಿನ್ನೆಲೆ.

ಚೂಡಿ ಪೂಜೆಯ ಅನಂತರ ಮೊದಲ ಚೂಡಿಯನ್ನು ಗಂಡನಿಗೆ ನೀಡಿ ಕಾಲಿಗೆರಗಿ ಆಶೀರ್ವಾದ ಬೇಡುತ್ತಾಳೆ. ಶ್ರಾವಣ ಮಾಸದ ಮೊದಲ ಚೂಡಿ ಪೂಜೆಗೆ ಗಂಡ ಉಡುಗೊರೆ ಕೊಡುವ ಸಂಪ್ರದಾಯವೂ ಇದೆ. ಆನಂತರ ಮನೆಯಲ್ಲಿರುವ ಹಿರಿಯರ ಆಶೀರ್ವಾದ ಪಡೆಯುತ್ತಾಳೆ. ನವವಿವಾಹಿತರಿಗೆ ಮೊದಲ ಚೂಡಿ ಪೂಜೆ ಸಂಭ್ರಮಕ್ಕೆ ಸಾಕ್ಷಿಯಾಗುತ್ತದೆ. ಗಂಡನ ಮನೆಯ ಸಂಬಂಧಿಕರು ಸೇರಿ ಚೂಡಿ ಪೂಜೆಯನ್ನು ಮಾಡಿ ಸಂಭ್ರಮಿಸಿದರೆ, ಉಳಿದ ದಿನಗಳ ಚೂಡಿ ಪೂಜೆಯನ್ನು ತವರು ಮನೆಯಲ್ಲಿ ಮಾಡುತ್ತಾಳೆ. ಕೊನೆಯಲ್ಲಿ ಅಳಿಯ, ಮಗಳಿಗೆ ತವರು ಮನೆಯವರು ಚೂಡಿ ಪೂಜೆಯ ಉಡುಗೊರೆ ನೀಡುತ್ತಾರೆ. ದೂರದ ಊರಿನಲ್ಲಿರುವ ಸಂಬಂಧಿಕರಿಗೆ ಅಂಚೆಯ ಮೂಲಕ ಚೂಡಿಯನ್ನು ಕಳುಹಿಸುವ ಕ್ರಮವೂ ಇದೆ.

ಚೂಡಿ ಪೂಜೆಯ ತಯಾರಿ
ಶ್ರಾವಣ ಮಾಸದ ಪ್ರತಿ ರವಿವಾರ, ಶುಕ್ರವಾರ ಸುಮಂಗಲಿಯರು ಚೂಡಿ ಪೂಜೆಯನ್ನು ಮಾಡುತ್ತಾರೆ. ಈ ಪೂಜೆಗೆ ಗರಿಕೆ ಹುಲ್ಲು ಅತ್ಯಗತ್ಯ. ಆರತಿ , ಬೆಕ್ಕಿನ ಉಗುರು ಹಾಗೂ ಕುದುರೆ ಕಾಲನ್ನು ಹೋಲುವ ಸಸ್ಯ ಗಳು, ನೀರು ಕಡ್ಡಿ, ಅರಳಿ ಗಿಡ ಹಾಗೂ ಹಿತ್ತಿಲಲ್ಲಿ ಸಿಗುವ ಯಾವುದಾದರೂ ಐದು ಹೂವುಗಳನ್ನು ಸೇರಿಸಿ ಚೂಡಿಯನ್ನು ತಯಾರಿಸುತ್ತಾರೆ. ಪೂಜಿಸಲು ಬೆಸ ಸಂಖ್ಯೆಯಲ್ಲಿ ಚೂಡಿ ಬಳಸುತ್ತಾರೆ. ಔಷಧೀಯ ಗುಣವುಳ್ಳ ಚೂಡಿಯನ್ನು ತಲೆಯಲ್ಲಿ ಧರಿಸುವುದರಿಂದ ಶರೀರದ ಉಷ್ಣತೆ ಕಮ್ಮಿಯಾಗುತ್ತದೆ. ಸಮತೋಲನ ಸಾಧ್ಯವಾಗುತ್ತದೆ. ಭಕ್ತಿಯಿಂದ ಚೂಡಿ ಪೂಜೆ ಆಚರಿಸಿದರೆ ಆಧ್ಯಾತ್ಮಿಕ ಶಕ್ತಿ ಹೆಚ್ಚುತ್ತದೆ ಎಂಬುದು ಹಿರಿಯರ ಅಭಿಪ್ರಾಯ.

ಪೂಜೆಯ ವಿಧಾನ
ಮನೆ ಹಾಗೂ ತುಳಸೀ ಕಟ್ಟೆಯನ್ನು ಸ್ವಚ್ಛಗೊಳಿಸಿ ಸುಮಂಗಲಿಯರು ತಲೆಗೆ ಸ್ನಾನ ಮಾಡಿ, ಬಾವಿಯಿಂದ ನೀರು ತಂದು ತುಳಸೀ ಕಟ್ಟೆ ಸುತ್ತ ಮಾವಿನ ಎಲೆಯಿಂದ ಪ್ರೋಕ್ಷಣೆ ಮಾಡುತ್ತಾರೆ. ತುಳಸಿಗೆ ಅರಿಸಿನ, ಕುಂಕುಮ ಹಚ್ಚಿ, ಚೂಡಿಯನ್ನಿಟ್ಟು, ಹಣ್ಣುಕಾಯಿ, ನೈವೇದ್ಯ ಮಾಡಿ, ಆರತಿ ಎತ್ತಿ ಪೂಜೆ ಮಾಡುತ್ತಾರೆ. ಒಂದು ಚೂಡಿಯನ್ನು ತುಳಸಿ ಕಟ್ಟೆಗೆ ಹಾಗೂ ಸೂರ್ಯದೇವರಿಗೆ ಸಮರ್ಪಿಸುತ್ತಾರೆ. ಮನೆಯಲ್ಲಿರುವ ಎಲ್ಲ ಹೊಸ್ತಿಲುಗಳನ್ನು ರಂಗೋಲಿಯಿಂದ ಸಿಂಗರಿಸಿ, ಆರತಿ ಬೆಳಗಿ, ಚೂಡಿ ಇಟ್ಟು, ಅಕ್ಷತೆ ಹಾಕಿ ನಮಿಸುತ್ತಾರೆ. ದೇವರ ಕೋಣೆಯಲ್ಲಿ ದೇವರಿಗೆ ಚೂಡಿ ಇಟ್ಟು ಪೂಜಿಸುತ್ತಾರೆ.

ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.